No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Monday, April 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಕ್ಕಳನ್ನು ದುಡಿಮೆಯಿಂದ ಮುಕ್ತಗೊಳಿಸಲು ಹಿಂದೆಂದಿಗಿಂತ ಹೆಚ್ಚು ಶ್ರಮಿಸಬೇಕಿದೆ

ಜೂನ್ 12 : ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 12, 2021
in ಶಿವಮೊಗ್ಗ
0
ಮಕ್ಕಳನ್ನು ದುಡಿಮೆಯಿಂದ ಮುಕ್ತಗೊಳಿಸಲು ಹಿಂದೆಂದಿಗಿಂತ ಹೆಚ್ಚು ಶ್ರಮಿಸಬೇಕಿದೆ

Internet Representational Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಮಕ್ಕಳು ರಾಷ್ಟ್ರದ ಸಂಪತ್ತು. ಈ ಸಂಪತ್ತನ್ನು ಸಂರಕ್ಷಿಸಿ. ಪೋಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು, ಇಂತಹ ಮಕ್ಕಳ ಕನಸು, ಬಾಲ್ಯ ಮತ್ತು ಶಿಕ್ಷಣವನ್ನು ಕಸಿಯುತ್ತಿರುವ ಬಾಲ ಕಾರ್ಮಿಕ ಪದ್ದತಿ ವಿರುದ್ದ ಹೋರಾಡಿ, ಇದನ್ನು ನಿರ್ಮೂಲನೆಗೊಳಿಸುವ ಅವಶ್ಯಕತೆ ಹಿಂದೆಂದಿಗಿಂತ ಇಂದು ಹೆಚ್ಚಾಗಿದೆ.

ಬಾಲ್ಯಾವಸ್ಥೆಯ ಹಾಗೂ ಕಿಶೋರಾವಾಸ್ಥೆಯ ಕಾರ್ಮಿಕ ಪದ್ದತಿಯು ಮಕ್ಕಳನ್ನು ದೈಹಿಕ, ನೈತಿಕ, ಮಾನಸಿಕ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರ ಶೈಕ್ಷಣಿಕ ಅವಕಾಶಗಳನ್ನು ಹಾಗೂ ಬದುಕು ಕಟ್ಟಿಕೊಳ್ಳುವ ಕನಸಿಗೆ ತಡೆಯೊಡ್ಡುತ್ತಿದೆ. ಕಲಿಯುವ ವಯಸ್ಸಿನಲ್ಲಿ ಮಕ್ಕಳು ಶಿಕ್ಷಣದಿಂದ ದೂರ ಉಳಿದು ದುಡಿಮೆಯಲ್ಲಿ ತೊಡಗಿಸಿಕೊಳ್ಳುವುದು ಅತ್ಯಂತ ಕಳವಳಕಾರಿಯಾಗಿದ್ದು, ಶಿಕ್ಷಣ ವಂಚಿತ ಮತ್ತು ದುಡಿಮೆಯಲ್ಲಿ ತೊಡಗಿರುವ ಈ ಮಕ್ಕಳನ್ನು ಮುಖ್ಯವಾಹಿನಿಗೆ ಕರೆ ತರಲು ಕೇಂದ್ರ, ರಾಜ್ಯ ಸರ್ಕಾರಗಳು, ಸರ್ಕಾರೇತರ ಸಂಸ್ಥೆಗಳು ಹಾಗೂ ಸಾರ್ವಜನಿಕರು ಸಂಘಟಿತರಾಗಿ ಪ್ರಯತ್ನಿಸಬೇಕಿದೆ.

