ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ವಿಶ್ವ ಹಿಂದೂ ಪರಿಷತ್, ಬಜರಂಗದಳ, ಸೇವಾಭಾರತಿ, ಕರ್ನಾಟಕ ಕೋವಿಡ್ ಸುರಕ್ಷಾ ಪಡೆ ವತಿಯಿಂದ ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಹಸಿವು ಮುಕ್ತ ಶಿವಮೊಗ್ಗಕ್ಕಾಗಿ ಆಹಾರದ ಪೊಟ್ಟಣಗಳನ್ನು ವಿತರಿಸಲಾಯಿತು.
ಮಧ್ಯಾಹ್ನ ಹಾಗೂ ರಾತ್ರಿ ಎರಡೂ ಹೊತ್ತು ಮೆಗ್ಗಾನ್ ಆಸ್ಪತ್ರೆಯ ರೋಗಿಗಳ ಸಂಬಂಧಿಗಳಿಗೆ, ಆಂಬುಲೆನ್ಸ್ ಚಾಲಕರಿಗೆ, ಎಮ್‌ಆರ್‌ಎಸ್ ವೃತ್ತದ ಬಳಿ ಹೊರ ಜಿಲ್ಲೆಗಳಿಂದ ಬರುವ ಲಾರಿ ಚಾಲಕರಿಗೆ ಹಾಗೂ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ ಇಲ್ಲದೇ ಪರದಾಡುತ್ತಿದ್ದ ಕೂಲಿ ಕಾರ್ಮಿಕರಿಗೆ, ನಿರ್ಗತಿಕರಿಗೆ ಆಹಾರ ಪೊಟ್ಟಣಗಳನ್ನು ವಿತರಿಸಲಾಯಿತು. 300ಕ್ಕೂ ಹೆಚ್ಚು ಜನರಿಗೆ ಆಹಾರ ನೀಡಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post