ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕೊರೋನಾ ಹರಡುವುದನ್ನ ನಿಯಂತ್ರಿಸಲು ರಾಜ್ಯ ಸರ್ಕಾರ ನೈಟ್ ಕರ್ಫ್ಯೂ, ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ, ನಿಷೇಧಾಜ್ಞೆಯಂತಹ ಕಠಿಣ ಕ್ರಮಗಳನ್ನು ಈಗಾಗಲೇ ಜಾರಿಗೊಳಿಸದ್ದರೂ, ಸಾರ್ವಜನಿಕರು ಸಂಚಾರ ಕಡಮೆಯಾಗಿಲ್ಲ. ಇದನ್ನು ತಡೆಯಲು ವಾರಪೂರ್ತಿ ಕರ್ಫ್ಯೂ ಜಾರಿ ಮಾಡಲು ಸರ್ಕಾರ ಯೋಜನೆ ರೂಪಿಸುತ್ತಿದೆ ಎಂದು ಮುಖ್ಯ ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ.
ಕೊರೋನಾ ಸೋಂಕಿನಿಂದ ಜನ ಸಾಯುತ್ತಿದ್ದರೂ ಕೆಲವರಿಗೆ ಚಿಂತೆಯಿಲ್ಲ. ಆರಾಮಾಗಿ ಓಡಾಡಿಕೊಂಡಿದ್ದಾರೆ, ವಾರವಿಡೀ ಕರ್ಫ್ಯೂ ಜಾರಿ ಮಾಡುವುದು ಬೇಡ ಎಂದರೂ ಸಾರ್ವಜನಿಕರು ಮಾತ್ರ ಸರ್ಕಾರದ ನಿಯಮಗಳನ್ನು ಅನುಸರಿಸುತ್ತಿಲ್ಲ ಎಂದು ಹೇಳಿದ್ದಾರೆ.
ಇದೇ ರೀತಿ ಸಾರ್ವಜನಿಕರ ವರ್ತನೆ ಮುಂದುವರೆದರೆ, ವಾರದ ಎಲ್ಲಾ ದಿನ ಲಾಕ್‌ಡೌನ್ ಮಾಡುವ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಪರಿಸ್ಥಿತಿ ಮತ್ತಷ್ಟು ಕೈಮೀರಿ ಹೋದರೆ ವಿಧಿ ಇಲ್ಲದೆ ಲಾಕ್ ಡೌನ್ ಮಾಡಬೇಕಾಗುತ್ತದೆ. ಈ ಬಗ್ಗೆ ಸೋಮವಾರ ಸಂಪುಟ ಸಭೆ ನಡೆಯಲಿದ್ದು, ವಾರಪೂರ್ತಿ ಕರ್ಫ್ಯೂ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post