ವಿಶ್ವದಲ್ಲಿ 10 ಮಕ್ಕಳಲ್ಲಿ 1 ಮಗು ಬಾಲ ಕಾರ್ಮಿಕನಾಗಿ ದುಡಿಯುತ್ತಿದೆ. 5 ರಿಂದ 17 ರೊಳಗಿನ ಸುಮಾರು 152 ಮಿಲಿಯನ್ ಮಕ್ಕಳು ಬಾಲ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರೆ ಇದರಲ್ಲಿ 73 ಮಿಲಿಯನ್ ಮಕ್ಕಳು ಅಪಾಯಕಾರಿ ಕೆಲಸದಲ್ಲಿ ತೊಡಗಿದ್ದಾರೆ. ಶೇ.71 ಮಕ್ಕಳು ಪ್ರಮುಖವಾಗಿ ಮೀನಿಗಾರಿಕೆ, ಅರಣ್ಯ, ಪ್ರಾಣಿ ಸಾಕಾಣಿಕೆ ಸೇರಿದಂತೆ ಇತರೆ ಕೃಷಿ ಚಟುವಟಿಕೆಗಳಲ್ಲಿ ತೊಡಗಿದ್ದರೆ ಶೇ.17 ಸೇವೆಗಳಲ್ಲಿ ಹಾಗೂ ಶೇ.12 ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.

2011 ರ ಜನಗಣತಿ ಪ್ರಕಾರ ಭಾರತ ದೇಶದಲ್ಲಿ 10.1 ಮಿಲಿಯನ್ ಬಾಲ ಕಾರ್ಮಿಕರಿದ್ದು, ಈ ಪೈಕಿ 5.6 ಗಂಡು ಮತ್ತು 4.5 ಹೆಣ್ಣು ಮಕ್ಕಳಿದ್ದಾರೆ. ಇಂದಿಗೂ ನಾವು ಕೃಷಿ ಚಟುವಟಿಕೆಗಳು, ಗ್ಯಾರೇಜ್, ಹೋಟೆಲ್, ಸಿನೆಮಾ ನಿರ್ಮಾಣ, ಇಟ್ಟಿಗೆ, ಮಂಡಕ್ಕಿ ಭಟ್ಟಿ, ವಿವಿಧ ಕೈಗಾರಿಕೆಗಳು ಹೀಗೆ ನೂರಾರು ಜಾಗಗಳಲ್ಲಿ ಮಕ್ಕಳಿಂದ ದುಡಿಸಿಕೊಳ್ಳುವುದನ್ನು ಕಾಣುತ್ತಲೇ ಸಾಗುತ್ತಿದ್ದೇವೆ.

ವಿಶ್ವ ಬಾಲ ಕಾರ್ಮಿಕತೆ ವಿರೋಧಿ ದಿನ:
ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ಇಂಟರ್‌ನ್ಯಾಷನಲ್ ಲೇಬರ್ ಆರ್ಗನೈಸೇಷನ್)ಯು ಬಾಲ ಕಾರ್ಮಿಕತೆಯ ಜಾಗತಿಕ ವ್ಯಾಪ್ತಿ ಹಾಗೂ ಈ ಪಿಡುಗನ್ನು ನಿರ್ಮೂಲನೆ ಮಾಡಲು ಅಗತ್ಯವಿರುವ ಕ್ರಮಗಳು ಮತ್ತು ಪ್ರಯತ್ನಕ್ಕೆ ಒತ್ತು ನೀಡುವ ಉದ್ದೇಶದಿಂದ 2002 ರ ಜೂನ್ 12 ರಂದು ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಪ್ರಾರಂಭಿಸಿತು.

ಈ ದಿನವು ಸರ್ಕಾರಗಳು, ಉದ್ಯೋಗದಾತರು, ಸಂಘಟನೆಗಳು, ಇಡೀ ನಾಗರೀಕ ಸಮಾಜ ಬಾಲ ಕಾರ್ಮಿಕತೆಯಂತಹ ಬಿಕ್ಕಟ್ಟಿನ ಮೇಲೆ ಬೆಳಕು ಚೆಲ್ಲಿ, ಇದರ ನಿರ್ಮೂಲನೆಗೆ ನಾವೇನು ಮಾಡಬೇಕೆಂಬ ಚಿಂತನೆಯನ್ನು ಹುಟ್ಟಿ ಹಾಕುವ ಪ್ರಯತ್ನ ಮಾಡುತ್ತಿದೆ.

