ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಕೋವಿಡ್ ಮಾರಕ ಕಾಯಿಲೆಯಾಗಿದ್ದು, ಅತ್ಯಂತ ಎಚ್ಚರ ವಹಿಸಬೇಕಾಗಿದೆ, ಸ್ಯಾನಿಟೈಸರ್, ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಯಲ್ಲಿ ಅನಗತ್ಯ ಒಡಾಡದೇ ಮನೆಯಲ್ಲಿಯೇ ಯೋಗ, ಧ್ಯಾನ, ಪ್ರಾಣಾಯಾಮ ಮಾಡುವ ಮೂಲಕ ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯವಂತರಾಗಬೇಕು ಎಂದು ಶಾಸಕ ಸಂಗಮೇಶ್ವರ್ ತಿಳಿಸಿದರು.
ಸಿಂಗನಮನೆ, ತಾವರಘಟ್ಟ, ಕಂಬದಾಳ್ ಹೊಸೂರು, ಅರಳೀಕೊಪ್ಪ, ಹಿರಿಯೂರು, ಕಲ್ಲಹಳ್ಳಿ, ಕಾರೇಹಳ್ಳಿ, ಬಾರಂದೂರು ಪಂಚಾಯ್ತಿ ವ್ಯಾಪ್ತಿಯಲ್ಲಿ ಗ್ರಾಮ ಮಟ್ಟದ ಕೋವಿಡ್ ಟಾಸ್ಕ್ ಪೋರ್ಸ್ ಪರಿಶೀಲನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಪ್ರತಿಯೊಂದು ಮನೆಗೂ ಆಹಾರದ ಕಿಟ್ ವಿತರಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಕೋವಿಡ್ ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರಿಗೆ ತಲಾ 1000 ರೂ. ಗಳನ್ನು ಪ್ರೋತ್ಸಾಹ ಧನ ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ಸಂತೋಷ್, ತಾಲ್ಲೂಕು ಆರೋಗ್ಯಾಧಿಕಾರಿ ಅಶೋಕ್, ಇ.ಓ. ರಮೇಶ್, ಗ್ರಾಮಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು, ಸದಸ್ಯರು ಹಾಗೂ ಆಶಾಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದು ಶಾಸಕರನ್ನು ಸನ್ಮಾನಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post