ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ರಾಜ್ಯದ ಬೇರೆ ಬೇರೆ ಕಡೆಗಳಿಂದ ಜನರು ಆಗಮಿಸುತ್ತಿರುವುದರಿಂದ ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟು ನಿಟ್ಟಿನಲ್ಲಿ ವಾರಕ್ಕೆ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ವಾರಕ್ಕೆ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ. ಇದರಿಂದಾಗಿ ನಗರದಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗುವ ಭರವಸೆಯಿದೆ. ಕೈಗಾರಿಕೋದ್ಯಮಿಗಳು ಹಾಗೂ ಉದ್ಯಮಿಗಳು ಇದಕ್ಕೆ ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದರು.
ಇನ್ನು, ವಿಐಎಸ್’ಎಲ್’ನಲ್ಲಿ ಉತ್ಪಾದನೆಯಾಗುತ್ತಿರುವ ಆಕ್ಸಿಜನ್ ಪ್ರಮಾಣವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಆನವಟ್ಟಿ ಹಾಗೂ ಸೊರಬ ವ್ಯಾಪ್ತಿಯಲ್ಲಿ ಯಾವುದೇ ರೀತಿಯಲ್ಲೂ ತೊಂದರೆಯಾಗದಂತೆ ಹೆಚ್ಚುವರಿ ಬೆಡ್ ಆಸ್ಪತ್ರೆ ಸಿದ್ದಪಡಿಸಲು ಸೂಚಿಸಲಾಗಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post