ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ರಾಜ್ಯ ಸರ್ಕಾರ ನಾಳೆ ರಾತ್ರಿ 9 ಗಂಟೆಯಿಂದ ಜನತಾ ಕರ್ಫ್ಯೂ ಘೋಷಿಸಿದ್ದರೂ ಭದ್ರಾವತಿ ಹಾಗೂ ತೀರ್ಥಹಳ್ಳಿ ಚುನಾವಣೆಗಳು ನಾಳೆ ನಡೆಯಲಿವೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತಂತೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಅವರು, ಈವರೆಗೂ ರಾಜ್ಯ ಸರ್ಕಾರದಿಂದ ನಮಗೆ ಯಾವುದೇ ರೀತಿಯ ಅಧಿಕೃತ ಆದೇಶ ಅಥವಾ ಸೂಚನೆಗಳು ಬಂದಿಲ್ಲ. ಹೀಗಾಗಿ, ನಿಗದಿಯಾಗಿರುವಂತೆ ಭದ್ರಾವತಿ ನಗರಸಭೆ ಹಾಗೂ ತೀರ್ಥಹಳ್ಳಿ ಪಟ್ಟಣ ಪಂಚಾಯ್ತಿ ಚುನಾವಣೆಗಳು ನಾಳೆ ನಡೆಯಲಿವೆ. ಒಂದು ವೇಳೆ ಸಂಜೆ ವೇಳೆಗೆ ನಿರ್ದೇಶನಗಳೇದರೂ ಬಂದಲ್ಲಿ ಮಾಹಿತಿ ಪ್ರಕಟಿಸಲಾಗುವುದು ಎಂದರು.

ಇನ್ನು, ಎ.30ರಂದು ಮತ ಎಣಿಕೆ ನಡೆಯಬೇಕಿರುವ ಮತ ಎಣಿಕೆ ಕಾರ್ಯದ ಬಗ್ಗೆ ಸ್ಪಷ್ಟನೆ ನೀಡದ ಜಿಲ್ಲಾಧಿಕಾರಿಗಳು ರಾಜ್ಯ ಸರ್ಕಾರದ ಆದೇಶ ಪ್ರತಿ ತಲುಪಿದ ನಂತರ ತಿಳಿಸಲಾಗುವುದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















