ಕಲ್ಪ ಮೀಡಿಯಾ ಹೌಸ್
ಮಂತ್ರಾಲಯ: ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಮಂತ್ರಾಲಯವನ್ನು ಲಾಕ್ ಡೌನ್ ಮಾಡಲಾಗಿದೆ.
ಈ ಕುರಿತಂತೆ ಅಲ್ಲಿನ ಪಂಚಾಯ್ತಿ ಸಭೆಯಲ್ಲಿ ತೀರ್ಮಾನ ಕೈಗೊಂಡು, ಇಡಿಯ ಮಂತ್ರಾಲಯವನ್ನು ಲಾಕ್ ಡೌನ್ ಮಾಡಲಾಗಿದ್ದು, ಹೊರಗಿನ ಯಾರಿಗೂ ಪ್ರವೇಶವಿಲ್ಲ ಎಂದು ತಿಳಿಸಲಾಗಿದೆ.
ಇನ್ನು, ಈ ಕುರಿತಂತೆ ರಾಘವೇಂದ್ರ ಸ್ವಾಮಿಗಳ ಮಠದಿಂದ ಪ್ರಕಟಣೆ ಹೊರಡಿಸಲಾಗಿದ್ದು, ಮೇ 1ರಿಂದ ಜಾರಿಗೆ ಬರುವಂತೆ ಶ್ರೀಮಠಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಸರ್ಕಾರದ ಸೂಚನೆಯ ಹಿನ್ನೆಲೆಯಲ್ಲಿ ಶ್ರೀಮಠಕ್ಕೆ ಭಕ್ತರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಬರ್ಂಧಿಸಲಾಗಿದ್ದು, ಯಾರಿಗೂ ರಾಯರ ಪ್ರತ್ಯಕ್ಷ ದರ್ಶನ, ತೀರ್ಥಪ್ರಸಾದಗಳು ಇರುವುದಿಲ್ಲ. ಆದರೆ, ಎಂದಿನಂತೆ ಅಭಿಶೇಷ, ರಥೋತ್ಸವ ಸೇರಿದಂತೆ ಪೂಜಾ ವಿಧಿ ವಿಧಾನಗಳು ನಡೆಯಲಿದ್ದು, ಭಕ್ತರು ಆನ್ ಲೈನ್ ಮೂಲಕ ವೀಕ್ಷಿಸಬಹುದಾಗಿದೆ ಎಂದು ಶ್ರೀಮಠ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post