ಕಲ್ಪ ಮೀಡಿಯಾ ಹೌಸ್
ನವದೆಹಲಿ: ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ಜೂನ್ 17 ಅಥವಾ 18 ರಿಂದ ಮೂರು ದಿನ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದು, ಎಲ್ಲ ವಿಚಾರಗಳ ಬಗ್ಗೆ ಚರ್ಚಿಸಲಾಗುವುದು. ಕೊರೋನಾ ಸಂಕಷ್ಟ ಕಾಲದಲ್ಲಿ ಸಿಎಂ ಯಡಿಯೂರಪ್ಪ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಎಂಬುದು ಕೇವಲ ಊಹಾಪೋಹವಷ್ಟೇ ಎಂದು ಹೇಳಿದ್ದಾರೆ.
ನಾಯಕತ್ವದ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಪಕ್ಷದ ನಾಯಕರಿಗೆ ಎಚ್ಚರಿಕೆ ನೀಡಲಾಗಿದೆ. ರಾಜ್ಯ ಪ್ರವಾಸದ ವೇಳೆ ಎಲ್ಲ ವಿಚಾರಗಳ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post