ಕೋವಿಡ್ 19-ಬಾಲ ಕಾರ್ಮಿಕರ ರಕ್ಷಣೆಗೆ ಶ್ರಮ:
ಕೋವಿಡ್ 19 ಪಿಡುಗಿನಿಂದ ಉದ್ಘವಿಸಿರುವ ಆರ್ಥಿಕ ಮತ್ತು ಮಾರುಕಟ್ಟೆ ಬಿಕ್ಕಟ್ಟು ಮತ್ತಷ್ಟು ಬಾಲ ಕಾರ್ಮಿಕತೆಯನ್ನು ಹೆಚ್ಚಿಸಬಹುದೆಂಬ ಸೂಚನೆಯನ್ನು ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆ ಹಾಗೂ ಯೂನಿಸೆಫ್ ನೀಡಿದೆ. ವಿಶ್ವದಾದ್ಯಂತ ಹೆಚ್ಚುವರಿಯಾಗಿ 9 ಮಿಲಿಯನ್ ಮಕ್ಕಳು ಬಾಲ ಕಾರ್ಮಿಕತೆಗೆ ಈಡಾಗುವ ಅಪಾಯ ಇದೆ ಎಂದು ಇವು ಹೇಳುತ್ತಿವೆ. ಹಾಗೂ ಕಳೆದ ಒಂದು ದಶಕದಿಂದ ವಿಶ್ವದಲ್ಲಿ ಬಾಲ ಕಾರ್ಮಿಕತೆಯನ್ನು ಶೇ.38 ರಷ್ಟು ತಗ್ಗಿಸಲು ಸರ್ಕಾರಗಳು ಮತ್ತು ವಿವಿಧ ಸಂಸ್ಥೆಗಳು ಶ್ರಮಿಸಿದ್ದು, ಇದೀಗ ಕೋವಿಡ್ 19 ಪಿಡುಗು ಈ ಪ್ರಗತಿಯನ್ನು ಬುಡಮೇಲು ಮಾಡುವ ಸಂಭವ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪ್ರಸ್ತುತದ ಸನ್ನಿವೇಶದಲ್ಲಿ ಹಿಂದೆಂದಿಗಿಂತ ಹೆಚ್ಚಾಗಿ ಮಕ್ಕಳನ್ನು ಬಾಲಕಾರ್ಮಿಕತೆಯಿಂದ ರಕ್ಷಿಸಲು ಎಲ್ಲರೂ ಶ್ರಮಿಸಬೇಕಿದೆ.

ಬಾಲ ಕಾರ್ಮಿಕ ಪದ್ದತಿ ನಿಷೇಧ ಕಾಯ್ದೆ :
ಬಾಲ ಕಾರ್ಮಿಕತೆಯನ್ನು ಹೋಗಲಾಡಿಸಲು ಸರ್ಕಾರ ಅನೇಕ ಕಾಯ್ದೆ ಕಾನೂನುಗಳನ್ನು ಜಾರಿ ಮಾಡಿದೆ. ಜೊತೆಗೆ ಸಮುದಾಯಕ್ಕೂ ಜವಾಬ್ದಾರಿಯನ್ನು ನೀಡಿದೆ. ಕಾಯ್ದೆಯನ್ವಯ 18 ವಯಸ್ಸಿನ ಒಳಗಿನ ಎಲ್ಲರೂ ಮಕ್ಕಳು. ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ 1986 ರನ್ವಯ ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಹಾಗ ಸಂಸ್ಥೆಯ(ವಾರೆಂಟ್‍ರಹಿತ ಬಂಧಿಸಬಹುದಾದ) ಅಪರಾಧವಾಗಿದೆ. ಶಿಕ್ಷಣಕ್ಕೆ ಮಾರಕವಾಗದಂತೆ ಮಗುವಿನ ಕುಟುಂಬವು ನಡೆಸುವ ಉದ್ದೆಗಳನ್ನು ಹಾಗೂ ಬಾಲನಟ/ನಟಿಯಾಗಿ ಕೆಲಸ ನಿರ್ವಹಿಸಲು ಸೀಮಿತ ಅವಕಾಶವನ್ನು ಮಾತ್ರ ಕಲ್ಪಿಸಲಾಗಿದೆ.

