No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Wednesday, September 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪಂಚಾಯತ್‍ರಾಜ್ ಇಲಾಖೆ ಅಧಿಕಾರಿ, ಸಿಬ್ಬಂದಿ ಕೊರೋನಾ ವಾರಿಯರ್ಸ್ ಘೋಷಣೆ: ಸಚಿವ ಕೆ.ಎಸ್. ಈಶ್ವರಪ್ಪ

kalpa News by kalpa News
May 26, 2021
in ಶಿವಮೊಗ್ಗ
0
ಪಂಚಾಯತ್‍ರಾಜ್ ಇಲಾಖೆ ಅಧಿಕಾರಿ, ಸಿಬ್ಬಂದಿ ಕೊರೋನಾ ವಾರಿಯರ್ಸ್ ಘೋಷಣೆ: ಸಚಿವ ಕೆ.ಎಸ್. ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‍ರಾಜ್ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಲು ಮುಖ್ಯಮಂತ್ರಿ ಅವರು ಅನುಮೋದನೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

ಅವರು ಬುಧವಾರ ಮುಖ್ಯಮಂತ್ರಿ ಅವರೊಂದಿಗೆ ವಿಡಿಯೋ ಸಂವಾದದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಮುಖ್ಯಮಂತ್ರಿ ಅವರು 4 ಜಿಲ್ಲೆಗಳ 40 ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪಿಡಿಒಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಗ್ರಾಮೀಣ ಭಾಗದಲ್ಲಿನ ಕೊರೋನಾ ಪರಿಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಗ್ರಾಮೀಣ ಮಟ್ಟದಲ್ಲಿ ಕೊರೋನಾ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಕೊರೋನಾ ಪಾಸಿಟಿವಿಟಿ ದರವನ್ನು ಇನ್ನಷ್ಟು ತಗ್ಗಿಸಲು ಕಠಿಣ ಕ್ರಮಗಳನ್ನು ಮುಂದುವರೆಸಲು ಸೂಚನೆ ನೀಡಿದ್ದಾರೆ ಎಂದರು.
ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಪ್ರಮಾಣವನ್ನು ಗಮನದಲ್ಲಿರಿಸಿ ಆಯಾ ಗ್ರಾಮ ಪಂಚಾಯತ್ ಮಟ್ಟದಲ್ಲೂ ಕೋವಿಡ್ ಕೇರ್ ಸೆಂಟರ್ ಆರಂಭಿಸಲು ಸೂಚನೆ ನೀಡಲಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ ಒಟ್ಟು 17 ಕೋವಿಡ್ ಕೇರ್ ಸೆಂಟರ್‍ಗಳು ಕಾರ್ಯ ನಿರ್ವಹಿಸುತ್ತಿವೆ. ಕೊರೋನಾ ಪಾಸಿಟಿವ್ ವ್ಯಕ್ತಿಗಳು ಕಡ್ಡಾಯವಾಗಿ ಕೇರ್ ಸೆಂಟರ್‍ನಲ್ಲಿ ದಾಖಲಾಗಲು ಸೂಚನೆ ನೀಡಲಾಗಿದೆ. ಯಾವುದೇ ಕಾರಣಕ್ಕು ಹೋಂ ಐಸೋಲೇಷನ್‍ಗೆ ಅನುಮತಿ ನೀಡದಿರುವಂತೆ ತಿಳಿಸಲಾಗಿದೆ. ಶಿವಮೊಗ್ಗ ನಗರದಲ್ಲಿ ತಲಾ ನಾಲ್ಕು ವಾರ್ಡ್‍ಗಳಿಗೆ ಒಂದರಂತೆ ಒಟ್ಟು 9 ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. ಆಯಾ ಭಾಗದ ಕಾರ್ಪೊರೇಟರ್‍ಗಳು ಜವಾಬ್ದಾರಿ ತೆಗೆದುಕೊಂಡು ಸ್ವಚ್ಛತೆ ಇತ್ಯಾದಿ ಕಾರ್ಯಗಳನ್ನು ನಡೆಸಲು ಸೂಚಿಸಲಾಗಿದೆ ಎಂದು ಹೇಳಿದರು.

