ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೊರೋನಾ ನಿರ್ವಹಣೆಗೆ ಜಿಲ್ಲಾಡಳಿತದ ವತಿಯಿಂದ ಗರಿಷ್ಟ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದು ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಜಿಲ್ಲೆಯಲ್ಲಿ ಕೋವಿಡ್‌ಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ 776 ಬೆಡ್, ಖಾಸಗಿ ಆಸ್ಪತ್ರೆಗಳಲ್ಲಿ 999 ಬೆಡ್‌ಗಳನ್ನು ಕಾಯ್ದಿರಿಸಲಾಗಿದೆ. ಇದರಲ್ಲಿ 216 ಐಸಿಯು ಬೆಡ್ ಹಾಗೂ 944 ಆಕ್ಸಿಜನ್ ಬೆಡ್‌ಗಳಿವೆ. ಸರ್ಕಾರಿ ಆಸ್ಪತ್ರೆಯಲ್ಲಿ 78 ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 32 ವೆಂಟಿಲೇಟರ್‌ಗಳಿವೆ. ಪ್ರಸ್ತುತ ಶಿವಮೊಗ್ಗ, ಶಿಕಾರಿಪುರ, ಸಾಗರದಲ್ಲಿ ಕೋವಿಡ್ ಕೇರ್ ಸೆಂಟರ್‌ಗಳು ಕಾರ್ಯನಿರ್ವಹಿಸುತ್ತಿವೆ ಎಂದರು.
ಜಿಲ್ಲೆಯಲ್ಲಿ ಇದುವರೆಗೆ 2,67,060 ಡೋಸ್ ಕೋವಿಶೀಲ್ಡ್ ನೀಡಲಾಗಿದ್ದು, 2540 ಡೋಸ್ ಉಳಿಕೆ ಇದೆ. ಕೋವಾಕ್ಸಿನ್ 20460 ಡೋಸ್ ನೀಡಲಾಗಿದ್ದು, ಉಳಿಕೆ ಇರುವುದಿಲ್ಲ. 2,41,578 ಮಂದಿಗೆ ಮೊದಲ ಡೋಸ್ ನೀಡಲಾಗಿದ್ದು, 54358 ಮಂದಿಗೆ ಎರಡನೇ ಡೋಸ್ ಪೂರ್ಣಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ 552 ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 383 ರೆಮಿಡಿಸ್ವಿರ್ ಇಂಜೆಕ್ಷನ್ ಲಭ್ಯವಿದೆ. 88 ಸಕ್ರಿಯ ಕಂಟೈನ್‌ಮೆಂಟ್ ಝೋನ್‌ಗಳಿವೆ. ಮಾಸ್ಕ್ ಧರಿಸದ 9207 ಪ್ರಕರಣಗಳಲ್ಲಿ 12,76,850 ರೂ. ದಂಡ ವಿಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post