ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಬೆಂಗಳೂರಿನಲ್ಲಿ ಬೆಡ್ ಬ್ಲಾಕಿಂಗ್ ದಂಧೆ ಹಿಂದೆ ಮುಸ್ಲಿಂ ಸಂಘಟನೆಯ ಕೈವಾಡದ ಶಂಕೆ ವ್ಯಕ್ತವಾಗಿದ್ದು, ತಪ್ಪಿತಸ್ಥರ ವಿರುದ್ದ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಸುದ್ದಿಗಾರರಗೊಂದಿಗೆ ಮಾತನಾಡಿದ ಅವರು, ಸಂಸದ ತೇಜಸ್ವಿ ಸೂರ್ಯ, ರವಿ ಸುಬ್ರಹ್ಮಣ್ಯ, ಸತೀಶ್ ರೆಡ್ಡಿ ಅವರುಗಳು ಸೇರಿ ಬೆಡ್ ಬ್ಲಾಕಿಂಗ್ ದಂಧೆಯನ್ನು ಬಯಲಿಗೆ ಎಳೆದಿದ್ದಾರೆ. ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿಯನ್ನು ನಾವು ತಕ್ಕಮಟ್ಟಿಗೆ ನಿಭಾಯಿಸುತ್ತಿದ್ದೇವೆ. ಆದರೆ, ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಇಂತಹ ಕೃತ್ಯಗಳು ನಡೆಯುತ್ತಿವೆ. ಇದರ ಹಿಂದೆ ಯಾರೇ, ಯಾವುದೇ ಸಂಘಟನೆಯಿದ್ದರೂ ಅದನ್ನು ಸಾಬೀತುಪಡಿಸಿ, ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post