ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ತಾಲೂಕು ಸಾರ್ವಜನಿಕ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್ ಸೋಂಕಿತರಿಗೆ ಮೀಸಲಿರಿಸಲಾಗಿದ್ದು, ತುರ್ತು ಚಿಕಿತ್ಸೆಯ ಹೊರತಾಗಿ ಬೇರೆ ಯಾವುದೇ ಸೇವೆ ದೊರೆಯುವುದಿಲ್ಲ.
ಈ ಕುರಿತಂತೆ ಮಾಹಿತಿ ನೀಡಿದ ತಾಲೂಕು ಆರೋಗ್ಯ ವೈದ್ಯಾಧಿಕಾರಿಗಳೂ, ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ಕಡಿಮೆ ರೋಗ ಲಕ್ಷಣವಿರುವ 11 ಕೋವಿಡ್ ಸೋಂಕಿತರಿದ್ದು, ಇವರನ್ನು ಎಂಪಿಎಂ ಕೋವಿಡ್ ಕೇರ್ ಸೆಂಟರ್‌ಗೆ ಸ್ಥಳಾಂತರಿಸಲಾಗುತ್ತದೆ. ಆನಂತರ ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ಹೊರರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. ಸಾರ್ವಜನಿಕರು ತಾಲೂಕು ಸರ್ಕಾರಿ ಆಸ್ಪತ್ರೆಗೆ ತೆರಳದೆ ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು.
ತಾಲೂಕು ಸಾರ್ವಜನಿಕ ಆಸ್ಪತ್ರೆ ತೀವ್ರ ಲಕ್ಷಣವಿರುವ ಕೋವಿಡ್ ಸೋಂಕಿತರಿಗೆ ಹಾಗೂ ತುರ್ತು ಚಿಕಿತ್ಸೆಗಾಗಿ ಮಾತ್ರ ಮೀಸಲಿಡಲಾಗಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post