ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಪ್ರಜಾಪರ ಹಿತಾಸಕ್ತಿಯ ಕಾರ್ಯವೈಖರಿಯನ್ನು ಸಹಿಸದ ಕೆಲ ಕಿಡಿಗೇಡಿಗಳು ಕೋವಿಡ್ ಸೋಂಕಿತರಿಗೆ ಅನುಕೂಲವಾಗಲೆಂದು ನೀಡಲಾಗಿರುವ ಉಚಿತ ಆಂಬ್ಯುಲೆನ್ಸ್ ಸೇವೆಯ ಬಗ್ಗೆ ಇಲ್ಲ ಸಲ್ಲದ ವದಂತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ಇದು ಸತ್ಯಕ್ಕೆ ದೂರವಾದ ಸಂಗತಿ ಹಾಗೂ ಇದೊಂದು ಕಿಡಿಗೇಡಿಗಳ ಕುತಂತ್ರವಾಗಿದೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಲೂಕಿನ ಜನತೆ ಇಂತಹ ವಿಚಾರದಲ್ಲಿ ಯಾವುದೇ ಆತಂಕ ಪಡುವ ಅಗತ್ಯವಿಲ್ಲ, ಅಂಬ್ಯುಲೆನ್ಸ್ ಸೇವೆಯು ಕ್ಷೇತ್ರದಲ್ಲಿ ಸಂಪೂರ್ಣ ಉಚಿತವಾಗಿಯೇ ಕಾರ್ಯ ನಿರ್ವಹಿಸುತ್ತಿದ್ದು, ಕೆಲ ರಾಜಕೀಯ ವಿರೋಧಿಗಳು ಇಂತಹ ವದಂತಿಗಳನ್ನು ಹರಡುವುದರ ಜೊತೆಯಲ್ಲಿ ಕ್ಷೇತ್ರದ ಜನತೆಯ ಆರೋಗ್ಯದ ವಿಚಾರದಲ್ಲಿ ಭಯಭೀತರನ್ನಾಗಿಸುವ ಹುನ್ನಾರದಿಂದ ಇಂತಹ ನೀಚ ಕುಕೃತ್ಯ ಎಸಗುತ್ತಿದ್ದು, ಅಂತಹವರ ವಿರುದ್ಧ ಕೂಡಲೇ ಕಾನೂನಾತ್ಮಕ ಕ್ರಮಕೈಗೊಳ್ಳಲು ಸೂಚಿಸಿದ್ದೇವೆ ಎಂದು ತಿಳಿಸಿದ್ದಾರೆ.

ಕ್ಷೇತ್ರದ ಜನತೆ ಯಾವುದೇ ಆತಂಕಕ್ಕೆ ಒಳಗಾಗದೇ ಹರಿದಾಡುತ್ತಿರುವ ವದಂತಿಗಳಿಗೆ ಕಿವಿಗೊಡದೆ ಕೋವಿಡ್ ಸೋಂಕಿತರಿಗಾಗಿ ನೀಡಲಾಗುತ್ತಿರುವ ಉಚಿತ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ವಿನಂತಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















