ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ರಾಜ್ಯದಲ್ಲಿ 14 ದಿನಗಳ ಕಾಲ ಕೋವಿಡ್ ಕರ್ಫ್ಯೂ ಘೋಷಣೆ ಮಾಡಿದ್ದರೂ ಎಪ್ರಿಲ್ 27ರ ನಾಳೆ ನಿಗದಿಯಾಗಿರುವ ನಗರಸಭೆ ಚುನಾವಣೆಗಳು ನಡೆಯಲಿವೆ ಎಂದು ವರದಿಯಾಗಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಮೂಲಗಳ ಮಾಹಿತಿಯಂತೆ, ನಾಳೆ ರಾತ್ರಿಯಿಂದ ಮೇ 10ರವರೆಗೂ ಜನತಾ ಕರ್ಫ್ಯೂ ಘೋಷಣೆ ಮಾಡಲಾಗಿದೆ. ಇದೇ ವೇಳೆ ರಾಜ್ಯದಲ್ಲಿ ಮುಂದಿನ ಆರು ತಿಂಗಳುಗಳ ಕಾಲ ನಡೆಯಬೇಕಿರುವ ಎಲ್ಲ ಚುನಾವಣೆಗಳನ್ನು ಮುಂದೂಡಲು ಆಯೋಗಕ್ಕೆ ಶಿಫಾರಸ್ಸು ಮಾಡಲಾಗಿದೆ. ಆದರೆ, ಎ.27ರ ನಾಳೆ ನಿಗದಿಯಾಗಿರುವ ನಗರಸಭೆ ಚುನಾವಣೆಯು ವೇಳಾಪಟ್ಟಿಯಂತೆ ನಡೆಯಲಿದ್ದು, ಇದರಲ್ಲಿ ಯಾವುದೇ ರೀತಿಯ ಬದಲಾವಣೆಯಿರುವುದಿಲ್ಲ ಎಂದು ತಿಳಿದುಬಂದಿದೆ.
ಆದರೂ ಈ ಕುರಿತಂತೆ ಇನ್ನೂ ಗೊಂದಲಗಳಿದ್ದು, ಸಂಜೆ ವೇಳೆಗೆ ರಾಜ್ಯ ಸರ್ಕಾರ ಸ್ಪಷ್ಟ ಮಾಹಿತಿ ಬಿಡುಗಡೆ ಮಾಡಲಿದೆ ಎಂದೂ ಸಹ ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















