ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಿನ್ನೆ ಸುರಿದ ಭಾರೀ ಮಳೆಗೆ ನಗರದ ಹಲವೆಡೆ ಅನಾಹುತಗಳು ಸಂಭವಿಸಿದ್ದು, ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಾಮಣ್ಣ ಶ್ರೇಷ್ಠಿ ಪಾರ್ಕ್‌ನ ತಗ್ಗು ಪ್ರದೇಶ, ಗೋಪಾಲಗೌಡ ಬಡಾವಣೆ, ಭರಮಪ್ಪ ನಗರ, ವಿವೇಕಾನಂದ ಬಡಾವಣೆ, ಶರಾವತಿ ನಗರಗಳಿಗೆ ಅವರು ಭೇಟಿ ನೀಡಿದರು

ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಉಪಮೇಯರ್ ಶಂಕರ್ ಗನ್ನಿ, ಸ್ಥಾಯಿ ಸಮಿತಿ ಅಧ್ಯಕ್ಷ ಧೀರರಾಜ್ ಹೊನ್ನವಿಲೆ, ಜ್ಞಾನೇಶ್ವರ್ ಇನ್ನಿತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















