ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ರಾಜಕಾಲುವೆ ಹಾದು ಹೋಗಿರುವ ನಗರದ ಹೊಸಮನೆ ಬಡಾವಣೆಯ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಯಿತು.
ಇತ್ತೀಚೆಗೆ ರಾಜಕಾಲುವೆ ಕಾಮಗಾರಿ ನಡೆಯುತ್ತಿದ್ದರೂ, ನಿನ್ನೆ ಬಿದ್ದ ಮಳೆಯಿಂದಾಗಿ ಚೌಡೇಶ್ವರಿ ಕಾಲೊನಿ, ಶಿವಮೊಗ್ಗ ಗ್ಯಾಸ್ ಹಿಂಭಾಗ, ಶಾರದಮ್ಮ ಕಾಂಪೌಂಡ್‌ನ ನೂರಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಪೀಠೋಪಕರಣಗಳು, ಅಡುಗೆ ಸಾಮಗ್ರಿಗಳು ನೀರು ಪಾಲಾಗಿ ಜನಜೀವನ ಅಸ್ತವ್ಯಸ್ತವಾಯಿತು.
ಪಾಲಿಕೆ ಸದಸ್ಯೆ ರೇಖಾ ರಂಗನಾಥ್, ಮುಖಂಡ ಕೆ. ರಂಗನಾಥ್ ಹಾಗೂ ಮಹಾನಗರಪಾಲಿಕೆ ಆಯುಕ್ತ ಚಿದಾನಂದ ವಟಾರೆ ತಡರಾತ್ರಿ ಸ್ಥಳಕ್ಕೆ ಆಗಮಿಸಿ, ನೀರು ನುಗ್ಗಿದ ಮನೆಗಳಿಗೆ ಭೇಟಿ ಮಾಡಿ ಪರಿಶೀಲಿಸಿ ಕೂಡಲೇ ೩ದಿನಗಳ ಕಾಲ ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ ಊಟದ ವ್ಯವಸ್ಥೆಯನ್ನು ಕಲ್ಪಿಸಬೇಕು. ಹಾನಿಗೊಳಗಾದ ಮನೆಗಳ ಪಟ್ಟಿ ಮಾಡಿ ಪಾಲಿಕೆಯಿಂದ ಸಿಗಬೇಕಾದ ಪರಿಹಾರವನ್ನು ನೀಡುತ್ತೇವೆ ಎಂದು ಆಶ್ವಾಸನೆ ನೀಡಿದರು.
ಈ ಸಂದರ್ಭದಲ್ಲಿ ಪಾಲಿಕೆಯ ಪರಿಸರ ಅಭಿಯಂತರರಾದ ರಾಘವೇಂz, ಎಂಜಿನಿಯರ್ ತ್ರಿವೇಣಿ, ಸ್ಮಾರ್ಟ್ ಸಿಟಿ ಅಧಿಕಾರಿಗಳು ಹಾಗೂ ಬಡಾವಣೆಯ ಸಾರ್ವಜನಿಕರು ಇದ್ದರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post