ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ತಾಲೂಕಿನ ನಗರ ಪ್ರದೇಶದಲ್ಲಿ ಕೋವಿಡ್ ಸೋಂಕು ಕೊಂಚ ಕಡಿಮೆಯಾಗಿದ್ದರೂ, ಗ್ರಾಮೀಣ ಭಾಗದಲ್ಲಿ ಹೆಚ್ಚಾಗುತ್ತಿದ್ದರೂ, ತಾಪಂ ಅಧಿಕಾರಿಗಳು ಹಾಗೂ ಪಿಡಿಒಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಕಿಡಿಕಾರಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ಭದ್ರಾವತಿ ನಗರ ಪ್ರದೇಶದಲ್ಲಿ ಸೋಂಕು ನಿಯಂತ್ರಣಕ್ಕೆ ನಗರಸಭೆ, ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇವರನ್ನು ಅಭಿನಂದಿಸುತ್ತೇನೆ.
ಆದರೆ, ಗ್ರಾಮೀಣ ಭಾಗದಲ್ಲಿ ಸೋಂಕು ಹೆಚ್ಚಳವಾಗುತ್ತಿದ್ದರೂ, ತಾಲೂಕು ಪಂಚಾಯ್ತಿ ಅಧಿಕಾರಿಗಳು ಹಾಗೂ ಪಿಡಿಒಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಗ್ರಾಮೀಣ ಭಾಗದಲ್ಲಿ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಸೀಲ್‌ಡೌನ್ ಮಾಡುವುದು, ಕಂಟೈನ್‌ಮೆಂಟ್ ಝೋನ್‌ಗಳಲ್ಲಿ ಸ್ಯಾನಿಟೈಸೇಷನ್, ಜಾಗೃತಿ ಮೂಡಿಸುವುದು ಸೇರಿದಂತೆ ಹಲವು ಕ್ರಮಗಳನ್ನು ಸಮರ್ಪಕವಾಗಿ ಕೈಗೊಳ್ಳುತ್ತಿಲ್ಲ. ಈ ಕಾರ್ಯವೈಖರಿಯನ್ನು ತತಕ್ಷಣವೇ ಸರಿಪಡಿಸಿಕೊಂಡು ಗ್ರಾಮೀಣ ಭಾಗದಲ್ಲಿ ಸೋಂಕು ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಬೇಕು. ಇಲ್ಲದೆ ಹೋದಲ್ಲಿ ಈ ಎಲ್ಲಾ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳೀಗೆ ಪತ್ರ ಬರೆಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಇನ್ನು ನಗರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳೊಂದಿಗೆ ಈ ವಿಚಾರವನ್ನು ಚರ್ಚಿಸಿ ಶಾಸಕರು, ಅಧಿಕಾರಿಗಳಿಗೆ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ಸೂಚಿಸುವಂತೆ ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿಂದ ಡಿಸಿ ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ ಹಗಲಿರುಳು ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಯಾವುದೇ ಅಧಿಕಾರಿಗಳ ಕರ್ತವ್ಯ ಲೋಪ ಸಹಿಸುವುದಿಲ್ಲ. ಸಮರ್ಪಕವಾಗಿ ಕಾರ್ಯ ನಿರ್ವಹಿಸದ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಭರವಸೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post