ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಬಾಳೆಬರೆ ಘಾಟ್‌ನ ಎರಡು ಭಾಗದಲ್ಲಿ 1500 ಮೀ ಕಾಂಕ್ರೀಟ್ ಪೇವ್‌ಮೆಂಟ್ ಕಾಮಗಾರಿ ಆರಂಭಿಸುವುದರಿಂದ ಈ ರಸ್ತೆಯ ಮೂಲಕ ವಾಹನಗಳ ಸಂಚಾರವನ್ನು ದಿ: 22.4.2021 ರಿಂದ ದಿ: 5.6.2021 ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥೆಯನ್ನು ಮಾಡಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಆದೇಶಿಸಿದ್ದಾರೆ.

ರಾ.ಹೆ.-52 ರಿಂದ ತೀರ್ಥಹಳ್ಳಿ ಮೂಲಕ ಕುಂದಾಪುರಕ್ಕೆ ಹೋಗುವ ಲಘು ಹಾಗೂ ಮಧ್ಯಮ ವಾಹನಗಳು ತೀರ್ಥಹಳ್ಳಿ-ಕಾನಗೋಡು-ನಗರ-ಕೊಲ್ಲೂರು-ಕುಂದಾಪುರ ರಸ್ತೆ, ತೀರ್ಥಹಳ್ಳಿ-ಯಡೂರು-ಹುಲಿಕಲ್ ಕುಂದಾಪುರಕ್ಕೆ ಹೋಗುವ ಲಘು ಹಾಗೂ ಮಧ್ಯಮ ವಾಹನಗಳು ತೀರ್ಥಹಳ್ಳಿ-ಯಡೂರು-ಮಾಸ್ತಿಕಟ್ಟೆ-ನಗರ-ಕೊಲ್ಲೂರು-ಕುಂದಾಪುರ ರಸ್ತೆ, ಶಿವಮೊಗ್ಗ/ಸಾಗರ ಕಡೆಯಿಂದ ಹೊಸನಗರದ ಮೂಲಕ ಕುಂದಾಪುರಕ್ಕೆ ಹೋಗುವ ವಾಹನಗಳು ಹೊಸನಗರ-ನಗರ-ಕೊಲ್ಲೂರು-ಕುಂದಾಪುರ ರಸ್ತೆ, ಶಿವಮೊಗ್ಗ, ಸಾಗರ ಹಾಗೂ ತೀರ್ಥಹಳ್ಳಿ ಕಡೆಯಿಂದ ಕುಂದಾಪುರಕ್ಕೆ ಹೋಗುವ ಭಾರಿ ಪ್ರಮಾಣದ ವಾಹನಗಳು ಬಟ್ಟೆಮಲ್ಲಪ್ಪ-ಸಾಗರ-ಗೇರುಸೊಪ್ಪ-ಹೊನ್ನಾವರ-ಕುಂದಾಪುರ ರಸ್ತೆಯ ಮೂಲಕ ಸಂಚರಿಸುವಂತೆ ಅದೇಶದಲ್ಲಿ ತಿಳಿಸಿರುತ್ತಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















