ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿರುವ ನಟ ಸಂಚಾರಿ ವಿಜಯ್ ಅವರ ಸ್ಥಿತಿ ಸುಧಾರಿಸಿದ್ದು, ಅವರು ಔಟ್ ಆಫ್ ಡೇಂಜರ್ ಎಂದು ನಟ ನೀನಾಸಂ ಸತೀಶ್ ಹೇಳಿದ್ದಾರೆ.
ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರೊಂದಿಗೆ ಚರ್ಚೆ ನಡೆಸಿದ ನಂತರ ಅವರು ಮಾತನಾಡಿದರು.
ವಿಜಯ್’ಗೆ ಈಗಾಗಲೇ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಅನಸ್ತೇಷಿಯಾ ನೀಡಿರುವ ಕಾರಣ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಉಳಿದಂತೆ ಅವರ ಪಲ್ಸ್ ರೇಟ್ ಸಹ ಸಹಜ ಸ್ಥಿತಿಯಲ್ಲಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ವೈದ್ಯರು ಹೇಳುವಂತೆ ಹಾಗೂ ನಾನು ಕಣ್ಣಾರೆ ಕಂಡಂತೆ ಪ್ರಾಣಾಪಾಯದಿಂದ ಅವರು ಪಾರಾಗಿದ್ದಾರೆ ಎಂದಿದ್ದಾರೆ.
ವಿಜಯ್ ಮೊದಲಿನಿಂದಲೂ ಸಮಾಜಕ್ಕೆ ಹಾಗೂ ಕಷ್ಟದಲ್ಲಿರುವವರಿಗೆ ಸ್ಪಂದಿಸುತ್ತಲೇ ಬಂದಿದ್ದಾನೆ. ಈಗ ಲಾಕ್ ಡೌನ್ ಸಮಯದಲ್ಲೂ ಸಹ ಲೆಕ್ಕವಿಲ್ಲದಷ್ಟು ಮಂದಿಗೆ ಸಹಾಯ ಮಾಡಿದ್ದಾನೆ. ಅವನು ಮಾಡಿರುವ ಒಳ್ಳೆಯ ಕೆಲಸಗಳೇ ಅವನನ್ನು ರಕ್ಷಿಸುತ್ತದೆ. ದಯವಿಟ್ಟು ಅವನ ಆರೋಗ್ಯ ಕುರಿತಾಗಿ ಯಾರೂ ಊಹಾಪೋಹಗಳನ್ನು ಹರಡಿಸಬೇಡಿ ಎಂದು ಮನವಿ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post