ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ನಗರದ ಮೊಟ್ಟ ಮೊದಲ ಶಾಸಕ ಮಾಧವಾಚಾರ್ ಸೊಸೆ, ಖ್ಯಾತ ವೈದ್ಯ ದಿ.ಮುಕುಂದ್ ಅವರ ಪತ್ನಿ ವಸುಧಾ ಮುಕುಂದ್(63) ಅವರು ವಿಧಿವಶರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಸಂಜೆ 7.30 ಗಂಟೆ ವೇಳೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ವಸುಧಾ ಅವರು ಮೂವರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ವಿಪ್ರ ಸಮುದಾಯದ ಪ್ರಮುಖರು ಪ್ರಾರ್ಥಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news















