ಕಲ್ಪ ಮೀಡಿಯಾ ಹೌಸ್
ಶಿಕಾರಿಪುರ: ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಪ್ರತಿ ತಾಲೂಕಿಗೆ ಆಕ್ಸಿಜನ್ ಜನರೇಟರ್ ಪ್ಲಾಂಟ್ ಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಜನರೇಟರ್ ಪ್ಲಾಂಟ್ ಅನ್ನು ಎರಡು ದಿನದಲ್ಲಿ 100 ಎಲ್‌ಎಮ್‌ಪಿ (ಪ್ರತಿ ಒಂದು ನಿಮಿಷಕ್ಕೆ ಒಂದು ಲೀಟರ್ ಆಕ್ಸಿಜನ್ ) ಸ್ಥಾಪನೆ ಆಗಲಿದೆ ಎಂದರು.
ಪ್ರತಿ ತಾಲೂಕಿನಲ್ಲಿ ಕೊರೋನಾ ರೋಗಿಗಳಿಗೆ ಚಿಕಿತ್ಸೆಗಾಗಿ 50 ಹಾಸಿಗೆಗಳ ವ್ಯವಸ್ಥೆ ಮಾಡಲಾಗುವುದು. ಶಿವಮೊಗ್ಗದ ಮೆಡಿಕಲ್ ಕಾಲೇಜಿನಲ್ಲಿ 3000 ಎಲ್‌ಎಮ್‌ಪಿ ಆಕ್ಸಿಜನ್ ಪ್ಲಾಂಟ್ ಪ್ರಾರಂಭಿಸಲು ಅಧಿಕಾರಿಗಳ ಜೊತೆ ಮಾತನಾಡಿರುತ್ತೇನೆ ಈ ಕುರಿತು ಮುಖ್ಯಮಂತ್ರಿ ಸಚಿವರ ಜೊತೆ ಸಂಪರ್ಕದಲ್ಲಿ ಇದ್ದೇನೆ ಎಂದರು.
ಮಳೆಗಾಲ ಆರಂಭಕ್ಕೂ ಮೊದಲು ಕಾಮಾಗಾರಿ ಮುಕ್ತಾಯ:
ಶಿಕಾರಿಪುರ ಪಟ್ಟಣದಲ್ಲಿ ಒಳಚರಂಡಿ ಕಾಮಗಾರಿ ಪ್ರಗತಿಯಲ್ಲಿದ್ದು ಒಂದು ತಿಂಗಳಿನಲ್ಲಿ ಕಾಮಗಾರಿ ಮುಕ್ತಾಯವಾಗಲಿದೆ. ಮನೆಮನೆಗೂ ಸಂಪರ್ಕ ಕೊಡುವ ಒಳಚರಂಡಿ ವ್ಯವಸ್ಥೆಯು ಮಳೆಗಾಲ ಮುಗಿಯುವ ಒಳಗೆ ಮುಕ್ತಾಯವಾಗಲಿದೆ. ಮುಖ್ಯಮಂತ್ರಿ ಅವರ ಆಶಯದಂತೆ ಪಟ್ಟಣವನ್ನು ಎಲ್ಲಾ ರೀತಿಯಲ್ಲಿ ಅಭಿವೃದ್ಧಿಗೊಳಿಸಲು ಮಾದರಿ ನಗರವನ್ನಾಗಿ ಮಾಡಲು ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸಹಕಾರ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಶಿಕಾರಿಪುರ ಪುರಸಭೆಯ ಅಧ್ಯಕ್ಷೆ ಲಕ್ಷ್ಮಿ ಮಹಾಲಿಂಗಪ್ಪ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರೇಣುಕಸ್ವಾಮಿ, ಸದಸ್ಯರಾದ ಪಾಲಕ್ಷಪ್ಪ, ರಮೇಶ್ ಗುಂಡ, ಪ್ರಶಾಂತ್, ಸುನಂದ ಮಂಜುನಾಥ, ಉಮಾವತಿ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post