ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೊರೋನಾ ಲಾಕ್ ಡೌನ್ ನಿಯಮಾವಳಿಗಳನ್ನು ಉಲ್ಲಂಘಿಸಿ ಜನರನ್ನು ಗುಂಪಾಗಿ ಸೇರಿಸಿಕೊಂಡು ವ್ಯಾಪಾರ ಮಾಡುತ್ತಿದ್ದ ಪ್ರಾವಿಜನ್ ಸ್ಟೋರ್ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಕಟ್ಟೆ ಸುಬ್ಬಣ್ಣ ರಸ್ತೆ ಸರ್ಕಲ್ ಬಳಿಯಿರುವ ಪ್ರಾವಿಜನ್ ಸ್ಟೋರ್ ಮಾಲೀಕರು ಲಾಕ್ ಡೌನ್ ಇರುವ ಮಾಹಿತಿ ತಿಳಿದಿದ್ದರೂ, ಅಂಗಡಿ ತೆರೆದುಕೊಂಡು ಸಾರ್ವಜನಿಕರನ್ನು ಗುಂಪಾಗಿ ಸೇರಿಸಿಕೊಂಡು ವ್ಯಾಪಾರ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಅಂಗಡಿ ಮಾಲೀಕರ ಮೇಲೆ ಸಾಂಕ್ರಮಿಕ ರೋಗ ಕಾಯಿದೆ ಉಲ್ಲಂಘನೆ ಅಡಿಯಲ್ಲಿ ಪ್ರಕರಣ ದಾಖಲಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