ಈ ಕಾಯ್ದೆಯನ್ವಯ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆಯ ಕಾರ್ಮಿಕರನ್ನು ನಿಯೋಜಿಸಿಕೊಂಡಲ್ಲಿ ಅಂತಹ ಮೊದಲ ಅಪರಾಧಕ್ಕೆ ಮಾಲೀಕರಿಗೆ 6 ತಿಂಗಳಿಂದ 2 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ರೂ.20 ರಿಂದ 50 ಸಾವಿರದವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿರುತ್ತದೆ. ಭಾರತ ಸರ್ವೋಚ್ಚ ನ್ಯಾಯಾಲಯವು ರಿಟ್ ಅರ್ಜಿ(ಸಿವಿಲ್)ಸಂಖ್ಯೆ 465/1986 ರಲ್ಲಿ ನೀಡಿರುವ ನಿರ್ದೇಶನದನ್ವಯ ತಪ್ಪಿತಸ್ಥ ಮಾಲೀಕರು ತಾವು ನಿಯೋಜಿಸಿಕೊಂಡ ಪ್ರತಿ ಮಗುವಿಗೆ ರೂ.20 ಸಾವಿರ ಪರಿಹಾರವನ್ನು ಮಕ್ಕಳ ಪುನರ್ವಸತಿಗೆ ರಚಿಸಲಾದ ಕಲ್ಯಾಣ ನಿಧಿಗೆ ಪಾವತಿಸಬೇಕು.

ಸರ್ಕಾರದ ನಿರ್ದೇಶನದಂತೆ ಕಾರ್ಮಿಕ ಇಲಾಖೆಗಳು ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಗೆ ಅಗತ್ಯ ಕ್ರಮಗಳನ್ನು ವಹಿಸುತ್ತಿದೆ. ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿಯೂ ತಂಡಗಳನ್ನು ರಚಿಸಿಕೊಂಡು ನಿಯಮಿತವಾಗಿ ಕೈಗಾರಿಕೆಗಳು ಹಾಗೂ ಮಕ್ಕಳು ಕೆಲಸ ಮಾಡುವ ಸ್ಥಳಗಳಲ್ಲಿ ದಾಳಿ ನಡೆಸಿ ಪ್ರಕರಣ ದಾಖಲಿಸಿ, ಮಕ್ಕಳನ್ನು ಬಾಲ ಕಾರ್ಮಿಕತೆಯಿಂದ ಮುಕ್ತಗೊಳಿಸುವ ಕೆಲಸ ಮಾಡುತ್ತಿದೆ. ಇದರೊಂದಿಗೆ ಸಾರ್ವಜನಿಕರೂ ತಮಗೆ ಕಾಣ ಬರುವ ಬಾಲ ಕಾರ್ಮಿಕರ ಸುಳಿವಿನ ದೂರನ್ನು ನೀಡಿದರೆ ಅಥವಾ ಸಹಾಯವಾಣಿ 1098 ಕರೆ ಮಾಡಿದಲ್ಲಿ ಪರಿಣಾಮಕಾರಿಯಾಗಿ ಈ ಪದ್ದತಿಯನ್ನು ನಿರ್ಮೂಲನೆಗೊಳಿಸಬಹುದು.

