ಕಲ್ಪ ಮೀಡಿಯಾ ಹೌಸ್
ಸಾಗರ: ಕೋವಿಡ್-19 ದ್ವಿತೀಯ ಅಲೆ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆನಂದಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೇ 30ರ ಬೆಳಗ್ಗೆ 6 ಗಂಟೆಯವರೆಗೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಈ ಕುರಿತಂತೆ ಸಾಗರ ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್ ಅವರು ಆದೇಶ ಹೊರಡಿಸಿದ್ದಾರೆ.
ಕೋವಿಡ್ 19- ದ್ವಿತೀಯ ಅಲೆ ರಾಜ್ಯಾದ್ಯಂತ ವ್ಯಾಪಕವಾಗಿ ಹರಡುತ್ತಿದ್ದು ಇದರ ನಿಯಂತ್ರಣ ಸಂಬಂಧ ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದ್ದರೂ ಸಹ ಸಾರ್ವಜನಿಕರು ಲಾಕ್ ಡೌನ್ ಮಾರ್ಗ ಸೂಚಿಯನ್ನು ಉಲ್ಲಂಘಿಸಿ ಸಂಚರಿಸುತ್ತಿದ್ದು ಇದರಿಂದ ಸೊಂಕು ಹೆಚ್ಚಾಗಲು ಕಾರಣವಾಗಿದೆ. ಆದ್ದರಿಂದ ಕೋವಿಡ್19- ಸೋಂಕು ಸರಪಳಿಯನ್ನು ತುಂಡರಿಸಲು ತುರ್ತು ಅಗತ್ಯತೆಯನ್ನು ಮನಗಂಡು ಆನಂದಪುರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಕೋವಿಡ್-19 ಸಂಬಂಧಿಸಿದ ಟಾಸ್ಕ್ ಫೋರ್ಸ್ ಸಭೆಯ ನಿರ್ಣಯದಲ್ಲಿ ತೀರ್ಮಾನಿಸಲಾಗಿತ್ತು. ಇದರಂತೆ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post