ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಕ್ಷುಲ್ಲಕ ಕಾರಣಕ್ಕೆ ಪೌರ ಕಾರ್ಮಿಕನನ್ನು ಇರಿದು ಕೊಂದ ಆರೋಪಿಗಳನ್ನು ಘಟನೆ ನಡೆದ 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೋವಿಡ್ ಸಂಕಷ್ಟದ ಸಮಯದಲ್ಲೂ ಪೊಲೀಸರು ಕೊಲೆಯಾದ 24 ಗಂಟೆಯೊಳಗೆ ಮುಂಚಿನ ಕಾರ್ಯಾಚರಣೆ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಜನರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಗರದ ಅನ್ವರ್ ಕಾಲೋನಿ ನಿವಾಸಿ ಸಾಬೀತ್(20), ಶಿವಮೊಗ್ಗ ಆರ್.ಎಂ.ಎಲ್. ನಗರದ ಇದಾಯತ್(20), ಮಹಮದ್ ಜುನೇದ್(20), ಬುದ್ದಾ ನಗರದ ನಿಶಾದ್ ಪಾಷಾ(21) ಮತ್ತು ತಬ್ರೇಜ್ ಪಾಷಾ(21) ಅವರನ್ನು ಬಂಧಿಸಲಾಗಿದೆ ಹಾಗೂ ಕೃತಕ್ಕೆ ಬಳಸಿದ ಆಯುಧ ಮತ್ತು 2 ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.
ಇನ್ನು, ಘಟನಾ ಸ್ಥಳಕ್ಕೆ ಬುಧವಾರ ಬೆಳಿಗ್ಗೆ ಪೂರ್ವ ವಲಯ ಪೊಲೀಸ್ ಮಹಾನಿರ್ದೇಶಕ ರವಿ, ಜಿಲ್ಲಾ ರಕ್ಷಣಾಧಿಕಾರಿ ಬಿ.ಎಂ. ಲಕ್ಷ್ಮಿಪ್ರಸಾದ್ ಹಾಗೂ ಶಾಸಕ ಬಿ.ಕೆ. ಸಂಗಮೇಶ್ವರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳೀಯರಿಂದ ಮಾಹಿತಿ ಪಡೆದು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನಚ್ಚರಿಕೆ ವಹಿಸಿದ್ದಾರೆ. ಕೊರೋನಾ ಲಾಕ್‌ಡೌನ್ ನಡುವೆಯೂ ಪೊಲೀಸರು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post