ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಬಿಬಿಎಂಪಿ ಮಹದೇವಪುರ ವಲಯದ ಕೊರೋನಾ ನಿಯಂತ್ರಣ ಉಸ್ತುವಾರಿ ಬಸವರಾಜ ಅವರು ಭೇಟಿ ನೀಡಿ ಪರಿಶೀಲನೆ ನಡೆ, ಐಟಿಐ ಆಸ್ಪತ್ರೆಯಲ್ಲಿ 100 ಕೋವಿಡ್ ಬೆಡ್ ಗಳು ಮಾಡುವ ಬಗ್ಗೆ ನಿರ್ಧಾರವನ್ನು ಸರ್ಕಾರ ಕೈಗೊಳ್ಳಲಿದೆ ಎಂದರು.
ಈಗಾಗಲೇ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡರ ಜೊತೆ ಚರ್ಚೆ ಮಾಡಿರುವುದಾಗಿ ತಿಳಿಸಿದ ಸಚಿವರು, ಐಟಿಐ ಆಸ್ಪತ್ರೆ ಕೇಂದ್ರ ಸರ್ಕಾರದ ಅಧೀನದಲ್ಲಿದ್ದು, ಕೋವಿಡ್ ಬೆಡ್ ಮಾಡುವುದರಿಂದ ಕೊರೋನಾ ಸೋಂಕಿತರಿಗೆ ಅನುಕೂಲವಾತ್ತದೆ. ಹೀಗಾಗಿ ಕೇಂದ್ರ ಸಚಿವರಾದ ಸದಾನಂದಗೌಡರಿಗೆ ಮನವಿ ಮಾಡಿಕೊಂಡಿರುವುದಾಗಿ ಬಸವರಾಜ ತಿಳಿಸಿದರು.
ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚೆ ಮಾಡಿ ಇನ್ನೆರಡು ದಿನಗಳಲ್ಲಿ ಐಟಿಐ ಆಸ್ಪತ್ರೆಯಲ್ಲಿ ಕೋವಿಡ್ ಆಸ್ಪತ್ರೆಯಾಗಿ ಚಿಕಿತ್ಸೆ ನೀಡುವ ಸಾಧ್ಯತೆಗಳ ಬಗ್ಗೆ ಮಾಹಿತಿ ನೀಡಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post