No Result
View All Result
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji
English Articles

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

by ಕಲ್ಪ ನ್ಯೂಸ್
April 13, 2026
0

Kalpa Media House  |  Mysuru | Stressing the importance of dharma, Sri Mad Yadugiri Yatiraja Jeeyar Swamiji of Sri Yatiraja...

Read moreDetails
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
  • Advertise With Us
  • Grievances
  • About Us
  • Contact Us
Monday, April 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಿಎಂಗೆ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 12, 2021
in ಶಿವಮೊಗ್ಗ
0
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಿಎಂಗೆ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.

ಕಳೆದ ವರ್ಷ ಹಾಗೂ ಪ್ರಸ್ತುತ ವರ್ಷದಲ್ಲಿ ರೈತಾಪಿ ವರ್ಗವು ಕೊರೋನಾ ಸಂಕಷ್ಟದಲ್ಲಿ ಸಿಲುಕಿ ರೈತರು ಬೆಳೆದ ಬೆಳೆಗಳು ಮಾರಾಟವಾಗದೆ, ಉತ್ತಮ ಬೆಲೆ ಸಿಗದೆ ತೀವ್ರ ನಷ್ಟ ಅನುಭವಿಸಿದ್ದು, ಈಗಾಗಲೇ ಮುಂಗಾರು ಪ್ರಾರಂಭವಾಗಿದ್ದು, ಭಿತ್ತನೆ ಕಾರ್ಯಗಳು ಭರದಿಂದ ಸಾಗಲು, ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಸಮರ್ಪಕವಾಗಿ ಸರ್ಕಾರದಿಂದ ವಿತರಿಸಬೇಕು. ಹಾಗೂ ರೈತರ ಸಹಕಾರಿ ಸಂಘಗಳ ಸಾಲವನ್ನು ಮನ್ನಾ ಮಾಡುವುದರೊಂದಿಗೆ ಹೊಸ ಸಾಲವನ್ನು ತ್ವರಿತಗತಿಯಲ್ಲಿ ವಿತರಿಸಲು ಸಹಕಾರಿ ಸಂಘಗಳಿಗೆ ಸೂಚಿಸಬೇಕು ಎಂದು ಮನವಿ ಮಾಡಿದರು.

ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳದಿಂದ ಸರಕು ಸಾಗಾಣಿಕೆಯಲ್ಲಿ ವ್ಯತ್ಯಯಗಳಾಗಿ ಅಗತ್ಯ ವಸ್ತುಗಳು ಕೂಡ ದುಬಾರಿಯಾಗಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಛಾ ತೈಲದ ಬೆಲೆ ಕಡಿಮೆ ಇದ್ದರೂ ಕೊರೋನಾದಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಬೆಲೆ ಹೆಚ್ಚಳ ಮಾಡುತ್ತಿದ್ದು, ರಾಜ್ಯದ ಜನರ ಹಿತದೃಷ್ಟಿಯಿಂದ ತಾವು ಎಕ್ಸೈಜ್ ಶುಲ್ಕವನ್ನು ಕೂಡಲೇ ಕಡಿಮೆ ಮಾಡಿ ಜನಸಾಮಾನ್ಯರಿಗೆ ನೆರವಾಗಬೇಕು ಎಂದು ಆಗ್ರಹಿಸಿದರು.

ಸರ್ಕಾರ ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ ಮೂವತ್ತು ಪೈಸೆ ಹೆಚ್ಚಳ ಮಾಡಿರುವುದು, ರಾಜ್ಯದ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಆದೇಶವನ್ನು ಕೂಡಲೇ ಹಿಂಪಡೆದು ಇಂತಹ ವಿಪತ್ತು ಪರಿಸ್ಥಿತಿಯಲ್ಲಿ ರಾಜ್ಯದ ಜನತೆಗೆ ವಿದ್ಯುತ್ ಶುಲ್ಕ ಪಾವತಿಸಲು ಮೂರರಿಂದ ನಾಲ್ಕು ತಿಂಗಳುಗಳ ಕಾಲಾವಕಾಶ ನೀಡಬೇಕು. ಇದರ ಮೇಲೆ ಯಾವುದೇ ಬಡ್ಡಿಗಳನ್ನು ವಿಧಿಸದಂತೆ ಆದೇಶಿಸಬೇಕು ಎಂದು ಒತ್ತಾಯಿಸಿದರು.

ಕೊರೋನಾ ಎರಡನೇ ಅಲೆಯ ಜೊತೆಗೆ ಮೂರನೇ ಅಲೆಯ ಮುನ್ಸೂಚನೆಗಳು ಕಂಡು ಬಂದಿದ್ದು, ಕೊರೋನಾ ನಿಯಂತ್ರಿಸಲು ಇನ್ನೂ ಹೆಚ್ಚಿನ ಕ್ರಮವನ್ನು ತೆಗೆದುಕೊಳ್ಳುವುದಲ್ಲದೆ, ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಆಕ್ಸಿಜನ್, ವೆಂಟಿಲೇಟರ್, ಬೆಡ್‌ಗಳನ್ನು ಹೆಚ್ಚಿಸುವುದು ಜೊತೆಗೆ ಸಿಬ್ಬಂದಿ ಕೊರತೆ ಇರುವ ಆಸ್ಪತ್ರೆಗಳಿಗೆ ಕೂಡಲೇ ಹೊಸ ಸಿಬ್ಬಂದಿಗಳನ್ನು ನೇಮಿಸುವುದು, ಕೊರೋನಾ ವಾರಿಯರ್ಸ್‌ಗಳಾಗಿ ಸೇವೆ ಸಲ್ಲಿಸುತ್ತಿರುವ ಸ್ಟಾಫ್ ನಸಗಳನ್ನು ಖಾಯಂಗೊಳಿಸುವುದು, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ, ಪೋಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಹೆಚ್ಚಿನ ವಿಶೇಷ ಸವಲತ್ತುಗಳನ್ನು ಒದಗಿಸಬೇಕು ಎಂದು ಹೇಳಿದರು.
ಕೊರೋನಾ ನಿಯಂತ್ರಿಸಲು ಲಸಿಕೆ ಅವಶ್ಯಕವಾಗಿದ್ದು, ಮಾನ್ಯ ಪ್ರಧಾನಮಂತ್ರಿಗಳ ಆಶಯದಂತೆ ಜೂನ್ 21ರಿಂದ ಎಲ್ಲರಿಗೂ ಉಚಿತ ಲಸಿಕೆ ವಿತರಿಸಲು ಘೋಷಣೆ ಮಾಡಿದ್ದು, ರಾಜ್ಯದಲ್ಲೂ ಸಹಾ ಸಮರ್ಪಕವಾಗಿ ಎಲ್ಲರಿಗೂ ಉಚಿತ ಲಸಿಕೆ ಸಿಗಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.

ಕೊರೋನಾ ಲಾಕ್‌ಡೌನ್‌ನಿಂದ ಶ್ರೀಸಾಮಾನ್ಯನ ಜೀವನೋಪಾಯದ ಉದ್ಯಮಗಳು ಸ್ಥಗಿತಗೊಂಡಿದ್ದು, ಈಗಾಗಲೇ ಎರಡು ಹಂತದ ಪ್ಯಾಕೇಜ್‌ಗಳನ್ನು ಘೋಷಿಸಿದ್ದು, ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಕ್ರಮ ಕೈಗೊಳ್ಳುವ ಜೊತೆಗೆ, ಜಿಲ್ಲೆಯಲ್ಲಿ ಮತ್ತೆ ಲಾಕ್‌ಡೌನ್ ಮುಂದುವರೆದಿದೆ. ಇನ್ನು ಎಷ್ಟೋ ಅಸಂಘಟಿತ ಸಮುದಾಯಗಳಿಗೆ ಮೊದಲ ಹಾಗೂ ಎರಡನೇ ಹಂತದ ಪ್ಯಾಕೇಜ್‌ಗಳನ್ನು ಘೋಷಣೆ ಮಾಡಿರುವುದಿಲ್ಲ. ಕೂಡಲೇ ರಾಜ್ಯದ ಎಲ್ಲಾ ವರ್ಗದ ಜನತೆಗೆ ವಿಶೇಷ ಪ್ಯಾಕೇಜ್ ಘೋಷಿಸುವುದರೊಂದಿಗೆ ಸರ್ಕಾರ ಜನರ ಜೀವ ಮತ್ತು ಜೀವನ ರಕ್ಷಣೆಗೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಖಾಸಗಿ ಶಿಕ್ಷಣ ಸಂಸ್ಥೆಗಳು ಡೊನೇಷನ್ ಹಾಗೂ ಹಲವಾರು ರೀತಿಯಲ್ಲಿ ಶುಲ್ಕವನ್ನು ವಸೂಲಿ ಮಾಡುವುದರ ಮುಖಾಂತರ ಪೋಷಕರಿಗೆ ಕಿರುಕುಳ ನೀಡುತ್ತಿದ್ದು, ಇಂತಹ ಶುಲ್ಕಗಳನ್ನು ಸರಳೀಕರಣಗೊಳಿಸಿ, ಪೋಷಕರಿಗೆ ಹೊರೆಯಾಗದಂತೆ ಸರ್ಕಾರ ನಿರ್ದೇಶನ ನೀಡುವುದರೊಂದಿಗೆ, ಅನುದಾನ ರಹಿತ ಶಿಕ್ಷಣ ಸಂಸ್ಥೆಯ ಶಿಕ್ಷಕ ಶಿಕ್ಷಕಿಯರು ಹಾಗೂ ನೌಕರರಿಗೆ ಸರ್ಕಾರದಿಂದ ಸಹಾಯಧನ ಘೋಷಿಸಬೇಕು ಎಂದರು.

ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ವಿಚಾರದಲ್ಲಿ ಶಿಕ್ಷಣ ಸಚಿವರು ದಿನಕ್ಕೊಂದು ಗೊಂದಲದ ಹೇಳಿಕೆ ನೀಡುತ್ತಿದ್ದು, ಇದರಿಂದ ಮಕ್ಕಳು ಮತ್ತು ಪೋಷಕರು ಆತಂಕಕ್ಕೀಡಾಗಿದ್ದು, ಸರ್ಕಾರ ಕೂಡಲೇ ಮಕ್ಕಳ ಭವಿಷ್ಯ ಹಾಗೂ ಆರೋಗ್ಯದ ಜಾಗೃತಿಯ ಜೊತೆಗೆ ಉತ್ತಮ ತೀರ್ಮಾನ ಕೈಗೊಳ್ಳಬೇಕು. ತಪ್ಪಿದಲ್ಲಿ ಯುವ ಕಾಂಗ್ರೆಸ್‌ನಿಂದ ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯ ಎಂದು ಎಚ್ಚರಿಕೆ ನೀಡಲಾಗಿದೆ.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್. ಪಿ. ಗಿರೀಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ರಂಗನಾಥ್, ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಆರ್ ಕಿರಣ್, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್, ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಈ.ಟಿ ನಿತಿನ್, ದಕ್ಷಿಣ ಬ್ಲಾಕ್ ಕುಮರೇಶ್ ಇತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CM YadiyurappaCoronaKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga District Youth CongressShivamogga Newsಕೊರೋನಾಮಲೆನಾಡು_ಸುದ್ಧಿಮುಖ್ಯಮಂತ್ರಿ ಯಡಿಯೂರಪ್ಪಶಿವಮೊಗ್ಗಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ಶಿವಮೊಗ್ಗ_ನ್ಯೂಸ್
Share197Tweet123Send
Previous Post

ವೈದ್ಯಕೀಯ ಸಿಬ್ಬಂದಿಗಳ ಹಾಜರಾತಿ ನಿರ್ವಹಣೆಗೆ ಜಿಯೋಫೆನ್ಸಿಂಗ್ : ಸಚಿವ ಸುಧಾಕರ್

Next Post

ಉದ್ದೇಶಿತ ಶಿವಮೊಗ್ಗ ವಿಮಾನ ನಿಲ್ದಾಣದ ವಿನ್ಯಾಸ ಹೇಗಿದೆ ಗೊತ್ತಾ? ಇಲ್ಲಿದೆ ನೋಡಿ ವೀಡಿಯೋ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಉದ್ದೇಶಿತ ಶಿವಮೊಗ್ಗ ವಿಮಾನ ನಿಲ್ದಾಣದ ವಿನ್ಯಾಸ ಹೇಗಿದೆ ಗೊತ್ತಾ? ಇಲ್ಲಿದೆ ನೋಡಿ ವೀಡಿಯೋ

ಉದ್ದೇಶಿತ ಶಿವಮೊಗ್ಗ ವಿಮಾನ ನಿಲ್ದಾಣದ ವಿನ್ಯಾಸ ಹೇಗಿದೆ ಗೊತ್ತಾ? ಇಲ್ಲಿದೆ ನೋಡಿ ವೀಡಿಯೋ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
ಧರ್ಮ ರಹಿತ ಸಮಾಜದ ಕಲ್ಯಾಣ ಅಸಾಧ್ಯ- ಧರ್ಮಪಾಲನೆ  ಸರ್ವರ ಕರ್ತವ್ಯ: ಯದುಗಿರಿ ಯತಿರಾಜ ಜೀಯರ್ ಸ್ವಾಮೀಜಿ

ಧರ್ಮ ರಹಿತ ಸಮಾಜದ ಕಲ್ಯಾಣ ಅಸಾಧ್ಯ- ಧರ್ಮಪಾಲನೆ  ಸರ್ವರ ಕರ್ತವ್ಯ: ಯದುಗಿರಿ ಯತಿರಾಜ ಜೀಯರ್ ಸ್ವಾಮೀಜಿ

April 13, 2026
ತ್ರಿಪುರ | ಇದು ಆಗ್ನೇಯ ಏಷ್ಯಾಕ್ಕೆ ಪ್ರವೇಶ ದ್ವಾರ | ಹೂಡಿಕೆ – ಅಭಿವೃದ್ಧಿಗೆ ಪ್ರಶಸ್ತ ಸ್ಥಳ

ತ್ರಿಪುರ | ಇದು ಆಗ್ನೇಯ ಏಷ್ಯಾಕ್ಕೆ ಪ್ರವೇಶ ದ್ವಾರ | ಹೂಡಿಕೆ – ಅಭಿವೃದ್ಧಿಗೆ ಪ್ರಶಸ್ತ ಸ್ಥಳ

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!