ಕಲ್ಪ ಮೀಡಿಯಾ ಹೌಸ್
ಶಿಕಾರಿಪುರ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಗರಾಭಿವೃದ್ಧಿ ಒಳಚರಂಡಿ ಇಲಾಖೆಯ ವತಿಯಿಂದ ಒಳಚರಂಡಿ ಕುರಿತು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅಧ್ಯಕ್ಷತೆಯಲ್ಲಿ ಸಭೆಯನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಶಿಕಾರಿಪುರ ತಾಲೂಕಿನ ಜನತೆ ನಿಜವಾಗಿಯೂ ಪುಣ್ಯವಂತರೂ ಪ್ರತಿನಿತ್ಯ ಕುಡಿಯುವ ನೀರು ಮೂಲಭೂತ ಸೌಲಭ್ಯಗಳನ್ನು ಜನರಿಗೆ ನೀಡಲಾಗಿದೆ ಎಂದರು.
ನಗರಾಭಿವೃದ್ಧಿ ಸಚಿವನಾದ ನಾನು ನಮ್ಮ ಕ್ಷೇತ್ರದ ಜನರಿಗೆ ಸರಿಯಾಗಿ ನೀರು ಸರಬರಾಜು ಮಾಡಲಾಗುತ್ತಿಲ್ಲ. ಈ ದೃಷ್ಟಿಯಲ್ಲಿ ತಾಲೂಕಿನ ಜನರು ಪುಣ್ಯ ಮಾಡಿದ್ದಾರೆ ಎಂದರು.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ರಾಜ್ಯದಲ್ಲಿ ನಗರಾಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳ್ಳಿಸಲಾಗುತ್ತಿದೆ. ಶಿಕಾರಿಪುರ ಪಟ್ಟಣದಲ್ಲಿ 530 ಕೋಟಿಯ ಅನುದಾನದಲ್ಲಿ ಒಳಚರಂಡಿ ಕಾಮಗಾರಿ ನಡೆಯುತ್ತಿದೆ ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನೀರಿನ ಕಂದಾಯ ವಸೂಲಿ ಮಾಡುವಲ್ಲಿ ಪುರಸಭೆ ಅಧಿಕಾರಿಗಳು ಹಿಂದೆ ಬಿದಿದ್ದಾರೆ ಪ್ರತಿ ವರ್ಷ ನೀರು ಸರಬರಾಜು ಮಾಡುವಲ್ಲಿ 30 ಲಕ್ಷ ಪುರಸಭೆಗೆ ನಷ್ಟವಾಗಿದೆ ಅದರಿಂದ ಕಂದಾಯವನ್ನು ಕಟ್ಟುನಿಟ್ಟಾಗಿ ವಸೂಲಿ ಮಾಡಲು ಸೂಚಿಸಿದರು.
ಶಿಕಾರಿಪುರ ತಾಲೂಕಿಗೆ ನಮ್ಮ ಇಲಾಖೆ ವತಿಯಿಂದ ಬೇಕಾದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಶಿಕಾರಿಪುರ ಪಟ್ಟಣವನ್ನು ಮಾದರಿ ನಗರವಾಗಿಸುವಲ್ಲಿ ಶ್ರಮ ವಹಸಿ ಎಂದರು.
ಈ ಸಂದರ್ಭದಲ್ಲಿ ಸಂಸದ ಬಿ.ವೈ ರಾಘವೇಂದ್ರ, ಜಿಲ್ಲಾಧಿಕಾರಿ ಶಿವಕುಮಾರ್, ಪುರಸಭೆ ಅಧ್ಯಕ್ಷೆ ಲಕ್ಷ್ಮಿ ಮಹಾಲಿಂಗಪ್ಪ, ನಗರಾಭಿವೃದ್ಧಿ ಅಧಿಕಾರಿಗಳು ಸಿಬ್ಬಂದಿಗಳು ಪುರಸಭಾ ಸದಸ್ಯರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post