ಕಲ್ಪ ಮೀಡಿಯಾ ಹೌಸ್
ಚಳ್ಳಕೆರೆ: ನಗರ ಪ್ರದೇಶದಲ್ಲಿ ಅಷ್ಟೇ ಅಲ್ಲದೆ ಹಳ್ಳಿಗಳಲ್ಲಿಯೂ ಸಹ ಕೊರೋನ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಳ್ಳುತ್ತಿದ್ದು, ಗ್ರಾಮೀಣ ಪ್ರದೇಶದ ಜನರ ನೆಮ್ಮದಿ ಜೀವನಕ್ಕೆ ಕೊಳ್ಳಿ ಇಟ್ಟಿದೆ. ಇಂತಹ ಸಂದರ್ಭದಲ್ಲಿ ಗ್ರಾಮಾಂತರ ಜನರು ಹೆಚ್ಚು ಜಾಗೃತರಾಗಬೇಕು. ರೋಗಕ್ಕೆ ತುತ್ತಾಗುವುದನ್ನು ತಪ್ಪಿಸಿಕೊಳ್ಳಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ತಾಲೂಕಿನ ಬಾಲೆನಹಳ್ಳಿ ಗ್ರಾಮಪಂಚಾಯಿತಿಯಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆದ ವೈದ್ಯರ ನಡೆ ಹಳ್ಳಿಯ ಕಡೆ ನೂತನ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದರು.
ಗ್ರಾಮಸ್ಥರು ಯಾರಿಗಾದರು ಜ್ಚರ, ಸುಸ್ತು, ನಿರಂತರ ಕೆಮ್ಮು, ಹಾಗೂ ಉಸಿರಾಟದ ತೊಂದರೆ ಇದ್ದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಿ. ಸೋಂಕು ಕಾಣಿಸಿಕೊಂಡರೆ ತಕ್ಷಣವೇ ಚಿಕಿತ್ಸೆ ಪಡೆದುಕೊಂಡರೆ ಮನೆಯಲ್ಲಿ ಉಳಿದವರಿಗೆ ಸೋಂಕು ತಗಲುವುದನ್ನು ತಪ್ಪಿಸಬಹುದು ಎಂದರು.
ಗ್ರಾಮದಲ್ಲಿ ಒಬ್ಬರಿಗೆ ಸೋಂಕು ತಗಲಿದರೂ ತಕ್ಷಣವೇ ಚಿಕಿತ್ಸೆ ತೆಗೆದುಕೊಳ್ಳಬೇಕು ಮತ್ತು ಅವರ ಸಂಪರ್ಕದಲ್ಲಿರುವವರನ್ನು ಸಹ ತುರ್ತಾಗಿ ಪರೀಕ್ಷೆಗೆ ಒಳಪಡಿಸಬೇಕು. ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಬೇಕು, ಹೊಗೆನಕಲ್ ಸಿಬ್ಬಂದಿಗಳಿಗೆ ಕೊರೋನ ಪೀಡಿತರನ್ನು ತಕ್ಷಣ ಓಲ್ಡ್ ಕೇರ್ ಸೆಂಟರ್‌ಗೆ ಸ್ಥಳಾಂತರಿಸುವಂತೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕವಿತಾ ಮನ್ನಿಕೆರಿ ಮಾತನಾಡಿ, ಜಿಲ್ಲೆಯಲ್ಲಿ ಚಳ್ಳಕೆರೆ ನಗರದಲ್ಲಿ ಅತಿ ಹೆಚ್ಚು ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಗ್ರಾಮೀಣ ಭಾಗದಲ್ಲಿ ಹೆಚ್ಚು ಕಾಣಿಸಿಕೊಳ್ಳುವುದರಿಂದ ವೈದ್ಯರ ನಡೆ ಹಳ್ಳಿಗಳ ಕಡೆಗೆ ಎನ್ನುವ ನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ವೈದ್ಯರೆ ಹಳ್ಳಿಗಳಿಗೆ ಹೋಗಿ ಜಾಗೃತಿ ಮೂಡಿಸುವುದರ ಜೊತೆಗೆ ಸೋಂಕಿತರನ್ನು ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆಗೆ ಕಳುಹಿಸುತ್ತಾರೆ. ಆದುದರಿಂದ ಗ್ರಾಮೀಣ ಭಾಗದ ಜನ ಎಚ್ಚರವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾಕ್ಟರ್ ಕೆ. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ರಾಧಿಕಾ, ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಡಾ. ಪಾಲಾಕ್ಷಪ್ಪ , ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಪಿಡಿಓ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post