ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ನಾಳೆಯಿಂದ ರಾಜ್ಯದಾದ್ಯಂತ ಪ್ರತಿದಿನ ಮಧ್ಯಾಹ್ನ 12 ಗಂಟೆಯವರೆಗೂ ಎಪಿಎಂಸಿ ಹಾಗೂ ದಿನಸಿ ಅಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದ್ದು, ಮಾರುಕಟ್ಟೆಯಲ್ಲಿ ಆಗುತ್ತಿರುವ ನೂಕುನುಗ್ಗಲನ್ನು ತಪ್ಪಿಸುವ ಸಲುವಾಗಿ ಮೇ 2ರಿಂದ ಜಾರಿಗೆ ಬರುವಂತೆ ಬೆಳಗ್ಗೆ 6ರಿಂದ ಸಂಜೆ 6 ಗಂಟೆಯವರೆಗೂ ಹಾಪ್ ಕಾಮ್ಸ್, ಹಾಲಿನ ಬೂತ್, ತಳ್ಳುವ ಗಾಡಿ ಮೂಲಕ ಹಣ್ಣು-ತರಕಾರಿ ವ್ಯಾಪಾರವನ್ನು ಮಾಡಬಹುದಾಗಿದೆ. ಆದರೆ, ಮಾರುಕಟ್ಟೆ ದರಕ್ಕೆ ಮಾತ್ರ ಮಾರಾಟ ಮಾಡಬೇಕಿದ್ದು, ಬೆಲೆಯನ್ನು ಹೆಚ್ಚಿಸುವಂತಿಲ್ಲ ಎಂದು ತಿಳಿಸಲಾಗಿದೆ.
ಇನ್ನು, ನಾಳೆಯಿಂದ ಬೆಳಗ್ಗೆ 6ರಿಂದ ಮಧ್ಯಾಹ್ನ 12 ಗಂಟೆಯವರೆಗೂ ಎಪಿಎಂಸಿ ಹಾಗೂ ದಿನಸಿ ಅಂಗಡಿಗಳನ್ನು ತೆರೆಯಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post