No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಆಮ್ಲಜನಕ ಕೊರತೆ: ಶೆಟ್ಟರ್ ನೇತೃತ್ವದ ಸಭೆಯ ಯೋಜನೆಗಳೇನು? ಇಲ್ಲಿದೆ ಮಾಹಿತಿ

kalpa News by kalpa News
May 6, 2021
in ಬೆಂಗಳೂರು ನಗರ
0
ಆಮ್ಲಜನಕ ಕೊರತೆ: ಶೆಟ್ಟರ್ ನೇತೃತ್ವದ ಸಭೆಯ ಯೋಜನೆಗಳೇನು? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ರಾಜ್ಯದಲ್ಲಿ ಉತ್ಪಾದನೆ ಆಗುತ್ತಿರುವ ಆಮ್ಲಜನಕವನ್ನು ರಾಜ್ಯದಲ್ಲೇ ಬಳಸಿಕೊಳ್ಳಲು ಅನುಮತಿ ನೀಡುವಂತೆ ಕೇಂದ್ರ ಸಚಿವರೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಲಾಗಿದೆ. ಶೀಘ್ರದಲ್ಲೇ ಈ ಬಗ್ಗೆ ಅನುಮತಿ ದೊರೆಯಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

ಇಂದು ವಿಧಾನಸೌಧದಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದಲ್ಲಿ ಆಕ್ಸಿಜನ್ ಪೂರೈಕೆ ಮತ್ತು ಸರಬರಾಜು ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗಿನ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆಮ್ಲಜನಕ ಉತ್ಪಾದನೆಯ ಪ್ರಮಾಣವನ್ನು ಹೆಚ್ಚಿಸಲಾಗಿದೆ. ಬಳ್ಳಾರಿಯ ಜಿಂದಾಲ್‌ ನಲ್ಲಿ ಈಗಾಗಲೇ ಉತ್ಪಾದನೆ ಹೆಚ್ಚಾಗಿದೆ. ಅಲ್ಲದೆ, ಕೇಂದ್ರ ಸರಕಾರ ಹೊರ ರಾಜ್ಯಗಳಿಂದ ಆಮ್ಲಜನಕ ಹಂಚಿಕೆಯನ್ನು ನೀಡಿದೆ. ಆದರೆ, ದೂರದ ರಾಜ್ಯಗಳಿಂದ ಆಮ್ಲಜನಕವನ್ನು ರಾಜ್ಯಕ್ಕೆ ತರಿಸಿಕೊಳ್ಳುವುದು ಬಹಳ ವಿಳಂಬವಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯದಿಂದ ಬೇರೆ ರಾಜ್ಯಗಳಿಗೆ ಕಳುಹಿಸಲಾಗುತ್ತಿರುವ ಆಮ್ಲಜನಕದ ಪ್ರಮಾಣವನ್ನು ಕಡಿಮೆ ಮಾಡಿ ಅದನ್ನು ರಾಜ್ಯದಲ್ಲೇ ಬಳಸಿಕೊಳ್ಳಲು ಅವಕಾಶ ನೀಡುವಂತೆ ಕೇಂದ್ರ ಸಚಿವ ಪಿಯೂಷ್‌ ಗೋಯೆಲ್‌ ಹಾಗೂ ಪ್ರಹ್ಲಾದ್‌ ಜೋಷಿ ಅವರೊಂದಿಗೆ ಸಮಾಲೋಚನೆ ನಡೆಸಿದ್ದೇನೆ. ಈ ಬಗ್ಗೆ ಕೇಂದ್ರ ಸಚಿವ ಪಿಯೂಷ್‌ ಗೋಯೆಲ್‌ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.

ಜಿಲ್ಲೆಗಳ ಬೇಡಿಕೆಗೆ ತಕ್ಷಣ ಸ್ಪಂದಿಸಿ:
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಮ್ಲಜನಕ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಆಯಾ ಜಿಲ್ಲೆಗಳಿಗೆ ಅಗತ್ಯವಿರುವಷ್ಟು ಆಮ್ಲಜನಕ ಪೂರೈಕೆ ಸರಬರಾಜಿನಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆಮ್ಲಜನಕ ಸಾಗಾಣಿಕಾ ಟ್ಯಾಂಕ್‌ರ್‌ಗಳು:
ರಾಜ್ಯದಲ್ಲಿ ಪ್ರಸ್ತುತ 170 ಆಮ್ಲಜನಕ ಸಾಗಾಣಿಕಾ ಟ್ಯಾಂಕರ್‌ ಗಳು ಕಾರ್ಯನಿರ್ವಹಿಸುತ್ತಿವೆ. ಅದರಲ್ಲಿ 68 ಟ್ಯಾಂಕರ್‌ಗಳು ಬೇರೆ ರಾಜ್ಯಕ್ಕೆ ಪೂರೈಕೆ ಮಾಡುವ ಕಾರ್ಯದಲ್ಲಿವೆ. ರಾಜ್ಯಕ್ಕೆ ಇನ್ನಷ್ಟು ಟ್ಯಾಂಕರ್‌ಗಳ ಅವಶ್ಯಕತೆ ಇದ್ದು, ಇನ್ನೂ ಹೆಚ್ಚಿನ ಟ್ಯಾಂಕರ್‌ ಗಳನ್ನು ಮಾರ್ಪಾಡಿಸುವ ಕಾರ್ಯವನ್ನು ಚುರುಕುಗೊಳಿಸುವಂತೆ ಸಾರಿಗೆ ಇಲಾಖೆಯ ಅಧಿಕಾರಿಗಳಿ ಸೂಚನೆ ನೀಡಿದರು.

