ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕೊರೋನಾ ಪ್ರಕರಣಗಳು ಪ್ರತಿದಿನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಪರಿಶ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಇಂದಿನಿಂದ ಮೇ.4ರವರೆಗೆ ಅಗತ್ಯ ಸೇವೆ ಹೊರತುಪಡಿಸಿ ಮಿಕ್ಕೆಲ್ಲವನ್ನೂ ಬಂದ್ ಮಾಡುವಂತೆ ತಿಳಿಸಿದೆ ಎಂದು ತಿಳಿದುಬಂದಿದೆ.
ಮೊಬೈಲ್ ಶಾಪ್, ಟಿವಿ, ಎಲೆಕ್ಟ್ರಾನಿಕ್ ಶೋ ರೂಮ್, ಬ್ಯಾಂಗಲ್ಸ್ ಸ್ಟೋರ್, ಚಿನ್ನದ ಅಂಗಡಿ, ಬುಕ್ ಶಾಪ್, ಚಪ್ಪಲಿ ಅಂಗಡಿಗಳು, ಫ್ಯಾನ್ಸಿ ಸ್ಟೋರ್, ಬಟ್ಟೆ ಅಂಗಡಿಗಳು ಸೇರಿ ಎಲ್ಲವನ್ನೂ ಬಂದ್ ಮಾಡಲು ನಿರ್ದೇಶನ ನೀಡಲಾಗಿದೆ ಎನ್ನಲಾಗಿದೆ.
ಹೋಟೆಲ್, ರೆಸ್ಟೋರೆಂಟ್, ಬಾರ್ಗಳಲ್ಲಿ ಪಾರ್ಸಲ್ ತರಲಷ್ತೇ ಅವಕಾಶವಿದೆ. ಆಟೋ, ಬಸ್, ಮೆಟ್ರೋ ಸೇವೆಗಳು ಲಭ್ಯವಾಗಲಿದ್ದು, ಬ್ಯಾಂಕ್, ಎಟಿಎಂ, ಇನ್ಶ್ಯೂರೆನ್ಸ್ ಕಂಪನಿ, ಪೇಪರ್, ಟಿವಿ ಸೇರಿದಂತೆ ವಿವಿಧ ಮೀಡಿಯಾ ಸಂಸ್ಥೆಗಳು, ಇ-ಕಾಮರ್ಸ್ ಸೇವೆ, ಕಾಸಗಿ ಸೆಕ್ಯೂರಿಟಿ, ಕಟಿಂಗ್ ಶಾಪ್, ಬ್ಯೂಟಿ ಪಾರ್ಲರ್ಗಳಿಗೆ ಅನುಮತಿಸಲಾಗಿದೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post