2019-20 ನೇ ಸಾಲಿನಲ್ಲಿ 04 ಬಾಲ ಕಾರ್ಮಿಕರನ್ನು ದುಡಿಯೆಯಿಂದ ಮುಕ್ತಗೊಳಿಸಿ ಮಕ್ಕಳಿಗೆ ಪುನರ್ವಸತಿ ಕಲ್ಪಿಸಲಾಗಿದೆ. ಹಾಗೂ ಮಾಲೀಕರ ವಿರುದ್ದ ಪ್ರಕರಣ ದಾಖಲಿಸಿ, 01 ಪ್ರಕರಣದಲ್ಲಿ ರೂ.20 ಸಾವಿರವನ್ನು ಮಕ್ಕಳ ಪುನರ್ವಸತಿಗಾಗಿ ಕಲ್ಯಾಣ ನಿಧಿಗೆ ಮಾಲೀಕರಿಂದ ಪಾವತಿಸಲಾಗಿದೆ. 2020-21 ನೇ ಸಾಲಿನಲ್ಲಿ 01 ಮಗುವನ್ನು ಬಾಲ ಕಾರ್ಮಿಕತೆಯಿಂದ ಮುಕ್ತಗೊಳಿಸಿ ಪುನರ್ವಸತಿ ಕಲ್ಪಿಸಿ ಮಾಲೀಕನ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಪ್ರತಿ ಮಾಹೆ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ನಿಯೋಜಿತ ತಂಡಗಳು ಬಾಲ ಕಾರ್ಮಿಕರು ಇರಬಹುದಾದ ಪ್ರದೇಶವನ್ನು ತಪಾಸಣೆಗೊಳಿಸಿ ದಾಳಿ ನಡೆಸುತ್ತವೆ. ಬಾಲ ಕಾರ್ಮಿಕ ನಿಷೇಧ ಕಾಯ್ದೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ನಿಯಮಿತವಾಗಿ ವಿವಿಧ ಕಾರ್ಯಕ್ರಮಗಳಾದ ಬೀದಿ ನಾಟಕ, ಕರಪತ್ರ ಹಂಚಿಕೆ, ಫ್ಲೆಕ್ಸ್, ಗೋಡೆ ಬರಹ, ಆಕಾಶವಾಣಿ ಕಾರ್ಯಕ್ರಮಗಳನ್ನು ನೀಡಲಾಗುತ್ತಿದ್ದು, ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಮಾಡುವಲ್ಲಿ ಸಾರ್ವಜನಿಕರೂ ಕೈಜೋಡಿಸಬೇಕೆಂದು ಮನವಿ ಮಾಡುತ್ತೇನೆ.
– ಎಂ.ಪಿ.ವಿಶ್ವನಾಥ್, ಜಿಲ್ಲಾ ಕಾರ್ಮಿಕ ಅಧಿಕಾರಿ

ದೂರು ಅಥವಾ ಸಹಾಯವಾಣಿಗೆ ಕರೆ ಮಾಡಿ :
6 ರಿಂದ 14 ವರ್ಷದೊಳಗಿನ ಮಕ್ಕಳು ಯಾವುದೇ ಉದ್ಯೋಗ ಅಥವಾ ಪ್ರಕ್ರಿಯೆಗಳನ್ನು ಹಾಗೂ18 ವರ್ಷ ವಯಸ್ಸಿನ ಒಳಗಿನ ಕಿಶೋರರು ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಯುವುದು ಕಂಡಲ್ಲಿ ತಕ್ಷಣವೇ ಪೊಲೀಸ್ ಇಲಾಖೆಗೆ ಸಂಪರ್ಕಿಸಿ ದೂರು ನೀಡಬೇಕು ಇಲ್ಲವೇ 1098 ಸಹಾಯವಾಣಿ ಅಥವಾ 08182-248810 ನ್ನು ಸಂಪರ್ಕಿಸಿ ದೂರು ನೀಡಬಹುದು.

ಸಾರ್ವಜನಿಕರು ದುಡಿಯುವ ಮಕ್ಕಳು ಕಂಡರೆ ತಕ್ಷಣವೇ ಪೆನ್ಸಿಲ್ ಪೋರ್ಟಲ್‍ನ www.pencil.gov.in ನಲ್ಲಿ ದೂರು ಸಲ್ಲಿಸಬಹುದು.

ಬಾಲ ಕಾರ್ಮಿಕತೆ ನಿರ್ಮೂಲನೆ ವರ್ಷ :
2021 ನೇ ಸಾಲನ್ನು ಅಂತರಾಷ್ಟ್ರೀಯ ಬಾಲ ಕಾರ್ಮಿಕತೆ ನಿರ್ಮೂಲನೆ ವರ್ಷವನ್ನಾಗಿ ಪರಿಗಣಿಸಲಾಗಿದ್ದು, ಈ ವರ್ಷ ಬಾಲ ಕಾರ್ಮಿಕರನ್ನು ಕಾರ್ಮಿಕತೆಯಿಂದ ಮುಕ್ತಗೊಳಿಸಲು ಅಗತ್ಯವಾದ ಕ್ರಮಗಳಿಗೆ ಒತ್ತು ನೀಡಲು ಕರೆ ನೀಡಲಾಗಿದೆ. ಹಾಗೂ ಸಸ್ಟೈನಬಲ್ ಡೆವೆಲಪ್‍ಮೆಂಟ್ ಗೋಲ್ಸ್(ಎಸ್‍ಡಿಜಿ) ಹಾಗೂ ಇತರೆ ಸಂಸ್ಥೆಗಳು ಮಕ್ಕಳನ್ನು ಬಾಲ ಕಾರ್ಮಿಕರ ರಕ್ಷಣೆ ಮತ್ತು ಬಾಲ ಕಾರ್ಮಿಕತೆ ನಿರ್ಮೂಲನೆಗೆ ಜಾಗತಿಕ ಸಮುದಾಯ ಶೀಘ್ರ ಮತ್ತು ಪರಿಣಾಮಕಾರಿ ಕ್ರಮಗಳನ್ನು ವಹಿಸಬೇಕೆಂದು ಕರೆ ನೀಡಿವೆ. ಜೊತೆಗೆ 2025 ರ ಹೊತ್ತಿಗೆ ಬಾಲ ಕಾರ್ಮಿಕತೆ ಮುಕ್ತ ವಿಶ್ವವನ್ನಾಗಿಸುವ ಗುರಿ ಹೊಂದಲಾಗಿದೆ. ಇದು ಯಶಸ್ವಿಯಾಗಬೇಕಾದರೆ ಸರ್ಕಾರಗಳು, ಸಂಘಟನೆಗಳೊಂದಿಗೆ ಸಮುದಾಯದ ಪಾತ್ರ ಅತಿ ಮುಖ್ಯವಾಗುತ್ತದೆ.

ಮಕ್ಕಳನ್ನು ಬಾಲ ಕಾರ್ಮಿಕತೆಯಿಂದ ಮುಕ್ತಗೊಳಿಸುವಲ್ಲಿ ಸಮುದಾಯದ ಒಂದು ಸಣ್ಣ ಪ್ರಯತ್ನ ಬಹು ದೊಡ್ಡ ಪಾತ್ರ ವಹಿಸಲಿದ್ದು, ಬೆಳೆಯಬೇಕಾದ ಮಕ್ಕಳ ಜೀವನದಲ್ಲಿ ದೊಡ್ಡ ಬದಲಾವಣೆ ತರಲಿದೆ. ಆದ ಕಾರಣ ಮಕ್ಕಳನ್ನು ಈ ಪಿಡುಗಿನಿಂದ ಪಾರು ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರೆ ತಪ್ಪಾಗಲಾರದು.
-ಭಾಗ್ಯ ಎಂ.ಟಿ
ವಾರ್ತಾ ಸಹಾಯಕರು, ವಾರ್ತಾ ಇಲಾಖೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: COVID 19Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಕೋವಿಡ್-19ಮಲೆನಾಡು_ಸುದ್ಧಿವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಗಮನಿಸಿ! ಇನ್ಮುಂದೆ ಆರ್’ಟಿಒ ಪರೀಕ್ಷೆ ಇಲ್ಲದೇ ಡ್ರೈವಿಂಗ್ ಲೈಸೆನ್ಸ್‌ ಪಡೆಯಬಹುದು: ಆದರೆ…

Next Post

ಕಳಪೆ ಕೃಷಿ ಸಾಮಾಗ್ರಿ ಮಾರಾಟ ಮಾಡಿದರೆ ಕಾನೂನು ಕ್ರಮ: ಮೋಹನ್ ಕುಮಾರ್ ಎಚ್ಚರಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಳಪೆ ಕೃಷಿ ಸಾಮಾಗ್ರಿ ಮಾರಾಟ ಮಾಡಿದರೆ ಕಾನೂನು ಕ್ರಮ: ಮೋಹನ್ ಕುಮಾರ್ ಎಚ್ಚರಿಕೆ

ಕಳಪೆ ಕೃಷಿ ಸಾಮಾಗ್ರಿ ಮಾರಾಟ ಮಾಡಿದರೆ ಕಾನೂನು ಕ್ರಮ: ಮೋಹನ್ ಕುಮಾರ್ ಎಚ್ಚರಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತ, ನೃತ್ಯದಂತಹ ಕಲೆಗಳು ಮಕ್ಕಳ ಮನೋವಿಕಾಸಕ್ಕೆ ಪೂರಕ | ಫಾದರ್ ರಾಬರ್ಟ್ ಡಿ’ಮೆಲ್ಲೋ

ಸಂಗೀತ, ನೃತ್ಯದಂತಹ ಕಲೆಗಳು ಮಕ್ಕಳ ಮನೋವಿಕಾಸಕ್ಕೆ ಪೂರಕ | ಫಾದರ್ ರಾಬರ್ಟ್ ಡಿ’ಮೆಲ್ಲೋ

April 27, 2026
ಒಲಿಂಪಿಕ್ ಪದಕದ ಕನಸಿಗೆ ಬಳ್ಳಾರಿಯಲ್ಲಿ ಬುನಾದಿ: IIS ನಿಂದ ಹೈ-ಪರ್ಫಾರ್ಮೆನ್ಸ್ ಟೇಕ್ವಾಂಡೋ ತರಬೇತಿ ಕೇಂದ್ರ ಆರಂಭ

ಒಲಿಂಪಿಕ್ ಪದಕದ ಕನಸಿಗೆ ಬಳ್ಳಾರಿಯಲ್ಲಿ ಬುನಾದಿ: IIS ನಿಂದ ಹೈ-ಪರ್ಫಾರ್ಮೆನ್ಸ್ ಟೇಕ್ವಾಂಡೋ ತರಬೇತಿ ಕೇಂದ್ರ ಆರಂಭ

April 27, 2026
ಸೊರಬ | ಏ.29 ರಂದು ಪಂಡಿತಾರಾಧ್ಯರ ಶಿಲಾಮಂಟಪದ ಅಡಿಗಲ್ಲು ಸಮಾರಂಭ

ಸೊರಬ | ಏ.29 ರಂದು ಪಂಡಿತಾರಾಧ್ಯರ ಶಿಲಾಮಂಟಪದ ಅಡಿಗಲ್ಲು ಸಮಾರಂಭ

April 27, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಎ.28ರ ನಾಳೆ ಭದ್ರಾವತಿಯ ಹಲವು ಕಡೆ ಕರೆಂಟ್ ಇರಲ್ಲ

April 27, 2026
ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ | ಮಾಸ್ಟರ್ ಮೈಂಡ್ ಶಾರಿಕ್’ಗೆ 10 ವರ್ಷ ಜೈಲು ಶಿಕ್ಷೆ

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ | ಮಾಸ್ಟರ್ ಮೈಂಡ್ ಶಾರಿಕ್’ಗೆ 10 ವರ್ಷ ಜೈಲು ಶಿಕ್ಷೆ

April 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL