ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೊರೋನಾ ಲಸಿಕೆ ಪಡೆಯುವ ನಗರದ ನಾಗರಿಕರ ಸಹಾಯಕ್ಕಾಗಿ ಸೌರಭ ಸಂಸ್ಥೆ ವತಿಯಿಂದ ಉಚಿತ ವಾಹನ ಸೌಲಭ್ಯವನ್ನು ಒದಗಿಸಲಾಗುತ್ತಿದೆ.
ಸೌರಭ ಸಂಸ್ಥೆಯ ಅಧ್ಯಕ್ಷ, ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಅವರ ನೇತೃತ್ವದಲ್ಲಿ ಸೌರಭ ಹೆಲ್ಪ್ ಲೈನ್ ತೆರೆಯಲಾಗಿದೆ. ಇದರೊಂದಿಗೆ ನಗರದಲ್ಲಿ ಕೊರೋನಾ ಲಸಿಕೆ ಪಡೆಯುವ ನಾಗರಿಕರಿಗಾಗಿ ಮನೆ ಬಾಗಿಲಿಗೇ ಉಚಿತ ವಾಹನ ಸೌಲಭ್ಯವನ್ನೂ ಸಹ ಕಲ್ಪಿಸಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಲು ಬಯಸುವ ನಾಗರಿಕರು ಮೊ: 7411365108ಗೆ ಸಂಪರ್ಕಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post