ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಪ್ರೇರಣಾ ಎಜುಕೇಶನ್ ಟ್ರಸ್ಟ್ ಮತ್ತು ಸೇವಾಭಾರತಿ ಕರ್ನಾಟಕ ಇವರ ವತಿಯಿಂದ ಸಂಸದ ರಾಘವೇಂದ್ರ ಅವರ ಆಶಯದಂತೆ ನಗರದ ಜೆ.ಹೆಚ್. ಪಟೇಲ್ ಬಡಾವಣೆಯಲ್ಲಿರುವ ವೀರಶೈವ ಜಂಗಮ ಅರ್ಚಕ ಮತ್ತು ಪುರೋಹಿತರ ಸಂಘದಲ್ಲಿ ಕೊರೋನ ವಾರಿಯರ್ಸ್ ಹಾಗೂ ಸಂಕಷ್ಟದಲ್ಲಿರುವವರಿಗೆ ದಿನಸಿ ಕಿಟ್ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ವೀರಶೈವ ಸಮಾಜದ ಅಧ್ಯಕ್ಷ ರಾಜಶೇಖರ್( ಸುಭಾಷ್) ಮತ್ತು ಬಸವೇಶ್ವರಸ್ವಾಮಿ ಪಟ್ಟಣ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಬಳ್ಳೇಕೆರೆ ಸಂತೋಷ್, ವೀರಶೈವ ಜಂಗಮ ಅರ್ಚಕ ಮತ್ತು ಪುರೋಹಿತ ಸಂಘದ ಕಾರ್ಯದರ್ಶಿ ನಾಗರಾಜ್ ಶಾಸ್ತ್ರಿ, ಪ್ರಮುಖರಾದ ಮಹಾಲಿಂಗ ಶಾಸ್ತ್ರಿ, ಚಂದಯ್ಯ, ವಿರೂಪಾಕ್ಷಯ್ಯ, ರುದ್ರಯ್ಯ, ಮಹೇಶ್ವರಯ್ಯ, ಆಶ್ರಯ ಸಮಿತಿ ಅಧ್ಯಕ್ಷ ಶಶಿಧರ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post