Read - < 1 minute
ಬೆಂಗಳೂರು: ಸೆ:25; ಮಾಜಿ ಸಚಿವ ಕೆ.ಜೆ.ಜಾರ್ಜ್ಅವರು ನಾಳೆ ಬೆಳಿಗ್ಗೆ 10.15ಕ್ಕೆ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ರಾಜಭವನದ ಬಾಂಕ್ವೆಟ್ ಹಾಲ್ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲ ವಿ.ಆರ್.ವಾಲಾ ಅವರು ಅಧಿಕಾರ ಹಾಗೂ ಗೌಪ್ಯತಾ ಪ್ರಮಾಣ ವಚನವನ್ನು ಬೋಧಿಸಲಿದ್ದಾರೆ.
ಕೆ.ಜೆ.ಜಾರ್ಜ್ ಅವರಿಗೆ ಸಂಪುಟ ದಜರ್ೆ ಸಚಿವ ಸ್ಥಾನ ದೊರೆಯಲಿದ್ದು , ಮತ್ತೆ ಬೆಂಗಳೂರು ನಗರಾಭಿವೃದ್ದಿ ಖಾತೆಯನ್ನೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಬೆಂಗಳೂರು ನಗರದ ಉಸ್ತುವಾರಿ ಸಚಿವರ ಸ್ಥಾನವೂ ಕೂಡ ಜಾರ್ಜ್ ಅವರಿಗೆ ದೊರೆಯಲಿದೆ ಎಂದು ಮೂಲಗಳು ತಿಳಿಸಿವೆ.
ಡಿವೈಎಸ್ಪಿ ಗಣಪತಿ ಆತ್ಮಹತ್ಯೆಗೂ ಮುನ್ನ ಜಾರ್ಜ್ ವಿರುದ್ಧ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆರೋಪದ ಬಗ್ಗೆ ತನಿಖೆ ನಡೆಸಿದ ಸಿಐಡಿ ಕ್ಲೀನ್ಚಿಟ್ ನೀಡಿರುವ ಹಿನ್ನೆಲೆಯಲ್ಲಿ ಮತ್ತೆ ಜಾರ್ಜ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ.
Discussion about this post