ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಕೋವಿಡ್-19 ಲಾಕ್‌ಡೌನ್ ನಿಯಮಾವಳಿ ಉಲ್ಲಂಘಿಸಿ ಸುಮಾರು 50ಕ್ಕೂ ಹೆಚ್ಚು ಜನರು ಖರೀದಿಗಾಗಿ ಗುಂಪು ಗೂಡಿದ್ದ ಹಿನ್ನೆಲೆಯಲ್ಲಿ ಬಟ್ಟೆ ಅಂಗಡಿ ಮಾಲೀಕರಿಗೆ ನಗರಸಭೆ ಆಯಕ್ತರು 5ಸಾವಿರ ರೂ. ದಂಡ ವಿಧಿಸಿದ್ದಾರೆ.
ನಗರದ ಜೆ.ಕೆ. ಸಿಲ್ಸ್ಕ್ ಬಟ್ಟೆ ಅಂಗಡಿಯಲಿ ರಂಜಾನ್ ಹಬ್ಬದ ಬಟ್ಟೆ ಖರೀದಿಗಾಗಿ ಸುಮಾರು 60ರಿಂದ 70 ಮಂದಿ ಸೇರಿದ್ದರು. ವಿಷಯ ತಿಳಿದ ನಗರಸಭೆ ಆಯಕ್ತ ಮನೋಹರ್ ನೇತೃತ್ವ ತಂಡ ಧಾಳಿ ನಡೆಸಿ, ಅಂಗಡಿ ಮಾಲೀಕರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿ ಇಷ್ಟು ಸಂಖ್ಯೆಯ ಜನರನ್ನು ಅಂಗಡಿಯಲ್ಲಿ ಸೇರಿಸಿರುವುದು ಹಾಗೂ ಸಾಮಾಜಿಕ ಅಂತರವನ್ನು ಗಾಳಿಗೆ ತೂರಿದ ಅಂಗಡಿ ಮಾಲೀಕರಿಗೆ ಐದು ಸಾವಿರ ರೂ. ದಂಡ ವಿಧಿಸಿ, ಅಂಗಡಿಯಲ್ಲಿ ಗುಂಪುಗೂಡಿದ್ದ ಜನರಿಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

ಇದೇವೇಳೆ ನಗರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿದೆ. ಇದನ್ನು ತಡೆಗಟ್ಟಲು ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಅಂಗಡಿಗಳ ಮಾಲೀಕರು ಸಾರ್ವಜನಿಕರು ನಮ್ಮೊಂದಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದ ಆಯುಕ್ತರು. ಇಂತಹ ಪ್ರಕರಣಗಳು ಕಂಡುಬಂದರೆ ಕಠಿಣ ಕ್ರಮ ಜರುಗಿಸಬೇಕು ಎಚ್ಚರಿಕೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















