ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಸಚಿವ ಕೆ.ಎಸ್. ಈಶ್ವರಪ್ಪ ಅವರು ಹೊಸಮನೆ, ಅಶ್ವಥ ನಗರದ 15ನೆಯ ವಾರ್ಡ್ ಬಿಜೆಪಿ ಅಭ್ಯರ್ಥಿ ಕಲಾವತಿ ನಾರಾಯಣಪ್ಪ ಪರ ಪ್ರಚಾರ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ತಾಲೂಕಿನ ಸಮಗ್ರ ಅಭಿವೃದ್ಧಿಗೆ ಬದ್ಧರಾಗಿರುವುದಾಗಿ ಭರವಸೆ ನೀಡಿದರು.
ಜೈಶ್ರೀರಾಮ್ ಘೋಷಣೆ ಮಾಡಿದ ಕಾರಣಕ್ಕಾಗಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದರು. ಅವರಿಗೆ ಜೈಲಿನ ದಾರಿ ತೋರಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಹಾಗೆಯೇ ಇನ್ನು ಮುಂದೆಯೂ ಸಹ ಹಿಂದೂತ್ವದ ವಿಷಯದ ವಿರುದ್ಧವಾಗಿ ಮಾತನಾಡಿದರೆ ನಾವು ಸುಮ್ಮನಿರುವುದಿಲ್ಲ ಎಂದು ಹೇಳಿದರು.
ತಾಲೂಕಿನಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ಮಾದರಿ ನಗರವನ್ನಾಗಿಸಲು ಬಿಜೆಯನ್ನು ಬೆಂಬಲಿಸಿ ನಮ್ಮ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ ಎಂದು ಕಲಾವತಿ ನಾರಾಯಣಪ್ಪ ಪರ ಮತಯಾಚಿಸಿದರು. ವ್ಯಕ್ತಿಗೂ ಬೆಲೆ ಕೊಡುವ ದೃಷ್ಟಿಯಿಂದ ಪ್ರತಿಯೊಬ್ಬ ಕಾರ್ಯಕರ್ತನಿಗೂ ಬೆಂಬಲ ನೀಡಲಿದ್ದು, ಭದ್ರಾವತಿಯಲ್ಲಿ ಅಭಿವೃದ್ಧಿ ಕಾರ್ಯಗಳು ಸರಾಗವಾಗಿ ಸಾಗಲು ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post