ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ರಾಜ್ಯ ಸರ್ಕಾರ ಕಠಿಣ ಲಾಕ್ ಡೌನ್ ಜಾರಿಗೊಳಿಸಿರುವ ಬೆನ್ನಲ್ಲೇ ತಾಲೂಕಿನಲ್ಲಿಂದು 290 ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಈವರೆಗೂ 50 ಮಂದಿ ಬಲಿಯಾಗಿದ್ದಾರೆ.
ಇಂದು ಒಟ್ಟು 269 ಮಂದಿ ಮಾದರಿ ಸಂಗ್ರಹಿಸಲಾಗಿದ್ದು, 290 ಮಂದಿಗೆ ಸೋಂಕು ದೃಢಪಟ್ಟಿದೆ. ಕೇವಲ 5 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸೋಂಕಿಗೆ ಒಂದು ಬಲಿಯಾಗಿದ್ದು, ಇದುವರೆಗೂ 50 ಮಂದಿ ಮೃತಪಟ್ಟಿದ್ದಾರೆ.
270 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಒಟ್ಟು 25 ಕಂಟೈನ್‌ಮೆಂಟ್ ಜೋನ್‌ಗಳಿದ್ದು, ಈ ಪೈಕಿ 2 ಜೋನ್ ತೆರವುಗೊಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news