ವಿಡಿಯೋ ಸಂವಾದ
ತೀರ್ಥಹಳ್ಳಿ ತಾಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಎ.ಕೆ. ಭಾಸ್ಕರ್ ಅವರೊಂದಿಗೆ ಮುಖ್ಯಮಂತ್ರಿ ಅವರು ವಿಡಿಯೋ ಸಂವಾದದ ಮೂಲಕ ಮಾಹಿತಿಯನ್ನು ಪಡೆದುಕೊಂಡರು. ಕೊರೋನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಮದುವೆ, ಮುಂಜಿ, ಜಾತ್ರೆಯಂತಹ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಬೇಕು. ಕೋವಿಡ್ ಪಾಸಿಟಿವಿಟಿ ದರ ಶೇ.10 ಕ್ಕೆ ಇಳಿಯಲು ಪ್ರಯತ್ನಿಸುವಂತೆ ಮುಖ್ಯಮಂತ್ರಿ ಅವರು ತಿಳಿಸಿದರು.


ತಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕರೋನಾ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಭಾಸ್ಕರ್ ಅವರು ಮಾಹಿತಿ ನೀಡಿದರು. ಪಂಚಾಯತ್ ವ್ಯಾಪ್ತಿಯಲ್ಲಿ ಇದುವರೆಗೆ 51 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, ಯಾವುದೇ ಸಾವು ಸಂಭವಿಸಿಲ್ಲ. ಟಾಸ್ಕ್‍ಫೋರ್ಸ್ ಸದಸ್ಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದ್ದು, ಮನೆ ಮನೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಪಾಸಿಟಿವ್ ವ್ಯಕ್ತಿಗಳಿಗೆ ಮೆಡಿಕಲ್ ಕಿಟ್ ನೀಡಲಾಗುತ್ತಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್. ವೈಶಾಲಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಇದುವರೆಗೆ 20591 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ ಶೇ.54ರಷ್ಟು ಅಂದರೆ 11290 ಪ್ರಕರಣಗಳು ಗ್ರಾಮೀಣ ಭಾಗದಲ್ಲಿ ವರದಿಯಾಗಿವೆ. ಪ್ರಸ್ತುತ 6900 ಸಕ್ರಿಯ ಪ್ರಕರಣಗಳು ಇದ್ದು, 3800 ಪ್ರಕರಣಗಳು ಗ್ರಾಮೀಣ ಭಾಗದಲ್ಲಿವೆ. ಆದರೆ ಕಳೆದ ನಾಲ್ಕು ದಿನಗಳಿಂದ ಪ್ರಕರಣಗಳಲ್ಲಿ ಇಳಿಕೆ ಕಂಡು ಬಂದಿದ್ದು, ಗ್ರಾಮೀಣ ಭಾಗದಲ್ಲಿ ಪಾಸಿಟಿವಿಟಿ ದರ ಶೇ.31ರಷ್ಟಿದೆ ಎಂದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಎಸ್ಪಿ ಲಕ್ಷ್ಮೀ ಪ್ರಸಾದ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Corona VirusCovid Care CenterCovid19K S EshwarappaKannada News WebsiteLatest News KannadaLocal NewsMalnad NewsShimogaShivamoggaShivamogga Newsಕೆ.ಎಸ್. ಈಶ್ವರಪ್ಪವಿಡಿಯೋ ಸಂವಾದಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Can COVID have any effects on premature birth and its complication in winter

Next Post

ಭದ್ರಾವತಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕೊಲೆ ನಡೆದ 24 ಗಂಟೆಯೊಳಗೆ ಆರೋಪಿಗಳು ಅಂದರ್

kalpa News

kalpa News

Next Post
ಭದ್ರಾವತಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕೊಲೆ ನಡೆದ 24 ಗಂಟೆಯೊಳಗೆ ಆರೋಪಿಗಳು ಅಂದರ್

ಭದ್ರಾವತಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕೊಲೆ ನಡೆದ 24 ಗಂಟೆಯೊಳಗೆ ಆರೋಪಿಗಳು ಅಂದರ್

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL