ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ರಾಜ್ಯದಲ್ಲಿ ಕೇಕೆ ಹಾಕುತ್ತಿರುವ ಕೊರೋನಾ ಸೋಂಕನ್ನು ತಡೆಯುವ ನಿಟ್ಟಿನಲ್ಲಿ ತತಕ್ಷಣದಿಂದಲೇ ಜಾರಿಗೆ ಬರುವಂತೆ ಕನಿಷ್ಠ 15 ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ಕೊರೋನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ನಡೆದ ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಅವರು, ನೈಟ್ ಕರ್ಫ್ಯೂ ಹಾಕುವುದರಿಂದ ಯಾವುದೇ ರೀತಿಯ ಪ್ರಯೋಜನವಿಲ್ಲ. ಬದಲಾಗಿ, ತತಕ್ಷಣದಿಂದಲೇ ಜಾರಿಗೆ ಬರುವಂತೆ ಕನಿಷ್ಠ 15 ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಿ. ಕಠಿಣ ನಿಯಮಗಳನ್ನು ಜಾರಿಗೆ ತನ್ನಿ ಎಂದು ಸಲಹೆ ನೀಡಿದ್ದಾರೆ.
ರಾಜ್ಯ ಆರ್ಥಿಕ ಪರಿಸ್ಥಿತಿಯೇನೂ ದೀವಾಳಿಯಾಗಿಲ್ಲ. ಇಂತಹ ಕ್ಲಿಷ್ಟ ಪರಿಸ್ಥಿತಿಯಲ್ಲಿ ಲಾಕ್ ಮಾಡುವುದು ಅನಿವಾರ್ಯವಾಗಿದೆ. ಇದೇ ವೇಳೆ ಬಡವರಿಗೆ ತೊಂದರೆಯಾಗದ ರೀತಿಯಲ್ಲೂ ಸಹ ಕ್ರಮಗಳನ್ನು ಕೈಗೊಳ್ಳಿ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post