ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಕೋವಿಡ್-19 ಸೋಂಕಿಗೆ ಒಳಗಾಗಿದ್ದ ಟ್ರಾಫಿಕ್-2 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಕೆ.ಬಿ. ರಮೇಶ್ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಸಂಚಾರಿ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ರಮೇಶ್ ಅವರಿಗೆ ಮೇ 14ರಂದು ಕೋವಿಡ್ ಪಾಸಿಟಿವ್ ಬಂದಿದ್ದು, ಒಂದು ವಾರ ಹೋಂ ಐಸೋಲೇಶನ್’ನಲ್ಲಿದ್ದರು. ಆನಂತರ, ಉಸಿರಾಟದ ಸಮಸ್ಯೆಯ ಹಿನ್ನೆಲೆಯಲ್ಲಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ 2 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ.
ಇಲಾಖೆ ಹಾಗೂ ಸಾರ್ವಜನಿಕ ವಲಯದಲ್ಲಿ ಉತ್ತಮ ಹೆಸರು ಗಳಿಸಿದ್ದ ಇವರ ನಿಧನ ನಗರಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ. ರಮೇಶ್ ಅವರ ನಿಧನಕ್ಕೆ ಕಲ್ಪ ಮೀಡಿಯಾ ಹೌಸ್ ಕಂಬನಿ ಮಿಡಿಯುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post