ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಶಿವಮೊಗ್ಗ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜ್‍ನಲ್ಲಿ ನಡೆಯುತ್ತಿದ್ದ ಕೋವಿಡ್ -19 ಲಸಿಕೆ ನೀಡುವ ಕಾರ್ಯಕ್ರಮವನ್ನು ಏ.22 ರಿಂದ ನಗರದ ಕುವೆಂಪು ರಸ್ತೆಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸಾರ್ವಜನಿಕರು ತಮ್ಮ ಗುರುತಿನ ಚೀಟಿಯೊಂದಿಗೆ ನಗರದ ಕುವೆಂಪು ರಸ್ತೆಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಲಸಿಕೆ ಪಡೆಯುವಂತೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post