ಕಲ್ಪ ಮೀಡಿಯಾ ಹೌಸ್
ಹೊಸನಗರ: ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತ ಸಿಡಿಲು ಬಡಿದು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ತಾಲೂಕಿನ ಹುಂಚ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊಂಡ್ಲಗದ್ದೆ ಸಮೀಪದ ಹಾಡಿಗದ್ದೆಯಲ್ಲಿ ಘಟನೆ ನಡೆದಿದೆ.
ಹಾಡಿಗದ್ದೆಯ ಉಮೇಶ್(47) ಸಿಡಿಲು ಬಡಿದು ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.
ಉಮೇಶ್ ಅವರು ಇಂದು ಸಂಜೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಭಾರೀ ಸಿಡಿಲು ಬಡಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post