ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೊರೋನಾ ನಿಯಂತ್ರಿಸಲು ರಾಜ್ಯದಲ್ಲಿ ಲಾಕ್‌ಡೌನ್ ವಿಧಿಸಲಾಗಿದ್ದು, ಹಲವರು ಕೆಲಸ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಬಡವರಿಗೆ, ಕೂಲಿ ಕಾರ್ಮಿಕರಿಗೆ, ನಿರ್ಗತಿಕರಿಗೆ ಮಹಾನಗರ ಪಾಲಿಕೆ ವತಿಯಿಂದ ಆಹಾರ ಸಾಮಾಗ್ರಿ ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಪಾಲಿಕೆ ವಿರೋಧಪಕ್ಷದ ನಾಯಕಿ ಯಮುನಾ ರಂಗೇಗೌಡ ನೇತೃತ್ವದಲ್ಲಿ ಪಾಲಿಕೆ ಮೇಯರ್‌ಗೆ ಮನವಿ ಸಲ್ಲಿಸಿದರು.
ಲಾಕ್‌ಡೌನ್ ಜಾರಿಗೊಳಿಸಿ 16 ದಿನಗಳಾಗಿದ್ದು, ನಗರದ ಸಾವಿರಾರು ಬಡ ಕುಟುಂಬಗಳು ಹಾಗೂ ಕೂಲಿ ಕಾರ್ಮಿಕರು ದುಡಿಮೆ ಇಲ್ಲದ ತೀವ್ರ ಆರ್ಥಿಕ ಸಂಕಷ್ಟಕ್ಕೀಡಾಗಿದ್ದಾರೆ ಹಾಗೂ ಹಸಿವಿನಿಂದ ಬದುಕುವ ಅನಿವಾರ್ಯ ಪರಿಸ್ಥಿತಿ ಉಂಟಾಗಿದೆ. ಹಾಗಾಗಿ ಮಹಾನಗರ ಪಾಲಿಕೆಯ ಈ ಸಾಲಿನ ಬಜೆಟ್‌ನಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಮೀಸಲಿಟ್ಟಿರುವ ೩ ಕೋಟಿ ಅನುದಾನದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಆಹಾರ ಸಾಮಾಗ್ರಿ ಕಿಟ್ ಅನ್ನು ತುರ್ತಾಗಿ ವಿತರಿಸಬೇಕು ಎಂದು ಒತ್ತಾಯಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post