ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ರಾಜ್ಯ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ತಮ್ಮ ಅವಧಿ ಪೂರ್ಣಗೊಳಿಸಲಿದ್ದಾರೆ. ನಾಯಕತ್ವದ ಬದಲಾವಣೆ ಪ್ರಸ್ತಾಪ ಇಲ್ಲ. ಹಾಗೂ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಅವರ ಹೇಳಿಕೆಗೆ ವಿವರಣೆ ಪಡೆಯುವುದಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ.
ನಳಿನ್ ಕುಮಾರ್ ಸ್ಪಷ್ಟಪಡಿಸುತ್ತಿದ್ದಂತೆ ಬಿಜೆಪಿಯ ಹಲವು ಶಾಸಕರು, ಸಚಿವರು ಸರ್ಕಾರದ ಕಾರ್ಯದಲ್ಲಿ ವಿಜಯೇಂದ್ರ ಅವರ ಹಸ್ತಕ್ಷೇಪವಿಲ್ಲ ಎನ್ನುವ ಮೂಲಕ ಮಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಪುತ್ರನ ಪರ ಬೆಂಬಲ ವ್ಯಕ್ತಪಡಿಸಿದ್ದಾರೆ.
ಇದು ನಾಯಕತ್ವ ಬದಲಾವಣೆ ಸಮಯವಲ್ಲ. ಸಚಿವ ಸಿ.ಪಿ. ಯೋಗೇಶ್ವರ್ ಅವರು ಅಸಂಬದ್ಧ ಹೇಳಿಕೆ ನೀಡುವ ಮೂಲಕ ಗೊಂದಲ ಸೃಷ್ಟಿಸಬಾರದು ಎಂದು ಕೆಎಸ್‌ಆರ್‌ಟಿಸಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಂ.ಚಂದ್ರಪ್ಪ ಕಿಡಿಕಾರಿದ್ದಾರೆ.
ನಾಯಕತ್ವ ಬದಲಾವಣೆ ಕುರಿತ ಸುದ್ಧಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿರುವ ಸಚಿವ ಎಸ್. ಸುರೇಶ್ ಕಮಾರ್, ರಾಜ್ಯದೆಲ್ಲೆಡೆ ಕೊರೋನಾ ತಾಂಡವವಾಡುತ್ತಿದೆ, ಜನತೆ ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟುವುದನ್ನು ಹೊರತುಪಡಿಸಿ ಬೇರೆ ವಿಚಾರಗಳನ್ನು ಪ್ರಸ್ತಾಪಿಸುವುದು ಸರಿಯಲ್ಲ ಎಂದರು.
ತಮ್ಮ ಇಲಾಖೆಯಲ್ಲಿ ತಾವು ಮುಕ್ತವಾಗಿ ಕಾರ್ಯನಿರ್ವಹಿಸುತ್ತಿದ್ದು, ಯಾರೂ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿರುವ ನಿದರ್ಶನಗಳಿಲ್ಲ. ಯೋಗೀಶ್ವರ್ ನಾಯಕತ್ವ ಬದಲಾವಣೆ ಕುರಿತು ಮಾತನಾಡಿರುವುದಕ್ಕೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅಸಮಾಧಾನ ವ್ಯಕ್ತಪಡಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post