ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜನತಾ ಕರ್ಫ್ಯೂ ಜಾರಿಯಲ್ಲಿದ್ದಾಗಲ್ಲೆ ನಗರದಲ್ಲಿ ಸಿದ್ದಯ್ಯ ರಸ್ತೆ ಹಾಗೂ ಎಂಕೆಕೆ ರಸ್ತೆಯಲ್ಲಿನ ಮನೆಗಳ ಮುಂದೆ ನಿಲ್ಲಿಸಿದ ಕಾರು ಮತ್ತು ಆಟೋಗಳ ಗಾಜುಗಳನ್ನು ಕಿಡಿಗೇಡಿಗಳು ಒಡೆದು ಹಾಕಿರುವ ಘಟನೆ ನಡೆದಿದೆ.
ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಮನೆಯ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಕಲ್ಲಿನಿಂದ ಹೊಡೆದು ಜಖಂಗೊಳಿಸಿದ್ದು, ಘಟನೆಯಲ್ಲಿ 11 ಕಾರು ಹಾಗೂ 1 ಆಟೋವನ್ನು ಜಖಂಗೊಳಿಸಿದ್ದಾರೆ.
ಘಟನೆಯಲ್ಲಿ ಕಾಡಾ ಅಧ್ಯಕ್ಷರ ಕಾರು ಸಹ ಜಖಂ ಆಗಿದ್ದು, ಸ್ಥಳಕ್ಕೆ ದೊಡ್ಡಪೇಟೆ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ಅನುಮಾಸ್ಪದವಾಗಿ ಇಬ್ಬರು ಯುವಕರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್, ಜಿಪಂ ಸದಸ್ಯ ಕೆ.ಈ. ಕಾಂತೇಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post