ಇತರೆ ರಾಜ್ಯಗಳಿಂದ ಶೀಘ್ರ ಆಮ್ಲಜನಕ ತರಲು ರೈಲ್ವೇ ಟ್ಯಾಂಕರ್‌ಗಳ ಬಳಕೆ:
ದೂರದ ಓರಿಸ್ಸಾ ಹಾಗೂ ಇನ್ನಿತರೆ ರಾಜ್ಯಗಳಿಂದ ಆಮ್ಲಜನಕ ಸಾಗಾಣಿಕೆಯನ್ನು ಚುರುಕುಗೊಳಿಸಲು ಹಾಗೂ ಖರ್ಚನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ರೈಲ್ವೇ ಟ್ಯಾಂಕರ್‌ಗಳ ಬಳಕೆ ಅವಶ್ಯಕ. ಈ ನಿಟ್ಟಿನಲ್ಲಿ 4 ಕಂಟೇನರ್‌ಗಳು ಕೆಲವೇ ದಿನಗಳಲ್ಲಿ ರಾಜ್ಯಕ್ಕೆ ಲಭಿಸಲಿದೆ. ಇವುಗಳ ಮೂಲಕ 80 ಎಂ.ಟಿ ಯಷ್ಟು ಆಮ್ಲಜನಕ ರಾಜ್ಯಕ್ಕೆ ತರಬಹುದಾಗಿದೆ.

ಬಹರೇನ್‌ ನಿಂದ 40 ಎಂ.ಟಿ ಆಮ್ಲಜನಕ:
ಬಹರೇನ್‌ ದೇಶದಿಂದ ಭಾರತಕ್ಕೆ ಭಾರತೀಯ ನೌಕಾ ಸೇನೆಯ ಹಡುಗುಗಳ ಮೂಲಕ 40 ಎಂ.ಟಿ ಆಮ್ಲಜನಕ ರಾಜ್ಯಕ್ಕೆ ಬರುತ್ತಿದೆ. ಇದಲ್ಲದೆ ಇತರೆ ರಾಜ್ಯಗಳಿಂದಲೂ ಹೆಚ್ಚುವರಿಯಾಗಿ 40 ಎಂ.ಟಿ ಗಳಷ್ಟು ಆಮ್ಲಜನಕ ಬರಲಿದೆ.

ಜಿಂದಾಲ್‌ ಮುಖ್ಯಸ್ಥರೊಂದಿಗೆ ಮಾತನಾಢಿದ್ದು ಸ್ಟೀಲ್‌ ಉತ್ಪಾದನೆಯನ್ನು ಕಡಿಮೆಗೊಳಿಸಿ ಆಮ್ಲಜನಕ ಉತ್ಪಾದನೆ ಹೆಚ್ಚಿಸುವಂತೆ ಸೂಚನೆ ನೀಡಿದ್ದೇವೆ. ಈ ನಿಟ್ಟಿನಲ್ಲಿ ಅವರು ಈಗಾಗಲೇ ಕಾರ್ಯಪ್ರಾರಂಭಿಸಿದ್ದು ರಾಜ್ಯಕ್ಕೆ ಹೆಚ್ಚಿನ ಆಮ್ಲಜನಕ ದೊರೆಯಲಿದೆ. ರಾಜ್ಯದಲ್ಲಿರುವ ಕಠಿಣ ಪರಿಸ್ಥಿತಿಯನ್ನು ಕೇಂದ್ರ ಸರಕಾರಕ್ಕೆ ವಿವರಿಸಿದ್ದು ಕೇಂದ್ರ ಸರಕಾರದಿಂದ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ ಎಂದು ಹೇಳಿದರು.

ಸಭೆಯಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ರಾಜ್ ಕುಮಾರ್ ಖತ್ರಿ, ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಶ್ರೀಮತಿ ಗುಂಜನ್ ಕೃಷ್ಣಾ, ಆಕ್ಸಿಜನ್ ಸರಬರಾಜು ಸಮಿತಿಯ ನೇತೃತ್ವ ವಹಿಸಿರುವ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ, ಕೆಐಎಡಿಬಿ ಸಿಇಓ ಡಾ ಶಿವಶಂಕರ್, ಡ್ರಗ್ಸ್ ಕಂಟ್ರೋಲರ್ ಅಮರೇಶ್ ತುಬಗಿ, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ ಸೇರಿದಂತೆ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: BahreinBangaloreIndustrial Minister Jagadish ShettarJindalKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaOxgenState Newsಆಮ್ಲಜನಕಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ಜಿಂದಾಲ್ಬಹರೇನ್ಬೆಂಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾರ್ವಜನಿಕರ ಸೇವೆಗೆ ಸಿದ್ಧವಾಗಿರುವ ಮಲ್ನಾಡ್ ಹೋಮ್ ಹೆಲ್ತ್ ಕೇರ್…

Next Post

ಬಹರಿನ್ ರಾಷ್ಟ್ರದಿಂದ ಬಂತು 40 ಮೆಟ್ರಿಕ್ ಟನ್ ಲಿಕ್ವಿಡ್ ಆಕ್ಸಿಜನ್!

kalpa News

kalpa News

Next Post
ಬಹರಿನ್ ರಾಷ್ಟ್ರದಿಂದ ಬಂತು 40 ಮೆಟ್ರಿಕ್ ಟನ್ ಲಿಕ್ವಿಡ್ ಆಕ್ಸಿಜನ್!

ಬಹರಿನ್ ರಾಷ್ಟ್ರದಿಂದ ಬಂತು 40 ಮೆಟ್ರಿಕ್ ಟನ್ ಲಿಕ್ವಿಡ್ ಆಕ್ಸಿಜನ್!

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL