No Result
View All Result
60% of Indians have received an invite to a dating app or site later found to be fake
English Articles

60% of Indians have received an invite to a dating app or site later found to be fake

by ಕಲ್ಪ ನ್ಯೂಸ್
February 12, 2026
0

Kalpa Media House  |  India | Today, McAfee released its annual Valentine’s Day research, revealing how fake profiles, AI‑assisted chats,...

Read moreDetails
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
Deeksha Brahmavara | A Divine Synergy of Artistic Excellence and Intellectual Brilliance

Deeksha Brahmavara | A Divine Synergy of Artistic Excellence and Intellectual Brilliance

February 10, 2026
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
  • Advertise With Us
  • Grievances
  • About Us
  • Contact Us
Thursday, February 12, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಮನೋಬಲ, ಲಸಿಕೆ ಇದ್ದರೆ ಕೊರೋನಾ ಹೊಡೆದೋಡಿಸಬಹುದು: ಡಾ.ನವೀನ್ ಬಿ. ಸಜ್ಜನ್ ಬರೆದ ಓದಲೇಬೇಕಾದ ಲೇಖನ

ಮುಂಜಾಗ್ರತೆ ನಿರ್ಲಕ್ಷಿಸಿ, ಅಪಾಯ ತಂದುಕೊಳ್ಳಬೇಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 26, 2021
in Special Articles
0
ಮನೋಬಲ, ಲಸಿಕೆ ಇದ್ದರೆ ಕೊರೋನಾ ಹೊಡೆದೋಡಿಸಬಹುದು: ಡಾ.ನವೀನ್ ಬಿ. ಸಜ್ಜನ್ ಬರೆದ ಓದಲೇಬೇಕಾದ ಲೇಖನ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಕೊರೋನಾ ನಮ್ಮನ್ನು ಕಾಡಲು ಶುರುವಾಗಿ ಒಂದೂವರೆ ವರ್ಷ ಆಗಿಹೋಗಿದೆ. ಸದ್ಯದ ಮಟ್ಟಿಗೆ ಪರಿಸ್ಥಿತಿ ನಿರಾಶದಾಯಕವಾಗಿ ಕಾಣುತ್ತಿದೆಯಾದರೂ ವೈರಾಣುವಿನ ಬಗ್ಗೆ ಅನೇಕ ವಿಚಾರಗಳನ್ನು ವೈದ್ಯಲೋಕ ಅರ್ಥ ಮಾಡಿಕೊಂಡಿದೆ ಹಾಗೂ ಕೋವಿಡ್ 19 ಜನರನ್ನು ಹೇಗೆ ಸತಾಯಿಸುತ್ತದೆ ಎನ್ನುವುದು ತಿಳಿದಿದೆ ಎನ್ನುವುದು ಸಮಾಧಾನಕರ.

ಎಲ್ಲಕ್ಕಿಂತ ಮಿಗಿಲಾಗಿ ಈಗಾಗಲೇ ಕೊರೊನಾಕ್ಕೆ ಬೇರೆ ಬೇರೆ ಬಗೆಯ ಲಸಿಕೆಯನ್ನೂ ಕಂಡುಹಿಡಿದಾಗಿದೆ. ಇಷ್ಟಾದರೂ ಈಗ ಎರಡನೆಯ ಅಲೆ ವ್ಯಾಪಿಸುತ್ತಿರುವ ಹೊತ್ತಿನಲ್ಲಿ ಕೊರೋನಾ ಸೋಂಕಿನಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಬೇಕೆಂದರೆ ಅದು ನಮ್ಮ ದೇಹದಲ್ಲಿ ಹೇಗೆ ವರ್ತಿಸುತ್ತದೆ ಎನ್ನುವ ಬಗ್ಗೆ ಅರಿತುಕೊಳ್ಳುವುದು ಮುಖ್ಯ.

ಕೊರೋನಾ ವೈರಸ್ ಸೋಂಕು ಎಂದರೇನು?
ಕೊರೋನಾ ವೈರಸ್ ಎಂದರೆ ಸಾಮಾನ್ಯ ವೈರಸ್’ಗಳ ಒಂದು ಗುಂಪು. ವೈರಸ್’ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ. ಕೆಲವು ಕೊರೋನಾ ವೈರಸ್ ಕೇವಲ ಪ್ರಾಣಿಗಳ ಮೇಲೆ ಮಾತ್ರ ಪರಿಣಾಮ ಬೀರುವುದು. ಇನ್ನು ಕೆಲವು ವೈರಸ್’ಗಳು ಮನುಷ್ಯರ ಮೇಲೆ ಕೂಡ ಪರಿಣಾಮ ಬೀರುವುದು.
ಕೊರೋನಾ ವೈರಸ್’ನ ಕೆಲವು ಲಕ್ಷಣಗಳು ಯಾವುವು?
ಕೊರೋನಾ ವೈರಸ್ ಯಾವ ರೀತಿಯದ್ದು ಮತ್ತು ಸೋಂಕು ಎಷ್ಟು ಗಂಭೀರವಾಗಿದೆ ಎನ್ನುವುದರ ಮೇಲೆ ಇದರ ಲಕ್ಷಣವು ಅವಲಂಭಿಸಿದೆ. ಶೀತದಂತಹ ಶ್ವಾಸಕೋಶದ ಮೇಲ್ಬಾಗದ ಸೋಂಕಿಗೆ ಒಳಗಾಗಿದ್ದರೆ ಆಗ ನಿಮ್ಮಲ್ಲಿ ಈ ರೀತಿಯ ಕೆಲವು ಲಕ್ಷಣಗಳೂ ಕಾಣಿಸಿಕೊಳ್ಳುವುದು. ಅವು ಮೂಗು ಸೋರುವುದು, ತಲೆನೋವು, ಕೆಮ್ಮು, ಗಂಟಲು ನೋವು, ಜ್ವರ, ಸಂಪೂರ್ಣವಾಗಿ ಅನಾರೋಗ್ಯ.

ದೇಹ ಪ್ರವೇಶಿಸಿದ ನಂತರ ಐದು ದಿನಗಳಲ್ಲಿ ಪರಿಣಾಮ
ಈ ವೈರಾಣು ನಮ್ಮ ದೇಹವನ್ನು ಪ್ರವೇಶಿಸಿದ ನಂತರ ಪರಿಣಾಮ ಬೀರಲು ಹಾಗೂ ಮೊದಲ ಗುಣಲಕ್ಷಣಗಳು ಕಾಣಿಸಿಕೊಳ್ಳಲು ಸರಾಸರಿ ಐದು ದಿನಗಳನ್ನು ತೆಗೆದುಕೊಳ್ಳುತ್ತದೆ. ಕೆಲವು ಪ್ರಕರಣಗಳಲ್ಲಿ ಒಂದೆರೆಡು ದಿನಗಳು ಹೆಚ್ಚೂ ಕಡಿಮೆಯೂ ಆಗಬಹುದು. ಕಳೆದ ಬಾರಿ ಕೊರೋನಾ ಶುರುವಾದಾಗ ಜನರಿಗೆ ದೇಹದಲ್ಲಿ ಒಂಚೂರು ಏರುಪೇರಾದರೂ ಇದಕ್ಕೆ ಏನು ಕಾರಣ ಎಂದು ತಿಳಿಯಲು ಅವಕಾಶವಿತ್ತು. ಇಂತಹ ದಿನ ಈ ಕಾರ್ಯಕ್ರಮಕ್ಕೆ ಹೋಗಿದ್ದೆ, ಆಸ್ಪತ್ರೆಗೆ ಹೋಗಿದ್ದೆ, ಇನ್ನೆಲ್ಲೋ ಜನ ಸೇರುವಲ್ಲಿಗೆ ತೆರಳಿದ್ದೆ ಎಂದು ಹೇಳುತ್ತಿದ್ದರು. ಆದರೆ, ಈ ಎರಡನೆಯ ಅಲೆಯಲ್ಲಿ ಸಮಸ್ಯೆಯ ಮೂಲ ಯಾವುದು, ಎಲ್ಲಿಂದ ಬಂತು ಎಂದು ಕಂಡುಹಿಡಿಯುವುದೇ ಅಸಾಧ್ಯ ಎನ್ನುವಂತಾಗಿದೆ. ಹೀಗಾದಾಗ ನಮ್ಮಲ್ಲಿ ವೈರಾಣು ದೇಹ ಪ್ರವೇಶಿಸಿ ಕಾರ್ಯಾರಂಭಿಸಲು ಶುರುಮಾಡಿದ್ದು ಯಾವಾಗ ಎನ್ನುವುದನ್ನು ನಿಖರವಾಗಿ ಹೇಳುವುದು ಕಷ್ಟ. ಒಂದು ವೇಳೆ ಇದು ಗೊತ್ತಾಗದಿದ್ದರೂ ನಮ್ಮಲ್ಲಿ ಅದು ಮೊದಲು ಪರಿಣಾಮ ಬೀರಲಾರಂಭಿಸಿದ್ದು ಯಾವಾಗ ಎನ್ನುವುದನ್ನು ಗೊತ್ತು ಮಾಡಿಕೊಳ್ಳಬೇಕು. ಗಂಟಲು ಉರಿ, ಕಿರಿಕಿರಿ, ಕಫ, ಮೈಕೈ ನೋವು, ತಲೆನೋವು ಅಥವಾ ಕೆಲವೊಮ್ಮೆ ಭೇದಿ ಹೀಗೆ ಇವುಗಳಲ್ಲಿ ಯಾವುದೇ ಕಾಣಿಸಿಕೊಂಡರೂ ಅದನ್ನು ಗಣನೆಗೆ ತೆಗೆದುಕೊಳ್ಳಬೇಕು.

ಆದರೆ, ಬಹುತೇಕರು ತಪ್ಪು ಮಾಡುವುದೇ ಇಲ್ಲಿ. ಆರೋಗ್ಯದಲ್ಲಿ ಏರುಪೇರಾದರೂ ಆ ಲಕ್ಷಣವನ್ನು ಅವರು ಗಂಭೀರವಾಗಿ ಪರಿಗಣಿಸುವುದೇ ಇಲ್ಲ. ಯಾವಾಗ ಅದು ತೀವ್ರ ಮಟ್ಟದಲ್ಲಿ ಕಾಡಲಾರಂಭಿಸುತ್ತದೋ ಆಗ ಎಚ್ಚೆತ್ತುಕೊಳ್ಳುತ್ತಾರೆ. ಅಷ್ಟಾದ ನಂತರ ಅವರಿಗೆ ಅನಾರೋಗ್ಯದ ಮೊದಲ ಲಕ್ಷಣ ಯಾವಾಗ ಕಾಣಿಸಿಕೊಂಡಿದ್ದು ಎಂದು ಗಮನದಲ್ಲೇ ಇರುವುದಿಲ್ಲವಾದ್ದರಿಂದ ನಿಖರವಾಗಿ ಹೇಳುವುದು ಸಾಧ್ಯವಾಗುವುದಿಲ್ಲ. ಹೀಗಾದಾಗ ಸಮಸ್ಯೆಯನ್ನು ನಿಯಂತ್ರಿಸುವುದು ಕಷ್ಟವಾಗುತ್ತದೆ. ನೆಪಿರಲಿ, ಈ ವಿಚಾರದಲ್ಲಿ ಅನಾರೋಗ್ಯಕ್ಕೀಡಾದ ಬಗ್ಗೆ ಹೇಳುವಾಗ ಒಂದೆರೆಡು ದಿನ ಹೆಚ್ಚುಕಮ್ಮಿಯಾದರೂ ಹೊರಗಡೆ ಆರಾಮಾಗಿದ್ದು ಗುಣಮುಖರಾಗಬಹುದಾದ ನೀವು ಐಸಿಯು ಸೇರುವ ಸ್ಥಿತಿ ಎದುರಾಗಬಹುದು.
ಕೊರೋನಾ ದೇಹದಲ್ಲಿ ಪರಿಣಾಮ ಬೀರಲಾರಂಭಿಸಿ ಗಂಟಲು ಉರಿ, ಗಂಟಲು ನೋವು, ಕಫ, ಜ್ವರ, ಮೈಕೈ ನೋವು ಇತ್ಯಾದಿ ಲಕ್ಷಣಗಳನ್ನು ತೋರ್ಪಡಿಸಲಾರಂಭಿಸಿ ಎರಡು ಮೂರು ದಿನಗಳ ತನಕ ಕೊಂಚ ಸುಧಾರಿಸಿದಂತೆ ಕಾಣಬಹುದು. ಅಂದರೆ ಮೊದಲ ದಿನ ಸ್ವಲ್ಪ ಜಾಸ್ತಿಯಿದ್ದ ಜ್ವರ, ಎರಡು, ಮೂರನೆಯ ದಿನವೂ ಹಾಗೆಯೇ ಇದ್ದು ನಾಲ್ಕನೇ ದಿನಕ್ಕೆ ಇಳಿಮುಖವಾಗುವ ಸಾಧ್ಯತೆ ಇರುತ್ತದೆ. ಆಗ ದೇಹದ ಬಿಸಿ ತಗ್ಗಿ ಸಾಮಾನ್ಯ ಉಷ್ಣಾಂಶದ ಮಟ್ಟಕ್ಕೆ ಬರಬಹುದು. ಶೇ.80ರಷ್ಟು ಪ್ರಕರಣಗಳಲ್ಲಿ ಕೊರೋನಾ ವೈರಾಣುವಿನ ಅಂತಿಮ ಘಟ್ಟವೇ ಇದು ಎಂದು ಹೇಳಬಹುದು. ಹೀಗಾಗಿ ಮೂರ್ನಾಲ್ಕು ದಿನಗಳ ನಂತರ ಜನ ಗುಣಮುಖರಾದಂತಾಗಿ ಮೊದಲಿನಂತೆ ಓಡಾಡಲು ಆರಂಭಿಸುತ್ತಾರೆ. ಆದರೆ, ಇದೇ ಹಂತದಲ್ಲಿ ಕಾಯಿಲೆ ಶೇ.15ರಿಂದ ಶೇ.20ರಷ್ಟು ಪ್ರಮಾಣದಲ್ಲಿ ಅಪಾಯಕಾರಿ ತಿರುವನ್ನು ತೆಗೆದುಕೊಂಡುಬಿಡುತ್ತದೆ.

ಕೊರೋನಾ ದೂರವಿಡುವುದು ಹೇಗೆ?
1. ಸರ್ಕಾರವು ಈ ನಿಟ್ಟಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ನಿರ್ದೇಶನಗಳನ್ನು ಪಾಲಿಸುತ್ತಿದ್ದು, ಸ್ವಾಸ್ಥ್ಯ ಸೇವೆಗಳ ಪ್ರತಿಯೊಂದು ಸ್ತರವನ್ನೂ ಈ ಗುರಿಯತ್ತ ನಿರ್ದೇಶಿಸಿದೆ.
2. ಸೋಂಕಿನ ಸಂಖ್ಯೆಯನ್ನು ಪ್ರತಿದಿನವೂ ಗಣಿಸುವ ಆರೋಗ್ಯ ಮಂತ್ರಾಲಯವು, ವೈದ್ಯರುಗಳು ಹಾಗೂ ಆಸ್ಪತ್ರೆಗಳಿಗೆ ರೋಗಿಗಳನ್ನು ಪ್ರತ್ಯೇಕಿಸಿಟ್ಟು ಚಿಕಿತ್ಸೆ ನೀಡುವ ಬಗ್ಗೆ ಸೂಚನೆಗಳನ್ನು ನೀಡುತ್ತಿದೆ.
3. ಈ ಸೋಂಕು ತಗುಲಿರುವ ದೇಶಗಳ ಜನರು, ನಮ್ಮ ದೇಶವನ್ನು ಪ್ರವೇಶಿಸದಂತೆ ಅವರ ವೀಸಾಗಳನ್ನು ರದ್ದು ಪಡಿಸಲಾಗಿದೆ.
4. ಸೋಂಕು ಇರಬಹುದು ಎನ್ನುವ ಗುಮಾನಿ ಇರುವವರನ್ನು ಪರೀಕ್ಷೆಗೊಳಪಡಿಸಲಾಗುತ್ತಿದೆ.
5. ಹಲವಾರು ಸ್ಥಳಗಳಲ್ಲಿ ಪ್ರತ್ಯೇಕ ಚಿಕಿತ್ಸೆಯ ವ್ಯವಸ್ಥೆಗಳನ್ನು ಸಿದ್ಧಪಡಿಸಲಾಗಿದೆ.
6. ತಮಗೆ ಸೋಂಕು ಇರಬಹುದು ಎಂಬ ಸಂದೇಹ ಇರುವ ಯಾರಾದರೂ ಅದನ್ನು ಪರೀಕ್ಷಿಸಿಕೊಳ್ಳುವ ವ್ಯವಸ್ಥೆ ಮಾಡಿದೆ.
7. ಕ್ವಾರಂಟೈನ್’ನಲ್ಲಿ ನಿಮ್ಮನ್ನು ಸರಕಾರ ಸಿದ್ಧಪಡಿಸಿರುವ ಕೋಣೆಯಲ್ಲಿ ನಿರ್ಬಂಧಿಸಿ ಇಡಲಾಗುತ್ತದೆ. ಇದರಿಂದ ಬೇರೆಯವರಿಗೆ ನಿಮ್ಮಿಂದ ಸೋಂಕು ಹರಡುವುದು ಸಂಪೂರ್ಣ ಕಡಿಮೆ ಆಗುತ್ತದೆ.
8. ಉಳಿದಂತೆ ಈ ಸೋಂಕು ತಗುಲಿರುವುದು ಖಚಿತವಾಗಿರುವ ಅಂದರೆ ಪಾಸಿಟಿವ್ ಆಗಿರುವ ಯಾವದೇ ವ್ಯಕ್ತಿಯ ಜೊತೆಗೆ ನೀವು ಸಂಪರ್ಕದಲ್ಲಿದ್ದಿರೆಂಬ ಅನುಮಾನವಿದ್ದಾಗ, ನಿಮ್ಮನ್ನು ಸ್ವಯಂ-ದಿಗ್ಬಂಧನ ವಿಧಿಸಿಕೊಳ್ಳಲು ಸಲಹೆ ನೀಡುವರು.
9. ರೋಗ ಲಕ್ಷಣಗಳು ಕಂಡಾಗ ವೈದ್ಯರನ್ನು ಕಂಡು ಚಿಕಿತ್ಸೆ ಪಡೆಯಬೇಕು.
10. ಸಾರ್ವಜನಿಕರು, ಮುಂಜಾಗ್ರತಾ ಕ್ರಮವಾಗಿ ರೋಗ ನಿರೋಧಕ ಶಕ್ತಿ ವೃದ್ಧಿಸಿಕೊಳ್ಳುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸಂಶಮನಿವಟಿ, ಆಯುಷ್-64 ಹಾಗೂ ಆರ್ಕ್ ಈ ಅಜೀಬ್ ಎಂಬ ರೋಗ ನಿರೋಧಕ ಶಕ್ತಿ ಉಳ್ಳ ಆಯುಷ್ ಔಷಧಿಗಳನ್ನು ಸಾರ್ವಜನಿಕರಿಗೆ ವಿತರಿಸಲು ಜಿಲ್ಲಾ ಆಯುಷ್ ಇಲಾಖೆ ಮುಂದಾಗಿದೆ. ಇದರ ಸದುಪಯೋಗ ಪಡೆದುಕೊಂಡು ತಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದಾಗಿದೆ.

ಲಸಿಕೆಯ ಬಗ್ಗೆ ಜನಸಾಮಾನ್ಯರಲ್ಲಿ ಇರುವ ಗೊಂದಲಗಳು
ಪ್ರಸ್ತುತ ದಿನಗಳಲ್ಲಿ ಇಡೀ ದೇಶ ಮತ್ತು ರಾಜ್ಯಗಳು ಕೋವಿಡ್-19 ಕೊರೋನಾ ಸಾಂಕ್ರಾಮಿಕ ರೋಗದಿಂದ ತತ್ತರಿಸಿ ಆರ್ಥಿಕ ಪರಿಸ್ಥಿತಿಯನ್ನು ಮತ್ತು ಜನಸಾಮಾನ್ಯರ ಜೀವನ ಸ್ಥಿತಿಯನ್ನು ದುಃಸ್ಥಿತಿಗೆ ತಂದಿದೆ. ಇಂತಹ ಸನ್ನಿವೇಶದಲ್ಲಿ ಈ ಮಹಾಮಾರಿಯ ನಿಯಂತ್ರಣಕ್ಕೆ ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆಯಿಂದ ಅನುಮೋದಿತ ದೇಶೀಯ ಲಸಿಕೆ ಗಳಾದ ಕೋ-ವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಬಿಡುಗಡೆ ಮಾಡಿದ್ದು, ಕೇಂದ್ರ ಮತ್ತು ರಾಜ್ಯಗಳ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ನಡೆಸುತ್ತಿರುವ ಈ ಸಂದರ್ಭದಲ್ಲಿ ದೇಶದ ಪ್ರಜೆಗಳಾದ ನಾವು, ಸರ್ಕಾರದ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಎಲ್ಲರೂ ಸಹ ಲಸಿಕೆಯನ್ನು ಪಡೆದು ಈ ಮಹಾಮಾರಿ ನಿಯಂತ್ರಣ ಮಾಡುವುದು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.
45ರಿಂದ 59ರ ವಯಸ್ಸಿನ ವ್ಯಕ್ತಿಗಳಿಗೆ ಗಂಭೀರ ಆರೋಗ್ಯ ಸಮಸ್ಯೆಗಳಾದ ಹೃದಯ ಸಂಬಂಧಿ ಕಾಯಿಲೆ, ರಕ್ತದೊತ್ತಡ, ಮಧುಮೇಹ, ಪಾರ್ಶ್ವವಾಯು, ಕಿಡ್ನಿ, ಲಿವರ್, ಕ್ಯಾನ್ಸರ್ ಕಾಯಿಲೆ ಹಾಗೂ ಎಚ್‌ಐವಿ ಸೋಂಕಿತರು ಹಾಗೂ ಈ ಕಾಯಿಲೆಗಳಿಂದ ಬಳಲುತ್ತಿರುವವರು ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ.

