ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ರಾಜ್ಯದಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸೂಚಿಸಿದರೆ ಸಂಪೂರ್ಣ ಲಾಕ್ ಡೌನ್ ಮಾಡಲು ನಾವು ಸಿದ್ದರಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ದೇಶದಾದ್ಯಂತ ಕೊರೋನಾ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಸಿ ಚರ್ಚೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಇದೆ. ಸಭೆಯ ಬಳಿಕ ರಾಜ್ಯದಲ್ಲಿ ಏನು ಕ್ರಮ ಕೈಗೊಳ್ಳಬೇಕು ಎಂದು ನಿರ್ಧರಿಸುತ್ತೇವೆ. ಪ್ರಧಾನಿ ಮೋದಿ ಅವರು ಏನು ಸೂಚನೆ ನೀಡುತ್ತಾರೆ ಅದನ್ನು ಪಾಲಿಸುವುದು ನಮ್ಮ ಜವಾಬ್ದಾರಿ. ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿ ಎಂದು ಸೂಚಿಸಿದರೆ ಅದನ್ನು ನಾವು ಜಾರಿ ಮಾಡುತ್ತೇವೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post