No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ: ಕೋವಿಡ್-19 ಲಸಿಕಾ ಕೇಂದ್ರಗಳಿಗೆ ಶಾಸಕ ಸಂಗಮೇಶ್ವರ್ ಚಾಲನೆ

kalpa News by kalpa News
June 11, 2021
in ಭದ್ರಾವತಿ
0
ಭದ್ರಾವತಿ: ಕೋವಿಡ್-19 ಲಸಿಕಾ ಕೇಂದ್ರಗಳಿಗೆ ಶಾಸಕ ಸಂಗಮೇಶ್ವರ್ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ನಗರಸಭೆ ವತಿಯಿಂದ 35 ವಾರ್ಡ್‌ಗಳ ವ್ಯಾಪ್ತಿಯಲ್ಲಿ ತೆರೆಯಲಾಗಿರುವ ಕೋವಿಡ್-19 ಲಸಿಕಾ ಕೇಂದ್ರಗಳಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು.

ಇತ್ತೀಚೆಗೆ ನಗರಸಭೆ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಕೋವಿಡ್ ಕಾರ್ಯಪಡೆ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ನಗರಸಭೆ ವ್ಯಾಪ್ತಿಯ 1, 2 ರಿಂದ 3 ಹಾಗೂ 3 ರಿಂದ 4 ವಾರ್ಡ್‌ಗಳು ಒಳಗೊಂಡಂತೆ ಒಟ್ಟು 12 ಲಸಿಕಾ ಕೇಂದ್ರಗಳನ್ನು ಆರಂಭಿಸಲಾಗಿದೆ.

ಲಸಿಕಾ ಕೇಂದ್ರಗಳ ಮಾಹಿತಿ ಹೀಗಿದೆ:
ವಾರ್ಡ್ ನಂ.1, 2 ಮತ್ತು 35ರ ವ್ಯಾಪ್ತಿಯ ಹೆಬ್ಬಂಡಿ, ಕಡದಕಟ್ಟೆ, ಶಿವರಾಮನಗರ, ವಿಶ್ವೇಶ್ವರಾಯ ನಗರ, ಭಂಡಾರಹಳ್ಳಿ, ಜೇಡಿಕಟ್ಟೆ, ಲಕ್ಷ್ಮೀಪುರ, ಕವಲಗುಂದಿ ಹಾಗೂ ಲೋಯರ್ ಹುತ್ತಾ ಪ್ರದೇಶಗಳ ನಿವಾಸಿಗಳಿಗೆ ಅನುಕೂಲವಾಗುವಂತೆ ಬಿ.ಎಚ್ ರಸ್ತೆಯ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಲಸಿಕಾ ಕೇಂದ್ರ ತೆರೆಯಲಾಗಿದೆ. ಕಡದಕಟ್ಟೆ ಎಚ್‌ಪಿಎಸ್ ಶಾಲೆಯ ಸಹ ಶಿಕ್ಷಕ ನಾಗೇಶ್‌ನಾಯ್ಕ, ನ್ಯೂಟೌನ್ ಎಸ್‌ಎವಿ ಶಾಲೆ ಸಹ ಶಿಕ್ಷಕ ಖಂಡೋಜಿರಾವ್, ಪದ್ಮೇನಹಳ್ಳಿ ಎಚ್‌ಪಿಎಸ್ ಶಾಲೆ ಸಹ ಶಿಕ್ಷಕ ಎಚ್. ತಿಮ್ಮಪ್ಪ ಹಾಗೂ ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಲತಾಮಣಿ ಅವರನ್ನು ಸಿಬ್ಬಂದಿಗಳಾಗಿ ನಿಯೋಜಿಸಲಾಗಿದೆ.

ವಾರ್ಡ್ ನಂ.28, 29 ಮತ್ತು 30ರ ವ್ಯಾಪ್ತಿಯ ಹೊಸ ಹಾಗು ಹಳೇ ಸಿದ್ದಾಪುರ, ಸಿದ್ದಾಪುರ ತಾಂಡ, ಹೊಸೂರು, ಸಂಕ್ಲಿಪುರ ಮತ್ತು ಜನ್ನಾಪುರ ಪ್ರದೇಶಗಳ ನಿವಾಸಿಗಳಿಗೆ ಅನುಕೂಲವಾಗುವಂತೆ ಜನ್ನಾಪುರ ಬಸವೇಶ್ವರ ಪ್ರೌಢ ಶಾಲೆಯಲ್ಲಿ ಲಸಿಕಾ ಕೇಂದ್ರ ತೆರೆಯಲಾಗಿದೆ. ರಬ್ಬರ್‌ಕಾಡು ಜಿಎಚ್‌ಪಿಎಸ್ ಶಾಲೆಯ ಸಹ ಶಿಕ್ಷಕ ಶಿವಕುಮಾರ ಸ್ವಾಮಿ, ದೇವರ ನರಸೀಪುರ ಜಿಎಚ್‌ಪಿಎಸ್ ಶಾಲೆಯ ಸಹ ಶಿಕ್ಷಕ ದೇವೇಂದ್ರ ನಾಯ್ಕ, ಹಾಗಲಮನೆ ಜಿಎಚ್‌ಪಿಎಸ್ ಶಾಲೆಯ ಸಹ ಶಿಕ್ಷಕ ನಾರಾಯಣ ನಾಯ್ಕ ಹಾಗೂ ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಲತಾಮಣಿ ಅವರನ್ನು ಸಿಬ್ಬಂದಿಗಳಾಗಿ ನಿಯೋಜಿಸಲಾಗಿದೆ.

ವಾರ್ಡ್ ನಂ.20, 26 ಮತ್ತು 27ರ ವ್ಯಾಪ್ತಿಯ ಸುರಗೀತೋಪು, ಬಾಲಭಾರತಿ, ಬೆಣ್ಣೆ ಕೃಷ್ಣ ಸರ್ಕಲ್, ಆಂಜನೇಯ ಅಗ್ರಹಾರ, ಕೂಲಿ ಬ್ಲಾಕ್ ಶೆಡ್ ಪ್ರದೇಶಗಳ ನಿವಾಸಿಗಳಿಗೆ ಅನುಕೂಲವಾಗುವಂತೆ ನ್ಯೂಟೌನ್ ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಲಸಿಕಾ ಕೇಂದ್ರ ತೆರೆಯಲಾಗಿದೆ. ಚಿಕ್ಕಗೊಪ್ಪೇನಹಳ್ಳಿ ಜಿಎಚ್‌ಪಿಎಸ್ ಸರ್ಕಾರಿ ಸಹ ಶಿಕ್ಷಕ ನಾಗರಾಜ ನಾಯ್ಕ, ವಿಶ್ವಭಾರತಿ ವಿದ್ಯಾಸಂಸ್ಥೆಯ ಎಚ್‌ಪಿಎಸ್ ಶಾಲೆಯ ಸಹ ಶಿಕ್ಷಕ ಟಿ. ಸುರೇಶ್, ಸಿದ್ದಾಪುರ ತಾಂಡ ಜಿಎಚ್‌ಪಿಎಸ್ ಶಾಲೆಯ ಸಹ ಶಿಕ್ಷಕ ಪುರುಷೋತ್ತಮ್ ಮತ್ತು ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಲತಾಮಣಿ ಅವರನ್ನು ಸಿಬ್ಬಂದಿಗಳಾಗಿ ನಿಯೋಜಿಸಲಾಗಿದೆ.

ವಾರ್ಡ್ ನಂ. 4, 5 ಮತ್ತು 6ರ ವ್ಯಾಪ್ತಿಯ ಕನಕಮಂಟಪ ಪ್ರದೇಶ, ಕೋಟೆ ಏರಿಯಾ, ಖಾಜಿ ಮೊಹಲ್ಲಾ, ಖಂಡೇರಾವ್ ಕೊಪ್ಪಲ್, ಸಿದ್ದಾರೂಢ ನಗರ, ಹಳದಮ್ಮ ಬೀದಿ, ಸಣ್ಣ ಮತ್ತು ದೊಡ್ಡ ಕುರುಬರ ಬೀದಿ, ಸೀಗೆಹಟ್ಟಿ, ರಥಬೀದಿ ಪ್ರದೇಶಗಳ ನಿವಾಸಿಗಳಿಗೆ ಅನುಕೂಲವಾಗುವಂತೆ ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಲಸಿಕಾ ಕೇಂದ್ರ ತೆರೆಯಲಾಗಿದೆ. ಕನಕ ವಿದ್ಯಾಸಂಸ್ಥೆ ಎಚ್‌ಪಿಎಸ್ ಶಾಲೆಯ ಸಹ ಶಿಕ್ಷಕರಾದ ಎಚ್. ಶ್ರೀನಿವಾಸ್, ಇಮ್ರಾನ್ ಆಲಿ ಮತ್ತು ಗಾಂಧಿನಗರ ವಿಜಯ ಶಾಲೆಯ ಸಹ ಶಿಕ್ಷಕ ಎಚ್. ಹನುಮಂತಪ್ಪ ಹಾಗು ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಆರ್.ಬಿ ಸತೀಶ್ ಅವರನ್ನು ಸಿಬ್ಬಂದಿಗಳಾಗಿ ನಿಯೋಜಿಸಲಾಗಿದೆ.

ವಾರ್ಡ್ ನಂ.10, 11 ಮತ್ತು 12ರ ವ್ಯಾಪ್ತಿಯ ಕಬಳಿಕಟ್ಟೆ, ಹನುಮಂತ ನಗರ, ಅಶ್ವಥ್ ನಗರ, ಸುಭಾಷ್ ನಗರ ಮತ್ತು ಅಣ್ಣಾ ನಗರ ಪ್ರದೇಶಗಳ ನಿವಾಸಿಗಳಿಗೆ ಅನುಕೂಲವಾಗುವಂತೆ ಸುಭಾಷ್ ನಗರದ ಅಕ್ಕಮಹಾದೇವಿ ವಿದ್ಯಾ ಸಂಸ್ಥೆಯಲ್ಲಿ ಲಸಿಕಾ ಕೇಂದ್ರ ತೆರೆಯಲಾಗಿದೆ. ಅರಳಿಹಳ್ಳಿ ಜ್ಞಾನೋದಯ ಶಾಲೆಯ ಸಹ ಶಿಕ್ಷಕರಾದ ಎಸ್.ಆರ್ ಸ್ವಾಮಿ, ಇ. ದಿನೇಶ್ ಮತ್ತು ಕುಮಾರಿ ನಾರಾಯಣ ಪುರ ಜಿಎಲ್‌ಪಿಎಸ್ ಶಾಲೆಯ ಸಹ ಶಿಕ್ಷಕ ಗದಿಗ ಸ್ವಾಮಿ ಹಾಗು ನಗರಸಭೆ ಕಿರಿಯ ಆರೋಗ್ಯ ನಿರೀಕ್ಷಕಿ ಶೃತಿ ಅವರನ್ನು ಸಿಬ್ಬಂದಿಗಳಾಗಿ ನಿಯೋಜಿಸಲಾಗಿದೆ.

ವಾರ್ಡ್ ನಂ.7, 8 ಮತ್ತು 9ರ ವ್ಯಾಪ್ತಿಯ ದುರ್ಗಿನಗರ, ಕಲಂದರ್ ನಗರ, ಜೈ ಭೀಮಾ ನಗರ, ಅನ್ವರ್ ಕಾಲೋನಿ, ಸೀಗೆಬಾಗಿ, ಭದ್ರಾ ಕಾಲೋನಿ ಮತ್ತು ಕಣಕಟ್ಟೆ ಪ್ರದೇಶದ ನಿವಾಸಿಗಳಿಗೆ ಅನುಕೂಲವಾಗುವಂತೆ ಸೀಗೆಬಾಗಿ ರಾಜೀವ್‌ಗಾಂಧಿ ಬಿ.ಎಡ್ ಕಾಲೇಜಿನಲ್ಲಿ ಲಸಿಕಾ ಕೇಂದ್ರ ತೆರೆಯಲಾಗಿದೆ. ಗುಡ್ಡದನೇರಲಕೆರೆ ಜಿಎಚ್‌ಪಿಎಸ್ ಶಾಲೆಯ ಸಹ ಶಿಕ್ಷಕ ಎಸ್. ಶಂಕರಪ್ಪ, ಕಡದಕಟ್ಟೆ ನವಚೇತನ ಎಚ್‌ಪಿಎಸ್ ಶಾಲೆಯ ಸಹ ಶಿಕ್ಷಕ ನಾಗೇಂದ್ರಪ್ಪ, ಕೆಜಿಆರ್ ಪ್ರೌಢಶಾಲೆ ಸಹ ಶಿಕ್ಷಕ ಮಂಜುನಾಥ ಹಾಗು ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಆರ್.ಬಿ ಸತೀಶ್ ಅವರನ್ನು ಸಿಬ್ಬಂದಿಗಳಾಗಿ ನಿಯೋಜಿಸಲಾಗಿದೆ.

ವಾರ್ಡ್ ನಂ.31, 32, 33 ಮತ್ತು 34ರ ವ್ಯಾಪ್ತಿಯ ಜಿಂಕ್‌ಲೈನ್, ಜನ್ನಾಪುರ, ಹುತ್ತಾಕಾಲೋನಿ ಮತ್ತು ಅಪ್ಪರ್‌ಹುತ್ತಾ ಪ್ರದೇಶಗಳ ನಿವಾಸಿಗಳಿಗೆ ಅನುಕೂಲವಾಗುವಂತೆ ಉಂಬ್ಳೆಬೈಲು ರಸ್ತೆಯಲ್ಲಿರುವ ಸೇಂಟ್ ಚಾರ್ಲ್ಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ ಲಸಿಕಾ ಕೇಂದ್ರ ತೆರೆಯಲಾಗಿದೆ. ಹೊಸೂರು ಸಿದ್ದಾಪುರ ಜಿವಿಎಚ್‌ಪಿಎಸ್ ಶಾಲೆಯ ಸಹ ಶಿಕ್ಷಕರಾದ ಕೆ. ನಾಗರಾಜ, ಇಮ್ರಾನ್ ಆಲಿ, ಭಂಡಾರಹಳ್ಳಿ ಜಿಎಚ್‌ಪಿಎಸ್ ಶಾಲೆಯ ಸಹ ಶಿಕ್ಷಕ ರವಿಕುಮಾರ್ ಹಾಗು ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಲತಾಮಣಿ ಅವರನ್ನು ಸಿಬ್ಬಂದಿಗಳಾಗಿ ನಿಯೋಜಿಸಲಾಗಿದೆ.

ವಾರ್ಡ್ ನಂ. 19, 21 ಮತ್ತು 22ರ ವ್ಯಾಪ್ತಿಯ ಎಂಪಿಎಂ ಆಸ್ಪತ್ರೆ ಏರಿಯಾ, ಎಂಪಿಎಂ 6 ಮತ್ತು 8ನೇ ವಾರ್ಡ್, ಉಜ್ಜನಿಪುರ ಪ್ರದೇಶಗಳ ನಿವಾಸಿಗಳಿಗೆ ಅನುಕೂಲವಾಗುವಂತೆ ಕಾಗದ ನಗರದ ಪಶ್ಚಿಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಸಿಕಾ ಕೇಂದ್ರ ತೆರೆಯಲಾಗಿದೆ. ಅರಳಿಹಳ್ಳಿ ಸರ್ಕಾರಿ ಶಾಲೆಯ ಸಹ ಶಿಕ್ಷಕ ಬಸವರಾಜಪ್ಪ, ಸುಣ್ಣದಹಳ್ಳಿ ಸರ್ಕಾರಿ ಶಾಲೆಯ ಸಹ ಶಿಕ್ಷಕ ಕಮಲರಾಜ್, ಹಳ್ಳಿಕೆರೆ ಜಿಎಚ್‌ಪಿಎಸ್ ಶಾಲೆಯ ಸಹ ಶಿಕ್ಷಕ ಕೆ. ನಾಗರಾಜ್ ಹಾಗು ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಲತಾಮಣಿ ಅವರನ್ನು ಸಿಬ್ಬಂದಿಗಳಾಗಿ ನಿಯೋಜಿಸಲಾಗಿದೆ.

ವಾರ್ಡ್ ನಂ.23, 24 ಮತ್ತು 25ರ ವ್ಯಾಪ್ತಿಯ ತಿಮ್ಲಾಪುರ, ದೊಡ್ಡಗೊಪ್ಪೇನಹಳ್ಳಿ, ಬೊಮ್ಮನಕಟ್ಟೆ, ಹುಡ್ಕೋ ಕಾಲೋನಿ, ಮೂಲೆಕಟ್ಟೆ ಮತ್ತು ಹೊಸಬುಳ್ಳಾಪುರ ಪ್ರದೇಶಗಳ ನಿವಾಸಿಗಳಿಗೆ ಅನುಕೂಲವಾಗುವಂತೆ ಬೊಮ್ಮನಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿ ಶಾಲೆಯಲ್ಲಿ ಲಸಿಕಾ ಕೇಂದ್ರ ತೆರೆಯಲಾಗಿದೆ. ಬೊಮ್ಮನಕಟ್ಟೆ ಎಚ್‌ಪಿಎಸ್ ಶಾಲೆಯ ಸಹ ಶಿಕ್ಷಕರಾದ ಎ. ತಿಪ್ಪೇಸ್ವಾಮಿ, ಜಿ.ಸಿ ವಿಶ್ವನಾಥ್, ವಿಶ್ವ ಭಾರತಿ ಶಾಲೆಯ ಸಹ ಶಿಕ್ಷಕ ಬಿ.ಕೆ ರವೀಶ್ ಹಾಗು ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಲತಾಮಣಿ ಅವರನ್ನು ಸಿಬ್ಬಂದಿಗಳಾಗಿ ನಿಯೋಜಿಸಲಾಗಿದೆ.

ವಾರ್ಡ್ ನಂ.13, 17 ಮತ್ತು 18ರ ವ್ಯಾಪ್ತಿಯ ಭೂತನಗುಡಿ, ನೆಹರು ನಗರ, ಎಂ.ಎಂ ಕಾಂಪೌಂಡ್, ಯಕಿನ್ ಷಾ ಕಾಲೋನಿ, ಸುಣ್ಣದಹಳ್ಳಿ, ಸಾದತ್ ಕಾಲೋನಿ, ಬಸಾಪುರ ಪ್ರದೇಶಗಳ ನಿವಾಸಿಗಳಿಗೆ ಅನುಕೂಲವಾಗುವಂತೆ ನಗರದ ತರೀಕೆರೆ ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಲಸಿಕಾ ಕೇಂದ್ರ ತೆರೆಯಲಾಗಿದೆ. ಸಾದತ್ ಕಾಲೋನಿ ಜಿಯುಎಲ್‌ಪಿಎಸ್ ಶಾಲೆಯ ಸಹ ಶಿಕ್ಷಕರಾದ ದಾದಾಪೀರ್, ಪಿ. ಶಿವಪ್ಪ, ಮೊಸರಹಳ್ಳಿ ಜಿಎಲ್‌ಪಿಎಸ್ ಶಾಲೆಯ ಸಹ ಶಿಕ್ಷಕ ಆರ್. ರಂಗನಾಥ್ ಮತ್ತು ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಆಶಾಲತಾ ಅವರನ್ನು ಸಿಬ್ಬಂದಿಗಳಾಗಿ ನಿಯೋಜಿಸಲಾಗಿದೆ.

ವಾರ್ಡ್ ನಂ.14, 15 ಮತ್ತು 16ರ ವ್ಯಾಪ್ತಿಯ ಭೋವಿ ಕಾಲೋನಿ, ಹೊಸಮನೆ, ಅಶ್ವಥ್ ನಗರ ಬಲಭಾಗ, ಗಾಂಧಿನಗರ ಪ್ರದೇಶಗಳ ನಿವಾಸಿಗಳಿಗೆ ಅನುಕೂಲವಾಗುವಂತೆ ಭೋವಿ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಸಿಕಾ ಕೇಂದ್ರ ತೆರೆಯಲಾಗಿದೆ. ಹೊಸಮನೆ ಜಿಎಚ್‌ಪಿಎಸ್ ಶಾಲೆಯ ಸಹ ಶಿಕ್ಷಕರಾದ ಗಿರಿಧರ, ಮಂಜುನಾಥ್, ಎನ್‌ಎಂಸಿ ಜಿಟಿಎಚ್‌ಪಿಎಸ್ ಶಾಲೆಯ ಸಹ ಶಿಕ್ಷಕ ಲಾರೆನ್ಸ್ ಹಾಗು ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಆಶಾಲತಾ ಅವರನ್ನು ಸಿಬ್ಬಂದಿಗಳಾಗಿ ನಿಯೋಜಿಸಲಾಗಿದೆ.

ಉಳಿದಂತೆ ವಾರ್ಡ್ ನಂ.3ರ ವ್ಯಾಪ್ತಿಯ ಬಿ.ಎಚ್ ರಸ್ತೆ ಎಡ ಮತ್ತು ಬಲ ಭಾಗ, ಚಾಮೇಗೌಡ ಏರಿಯಾ ನಿವಾಸಿಗಳಿಗೆ ಅನುಕೂಲವಾಗುವಂತೆ ಹಾಲಪ್ಪ ವೃತ್ತದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಸಿಕಾ ಕೇಂದ್ರ ತೆರೆಯಲಾಗಿದೆ. ಹಾಲಪ್ಪ ವೃತ್ತ ಜಿಎಚ್‌ಪಿಎಸ್ ಶಾಲೆ ಸಹ ಶಿಕ್ಷಕರಾದ ಎಸ್. ಶಿವಕುಮಾರ್, ಕೆಂಚಪ್ಪ, ಬಸವೇಶ್ವರ ವಿದ್ಯಾಸಂಸ್ಥೆ ಎಚ್‌ಪಿಎಸ್ ಶಾಲೆಯ ಸಹ ಶಿಕ್ಷಕ ಶಶಿಕುಮಾರ್ ಹಾಗು ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಆರ್.ಬಿ ಸತೀಶ್ ಅವರನ್ನು ಸಿಬ್ಬಂದಿಗಳಾಗಿ ನಿಯೋಜಿಸಲಾಗಿದೆ.

ಲಸಿಕಾ ಕೇಂದ್ರಗಳು ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಳ್ಳಲಿವೆ. ಯಾವುದೇ ಮಧ್ಯವರ್ತಿಗಳಿಗೆ ಅವಕಾಶವಿರುವುದಿಲ್ಲ. ಲಭ್ಯತೆ ಆಧಾರ ಮೇಲೆ ಟೋಕನ್ ನೀಡಲಾಗುವುದು. ನಿಗದಿತ ದಿನಾಂಕದಂದು ಮೊದಲು ಬಂದವರಿಗೆ ಲಸಿಕೆ ಹಾಕುವುದು. ಬೇರೆ ವಾರ್ಡ್‌ಗಳ ನಿವಾಸಿಗಳಿಗೆ ಅವಕಾಶ ವಿರುವುದಿಲ್ಲ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiCOVID 19Covid-19 Vaccine CenterKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMLA BK SangameshwarNews in KannadaNews KannadaShimogaShivamoggaShivamogga Newsಉಕ್ಕಿನನಗರಿಕೋವಿಡ್-19ಕೋವಿಡ್-19 ಲಸಿಕಾ ಕೇಂದ್ರಭದ್ರಾವತಿಮಲೆನಾಡು_ಸುದ್ಧಿಶಾಸಕ ಬಿ.ಕೆ. ಸಂಗಮೇಶ್ವರ್ಶಿವಮೊಗ್ಗ_ನ್ಯೂಸ್
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೋವ್ಯಾಕ್ಸಿನ್ ಎರಡನೇ ಡೋಸ್ ಲಭ್ಯವಿರುವ ಆಸ್ಪತ್ರೆಗಳ ಮಾಹಿತಿ ಇಲ್ಲಿದೆ ನೋಡಿ…

Next Post

ಭದ್ರಾವತಿ: ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಗೋಣಿಬೀಡು-ಮಲ್ಲಿಗೇಹಳ್ಳಿ ಸೀಲ್‌ಡೌನ್!

kalpa News

kalpa News

Next Post
ಭದ್ರಾವತಿ: ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಗೋಣಿಬೀಡು-ಮಲ್ಲಿಗೇಹಳ್ಳಿ ಸೀಲ್‌ಡೌನ್!

ಭದ್ರಾವತಿ: ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಗೋಣಿಬೀಡು-ಮಲ್ಲಿಗೇಹಳ್ಳಿ ಸೀಲ್‌ಡೌನ್!

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL