ಬೆಂಗಳೂರು: ಸೆ:29: ರಾಜ್ಯ ಬಿಜೆಪಿ ಘಟಕದಲ್ಲಿ ಭಾರೀ ಗೊಂದಲ ಸೃಷ್ಟಿಸಿರುವ ಸಂಗೊಳ್ಳಿ ರಾಯಣ್ಣ ಬ್ರಿಗೆಡ್ ಮೊದಲ ಬಹಿರಂಗ ರಾಜ್ಯ ಸಮಾವೇಶ ಅಕ್ಟೋಬರ್ 1ರಂದು ಹಾವೇರಿ0ುಲ್ಲಿ ನಡೆಯಲಿದೆ.
ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆಯ ವಿರೋಧದ ನಡುವೆಯೂ ಪಕ್ಷದ ಮುಖಂಡ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ನಡೆಯುತ್ತಿರುವ ಈ ಸಮಾವೇಶ ಹೊಸ ರಾಜಕೀಯ ಧೃವೀಕರಣಕ್ಕೆ ಮುನ್ನುಡಿ ಬರೆಯುವ ಸಾಧ್ಯತೆ ಇದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.
ಹಾವೇರಿ0ು ಮುನ್ಸಿಪಲ್ ಕ್ರೀಡಾಂಗಣದಲ್ಲಿ ಶನಿವಾರ ನಡೆಯಲಿರುವ ಈ ಸಮಾವೇಶಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 1 ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸುವ ಸಾಧ್ಯತೆ ಇದೆ.
Discussion about this post