ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ನಗರಪ್ರದೇಶದಲ್ಲಿ ಕೋವಿಡ್-19 ಸೋಂಕು ಕಡಿಮೆಯಾಗುತ್ತಿದ್ದರೂ, ಗ್ರಾಮಾಂತರ ಭಾಗದಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಇಂದು ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಕಠಿಣ ಲಾಕ್‌ಡೌನ್ ಜಾರಿಯ ನಂತರ ಭದ್ರಾವತಿ ನಗರ ವ್ಯಾಪ್ತಿಯಲ್ಲಿ ಸ್ವಲ್ಪಮಟ್ಟಿಗೆ ಸೋಂಕು ಇಳಿಮುಖವಾಗಿದೆ. ಆದರೆ, ಗ್ರಾಮಾಂತರ ಭಾಗದಲ್ಲಿ ಸೋಂಕು ಏರಿಕೆಯಾಗುತ್ತಿದ್ದು, ಕಂಟೈನ್‌ಮೆಂಟ್ ಝೋನ್‌ಗಳ ಸಂಖ್ಯೆಯೂ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಈ ಹಿನ್ನೆಲೆಯಲ್ಲಿ ಡಿ.ಸಿ. ಶಿವಕುಮಾರ್ ಅವರು, ಇಂದು ತಾಲೂಕಿನ ಕೂಡ್ಲಿಗೆರೆ, ಬಾರಂದೂರು, ಹೊಸಮನೆ ಭಾಗದ ಹೊರವಲಯ, ದೇವನರಸೀಪುರ, ಆನವೇರಿ, ಉಜ್ಜೈನಿಪುರ ಸೇರಿದಂತೆ ಹಲವು ಕಂಟೈನ್‌ಮೆಂಟ್ ಝೋನ್‌ಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಸೋಂಕು ಹೆಚ್ಚಳ ಕಂಡುಬಂದಿರುವ ಕಂಟೈನ್‌ಮೆಂಟ್ ಝೋನ್‌ಗಳಲ್ಲಿ ಕಠಿಣ ನಿಯಮಾವಳಿಗಳನ್ನು ಪಾಲಿಸುವಂತೆ ಸೂಚಿಸಿದ ಅವರು, ನಿರಂತರವಾಗಿ ಸ್ಯಾನಿಟೈಸ್ ಮಾಡುವುದು ಸೇರಿದಂತೆ ತುರ್ತು ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಸಂತೋಷ್ ಕಉಮಾರ್, ನಗರಸಭೆ ಆಯುಕ್ತ ರಮೇಶ್, ಡಿವೈಎಸ್‌ಪಿ ಕೃಷ್ಣಮೂರ್ತಿ, ತಾಪಂ ಇಒ ರಮೇಶ್, ಆರೋಗ್ಯ ಇಲಾಖೆ ಅಧಿಕಾರಿಗಳು ಸೇರಿದಂತೆ ಹಲವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post