ಕಲ್ಪ ಮೀಡಿಯಾ ಹೌಸ್
ಚಳ್ಳಕೆರೆ: ಇಲಾಖೆಯಲ್ಲಿ ಒಬ್ಬರಿಗೊಬ್ಬರು ಪರಸ್ಪರ ಹೊಂದಾಣಿಕೆಯಿಂದ ಕೆಲಸ ಮಾಡುವ ಮೂಲಕ ನಗರವನ್ನು ಮತ್ತಷ್ಟು ಅಭಿವೃದ್ಧಿಪಡಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ ಅಧಿಕಾರಿಗಳು ಹಾಗೂ ನಗರಸಭೆ ಆಡಳಿತ ಮಂಡಳಿ ಸದಸ್ಯರಿಗೆ ಕಿವಿಮಾತು ಹೇಳಿದರು.
ನಗರಸಭೆ ಸದಸ್ಯರ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಸಣ್ಣ ಪುಟ್ಟ ಘಟನೆಯನ್ನು ತಕ್ಷಣವೇ ಮರೆತು ಬಿಡಬೇಕೆ ಹೊರತು, ಅದರಿಂದ ಯಾವುದೇ ದ್ವೇಷ ಅಸೂಯೆ ಭಾವನೆಯನ್ನು ಬೆಳೆಸಿಕೊಳ್ಳಬಾರದು. ಮತ್ತು ಅಭಿವೃದ್ಧಿ ಕೆಲಸದಲ್ಲಿ ಯಾವುದೇ ಗೊಂದಲದ ಸೃಷ್ಟಿ ಮಾಡಬಾರದು ಎಂದು ಸಲಹೆ ನೀಡಿದರು.
ಜನ ಸಾಮಾನ್ಯರಿಗೆ ಸ್ಪಂದಿಸುತ್ತಿಲ್ಲ. ಪೌರಕಾರ್ಮಿರಿಗೆ ವೇತನ ವಿಳಂಬ, ತೆರಿಗೆ ಪಾವತಿಸಿದವರಿಗೆ ರಸೀದಿ ನೀಡದಿರುವುದು ಗಮನಕ್ಕೆ ಬಂದಿರುವ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಪ್ರತಿ ತಿಂಗಳು ಸಾಮಾನ್ಯ ಸಭೆಯಲ್ಲಿ ಚರ್ಚಿಸಿದ ವಿಷಯಗಳು ಕಾರ್ಯ ರೂಪಕ್ಕೆ ತರಬೇಕು. ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಸ ವಿಲೇವಾರಿ, ರಸ್ತೆ, ಚರಂಡಿ ಸ್ವಚ್ಚತೆ ಹಾಗೂ ಶುದ್ಧ ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ವಿಭಾಗಾಧಿಕಾರಿ ಪ್ರಸನ್ನ ಮಾತನಾಡಿ, ಮಹಿಳೆಯರಿಗೆ ಹೆಚ್ಚಿನ ಗೌರವ ನೀಡಬೇಕು ಮತ್ತು ಜನರ ಕೆಲಸ ಮಾಡಿಕೊಡುವಲ್ಲಿ ಉದಾಸೀನ ಮಾಡಬಾರದು. ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದರೆ ಜನರು ನಮ್ಮನ್ನು ಗುರುತಿಸುತ್ತಾರೆ ಎಂದು ಹೇಳಿದರು.
ನಗರಸಭೆ ಸದಸ್ಯ ಕೆ.ವೀರಭದ್ರಯ್ಯ, ಜಯಣ್ಣ ಮಾತನಾಡಿದರು. ನಗರಸಭೆ ಸದಸ್ಯರಾದ ವೈ. ಪ್ರಕಾಶ, ಮಂಜುಳ, ನಿರ್ಮಲ, ಪ್ರಮೋದ್, ಶ್ರೀನಿವಾಸ, ರುದ್ರನಾಯಕ, ಜಯಣ್ಣ , ಉಪವಿಭಾಗಾಧಿಕಾರಿ ಪ್ರಸನ್ನ, ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ, ನಗರಸಭೆ ಅಧ್ಯಕ್ಷೆ ಸಿ.ಬಿ. ಜಯಲಕ್ಷ್ಮೀ, ಉಪಾಧ್ಯಕ್ಷೆ ಜೈತುನ್ಬಿ, ಪೌರಾಯುಕ್ತ ಪಾಲಯ್ಯ, ಇದ್ದರು.
ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post