ಲಸಿಕೆಯನ್ನು ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ, ಎಲ್ಲಾ ಸಮುದಾಯ ಆರೋಗ್ಯ ಕೇಂದ್ರಗಳು, ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಹಾಗೂ ಎಲ್ಲಾ ನಗರ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ನೀಡಲಾಗುತ್ತಿದೆ. ಅಷ್ಟೇ ಅಲ್ಲದೆ ಆಯುಷ್ಮಾನ್ ಭಾರತ ಮತ್ತು ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ 250 ರೂ.ಗಳನ್ನು ಪಾವತಿಸಿ ಪಡೆಯಬಹುದಾಗಿದೆ.

ಭಾರತದ ಹೆಮ್ಮೆಯ ವಿಜ್ಞಾನಿಗಳು ಹೈದರಾಬಾದ್’ನ ಭಾರತ್ ಬಯೋಟೆಕ್ ಹಾಗೂ ಆಕ್ಸ್ಫರ್ಡ್ ಯುನಿವರ್ಸಿಟಿ ಮತ್ತು ಆಸ್ಟ್ರಾಝೆನೆಕಾ ಸಂಸ್ಥೆಗಳು ಕಂಡುಹಿಡಿದಿರುವ ಸದ್ಯ ಭಾರತದಲ್ಲಿ ಬಳಕೆಯಲ್ಲಿರುವ ಕೊ ವ್ಯಾಕ್ಸಿನ್, ಕೋವಿ ಶೀಲ್ಡ್ ಲಸಿಕೆಗಳು ಯಾವುದೇ ಅಡ್ಡಪರಿಣಾಮ ಇಲ್ಲದೆ ಸಂಪೂರ್ಣ ಸುರಕ್ಷಿತವಾಗಿದ್ದು ಸಾರ್ವಜನಿಕರು ಲಸಿಕೆಯನ್ನು ಎರಡು ಬಾರಿ ಪಡೆಯುವುದರ ಮೂಲಕ ಕೋವಿಡ್ 19 ಎರಡನೆಯ ಅಲೆಯನ್ನು ಯಶಸ್ವಿಯಾಗಿ ತಡೆಯಬಹದು.


ಲೇಖಕರು: ಖ್ಯಾತ ವೈದ್ಯರು, ಚಿತ್ರದುರ್ಗ ಬಿಜೆಪಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠ ಸಂಚಾಲಕರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ChitradurgaCorona ArticleCorona VaccinationCorona VirusCovid19Doctor ArticleKannada News WebsiteLatest News KannadaPandamicSpecial Articleಕೊರೋನಾ ವೈರಸ್ಚಿತ್ರದುರ್ಗವೈರಾಣು
Share219Tweet123Send
Previous Post

ಭದ್ರಾವತಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕೊಲೆ ನಡೆದ 24 ಗಂಟೆಯೊಳಗೆ ಆರೋಪಿಗಳು ಅಂದರ್

Next Post

ಮೇ 31ರವರೆಗೂ ಕೋಲಾರದಲ್ಲಿ ಸಂಪೂರ್ಣ ಲಾಕ್ ಡೌನ್: ಸಚಿವ ಅರವಿಂದ ಲಿಂಬಾವಳಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೇ 31ರವರೆಗೂ ಕೋಲಾರದಲ್ಲಿ ಸಂಪೂರ್ಣ ಲಾಕ್ ಡೌನ್: ಸಚಿವ ಅರವಿಂದ ಲಿಂಬಾವಳಿ

ಮೇ 31ರವರೆಗೂ ಕೋಲಾರದಲ್ಲಿ ಸಂಪೂರ್ಣ ಲಾಕ್ ಡೌನ್: ಸಚಿವ ಅರವಿಂದ ಲಿಂಬಾವಳಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
ಜೀವನದಲ್ಲಿ ಯಶಸ್ಸು ಗಳಿಸಲು ವಿದ್ಯಾರ್ಥಿಗಳು ಸಕಾರಾತ್ಮಕ ಚಿಂತನೆ ಬೆಳೆಸಿಕೊಳ್ಳಿ: ಪ್ರಾಚಾರ್ಯ ಶಿವಕುಮಾರ ಕರೆ

ಜೀವನದಲ್ಲಿ ಯಶಸ್ಸು ಗಳಿಸಲು ವಿದ್ಯಾರ್ಥಿಗಳು ಸಕಾರಾತ್ಮಕ ಚಿಂತನೆ ಬೆಳೆಸಿಕೊಳ್ಳಿ: ಪ್ರಾಚಾರ್ಯ ಶಿವಕುಮಾರ ಕರೆ

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
ಶಾಸಕ ಬೈರತಿ ಬಸವರಾಜ್’ಗೆ ಅರೆಸ್ಟ್ ಭೀತಿ | ಫೋನ್ ಕಾಲ್’ಗೂ ಸಿಗದೇ ಎಸ್ಕೇಪ್

ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿ ಸುಪ್ರೀಂ ಕೋರ್ಟ್’ನಲ್ಲೂ ವಜಾ

February 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL